Telangana Polls; ತೆಲಂಗಾಣ ಚುನಾವಣೆಗೆ ಬಿಜೆಪಿ ಜತೆ ಟಿಡಿಪಿ ಮೈತ್ರಿ?
ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾದ ಚಂದ್ರಬಾಬು ನಾಯ್ಡು
Team Udayavani, Jun 4, 2023, 10:33 AM IST
ನವದೆಹಲಿ: ತೆಲುಗು ದೇಶಂ ಪಕ್ಷದ ಮುಖ್ಯಸ್ಥ,ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದರು.
ದೆಹಲಿಯಲ್ಲಿರುವ ನಿವಾಸದಲ್ಲಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಗೃಹ ಸಚಿವ ಅಮಿತ್ ಶಾ ಅವರನ್ನು ಚಂದ್ರಬಾಬು ನಾಯ್ಡು ಭೇಟಿಯಾಗಿ ಸುಮಾರು 40 ನಿಮಿಷಕ್ಕೂ ಹೆಚ್ಚು ಕಾಲ ಸಭೆ ನಡೆಸಿದರು.
ಈ ವರ್ಷ ನಡೆಯಲಿರುವ ತೆಲಂಗಾಣ ವಿಧಾನಸಭೆ ಚುನಾವಣೆ ಮತ್ತು ಮುಂದಿನ ವರ್ಷ ಲೋಕಸಭೆ ಚುನಾವಣೆಗೆ ಬಿಜೆಪಿ ಮತ್ತು ಟಿಡಿಪಿ ಮೈತ್ರಿ ಮಾಡಿಕೊಳ್ಳಬಹುದು ಎಂದು ಮೂಲಗಳು ತಿಳಿಸಿವೆ.
ಟಿಡಿಪಿ 2014 ರಲ್ಲಿ ಎನ್‌ಡಿಎ ಭಾಗವಾಗಿತ್ತು ಆದರೆ 2019 ರ ಚುನಾವಣೆಯ ಮೊದಲು ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನದ ವಿಚಾರವಾಗಿ ಮಾರ್ಚ್ 2018 ರಲ್ಲಿ ಆಡಳಿತ ಮೈತ್ರಿಕೂಟವನ್ನು ತ್ಯಜಿಸಿತು.
ಟಿಡಿಪಿ ಸಂಸ್ಥಾಪಕ ಮತ್ತು ಆಂಧ್ರಪ್ರದೇಶದ ಏಳು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದ ಎನ್‌ಟಿ ರಾಮರಾವ್ ಅವರನ್ನು ಪ್ರಧಾನಿ ಮೋದಿ ಅವರು ಕಳೆದ ತಿಂಗಳು ತಮ್ಮ ರೇಡಿಯೊ ಕಾರ್ಯಕ್ರಮ ಮನ್ ಕಿ ಬಾತ್‌ನಲ್ಲಿ ಅವರ ಜನ್ಮ ವಾರ್ಷಿಕೋತ್ಸವದಂದು ನೆನಪಿಸಿಕೊಂಡರು.
2019 ರ ಚುನಾವಣೆಯ ನಂತರ ಆಜಾದಿ ಕಾ ಅಮೃತ್ ಮಹೋತ್ಸವದ ಸಂದರ್ಭದಲ್ಲಿ ಚಂದ್ರಬಾಬು ನಾಯ್ಡು ಒಮ್ಮೆ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಕ್ಯಾಬ್ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್ ಎಂಜಿನಿಯರ್ ಸಾವು
Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ
Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!
Christmas: ಸಿಲಿಕಾನ್ ಸಿಟಿಯಲ್ಲಿ ಕಳೆಗಟ್ಟಿದ ಕ್ರಿಸ್‌ಮಸ್ ಸಂಭ್ರಮ
INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.