ಸಹೋದರಿಯ ರಕ್ಷಣೆಗೆ ನಿಂತವನ ಮೇಲೆ ಪುಂಡರಿಂದ ಹಲ್ಲೆ ..!
ಮೂವರು ಯುವಕರ ಮೇಲೆ ಐಪಿಸಿ ಸೆಕ್ಶನ್ 307, 354ಡಿ, 509, 34 ಪ್ರಕರಣ ದಾಖಲು
Team Udayavani, Feb 27, 2021, 1:47 PM IST
ನವ ದೆಹಲಿ : ತನ್ನ ಸಹೋದರಿಯನ್ನು ಹಿಂಬಾಲಿಸಿ, ಆಕೆನ್ನು ಅಸಭ್ಯವಾಗಿ ಅವಮಾನಿಸಿದ ಮೂವರು ಯುವಕರನ್ನು ವಿರೋಧಿಸಿದಕ್ಕಾಗಿ ಹುಡುಗನನ್ನು ಹಿಗ್ಗಾಮುಗ್ಗಾವಾಗಿ ಥಳಿಸಿ, ಆತನ ಹೊಟ್ಟೆಗೆ ಇರಿದ ಘಟನೆ ಆಗ್ನೇಯ ದೆಹಲಿಯ ಕಲ್ಕಾಜಿ ಎಂಬಲ್ಲಿ ನಡೆದಿದೆ.
ಕಲ್ಕಾಜಿಯ ಶಾಲೆಯೊಂದರ ಬಳಿ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದ್ದು, ಗಾಯಗೊಂಡ, ಕಲ್ಕಾಜಿ ನಿವಾಸಿ 17 ವರ್ಷದ ಹುಡುಗನನ್ನು ಏಮ್ಸ್ ನ ಟ್ರಾಮಾ ಸೆಂಟರ್ ಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
“ನಾನು ನನ್ನ ಸಹೋದರನೊಂದಿಗಿದ್ದಾಗ, ಮೂವರು ಯುವಕರು ನನ್ನನ್ನು ಹಿಂಬಾಲಿಸಿದರು ಹಾಗೂ ಅಸಭ್ಯವಾಗಿ ವರ್ತಿಸಿದ್ದಾರೆ. ನನ್ನ ಸಹೋದರ ಅದನ್ನು ವಿರೋಧಿಸಿದಾಗ, ಅವರು ನನ್ನ ಸಹೋದರನನ್ನು ಥಳಿಸುವುದಕ್ಕಾರಂಭಿಸಿದರು, ಮೂವರಲ್ಲಿ ಒಬ್ಬ ಸಹೋದರನ ಹೊಟ್ಟೆಗೆ ಇರಿದು ಘಟನೆ ನಡೆದ ಸ್ಥಳದಿಂದ ಪರಾರಿಯಾಗಿದ್ದಾರೆ” ಎಂದು ನೊಂದ ಯುವತಿ ಪೊಲೀಸರಲ್ಲಿ ಹೇಳಿಕೊಂಡಿದ್ದಾಳೆ ಎಂದು ವರದಿಯಾಗಿದೆ.
ಏಮ್ಸ್ ನಲ್ಲಿ ಯುವಕ ಚಿಕಿತ್ಸೆ ಪಡೆಯುತ್ತಿದ್ದ ಕಾರಣ ಘಟನೆಯ ಬಗ್ಗೆ ಆತನಿಂದ ಹೇಳಿಕೆಯನ್ನು ಪಡೆಯಲಾಗಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸದ್ಯ, ಆ ಮೂವರು ಯುವಕರ ಮೇಲೆ ಐಪಿಸಿ ಸೆಕ್ಶನ್ 307(attempt to murder), 354ಡಿ (stalking), 509(word, gesture or act intended to insult the modesty of a woman) , 34(acts done by several persons in furtherance of common intention) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಘಟನೆಯ ಬಗ್ಗೆ ತನಿಖೆ ಮುಂದುವರಿಸಲಾಗಿದೆ ಎಂದು ಆಗ್ನೇಯ ದೆಹಲಿಯ ಡೆಪ್ಯೂಟಿ ಕಮಿಷನರ್ ಆಫ್ ಪೊಲೀಸ್ ಆರ್ ಪಿ ಮೀನಾ ತಿಳಿಸಿದ್ದಾರೆ.
ಗೋವಿಂದಪುರಿಯ ಗಿರಿ ನಗರದ ಜೆಜೆ ಕ್ಯಾಂಪ್ ನಿವಾಸಿಗಳಾದ ಆರೋಪಿಗಳನ್ನು ಪತ್ತೆ ಹಚ್ಚಲು ಕಾರ್ಯಾಚರಣೆ ಮಾಡಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!
Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು
PM Modi;ಇಂದು 71000ಕ್ಕೂ ಅಧಿಕ ಮಂದಿಗೆ ಉದ್ಯೋಗ ಪತ್ರ ವಿತರಣೆ
Chhattisgarh; ನಕ್ಸಲ್ ವ್ಯಾಪ್ತಿ 9500 ಚ.ಕಿ.ಮೀ.ಗೆ ಇಳಿಕೆ
Tamil Nadu University; ಕುಲಪತಿ ನೇಮಕ: ಸಿಎಂ, ಗೌರ್ನರ್ ನಡುವೆ ಮತ್ತ ಸಂಘರ್ಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!
ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ
Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು
Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್ ತಂಡ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.