ಕಾಲೇಜು ಹುಡುಗಿಯರಿಗೆ ಅಶ್ಲೀಲ ಚಿತ್ರ : ಶಿಕ್ಷರಿಬ್ಬರ ವಿರುದ್ಧ ಕೇಸು
Team Udayavani, Feb 28, 2017, 4:11 PM IST
ಹೈದರಾಬಾದ್ : ತಮ್ಮ ವಿದ್ಯಾರ್ಥಿನಿಯರಿಗೆ ವಾಟ್ಸಾಪ್ ಮೂಲಕ ಅಶ್ಲೀಲ ಚಿತ್ರ ಹಾಗೂ ಸಂದೇಶಗಳನ್ನು ರವಾನಿಸುತ್ತಿದ್ದ ಖಾಸಗಿ ಇಂಜಿನಿಯರಿಂಗ್ ಕಾಲೇಜಿನ ಇಬ್ಬರು ಸಹಾಯಕ ಪ್ರೊಫೆಸರ್ಗಳು ಮತ್ತು ಓರ್ವ ಕಚೇರಿ ಸಹಾಯಕನ ವಿರುದ್ಧ ರಾಚಕೊಂಡ ಪೊಲೀಸರು ಕೇಸು ದಾಖಲಿಸಿಕೊಂಡಿದ್ದು ಈ ಮೂವರನ್ನು ಬಂಧಿಸುವ ಸಿದ್ಧತೆಯಲ್ಲಿದ್ದಾರೆ.
ವಿದ್ಯಾರ್ಥಿನಿಯರಿಗೆ ಅಶ್ಲೀಲ ಚಿತ್ರ ಹಾಗೂ ಸಂದೇಶಗಳನ್ನು ವಾಟ್ಸಾಪ್ ಮೂಲಕ ರವಾನಿಸುತ್ತಿದ್ದ ಇಲೆಕ್ಟ್ರಾನಿಕ್ ಆ್ಯಂಡ್ ಕಮ್ಯುನಿಕೇಶನ್ ವಿಭಾಗದ ಸಹಾಯಕ ಪೊಫೆಸರ್ಗಳಾದ ಸೈದಿ ರೆಡ್ಡಿ ಮತ್ತು ಗೋಪಿ ಹಾಗೂ ಕಚೇರಿ ಸಹಾಯಕ ಉಸ್ಮಾನ್ ಎಂಬಾತನನ್ನು ಕೆಲಸದಿಂದ ತೆಗೆದು ಹಾಕಲಾಗಿದೆ ಎಂದು ಕಾಲೇಜಿನ ಹಿರಿಯ ಅಧಿಕಾರಿ ತಿಳಿಸಿದ್ದಾರೆ.
ಈ ಪ್ರೊಫೆಸರುಗಳು ಈಚೆಗೆ ಕೆಲ ಕಾಲದಿಂದ ಲೈಂಗಿಕ ಕಿರುಕುಳ ನೀಡುತ್ತಿದ್ದು ಇವರ ವಿರುದ್ಧ ಕಠಿನ ಕ್ರಮ ತೆಗೆದುಕೊಳ್ಳಬೇಕೆಂದು ವಿದ್ಯಾರ್ಥಿನಿಯರು ಒತ್ತಾಯಿಸಿದ್ದಾರೆ. ಇವರ ದೂರಿನ ಮೇರೆಗೆ ಮೂವರೂ ಆರೋಪಿಗಳನ್ನು ಇಷ್ಟರಲ್ಲೇ ಬಂಧಿಸಲಾಗುವುದು ಎಂದು ಅಬ್ದುಲ್ಲಾಪುರ್ಮೇತ್ ಠಾಣಾಧಿಕಾರಿ ಬಿ ಶ್ರೀನು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.