‘ಬಿಜೆಪಿ-ಮುಕ್ತ ಭಾರತ’ಕ್ಕೆ ಕರೆ ನೀಡಿದ ಕೆಸಿಆರ್-ನಿತೀಶ್ ಕುಮಾರ್ ಭೇಟಿ: ಏನಿದು ಪ್ರಮುಖ ರಂಗ?
Team Udayavani, Sep 1, 2022, 9:09 AM IST
ಪಾಟ್ನಾ: ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರು ಬುಧವಾರ ಬಿಹಾರಕ್ಕೆ ಭೇಟಿ ನೀಡಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಡಿಸಿಎಂ ಹಾಗೂ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ತೇಜಸ್ವಿ ಯಾದವ್ ಅವರನ್ನು ಭೇಟಿ ಮಾಡಿ “ಬಿಜೆಪಿ-ಮುಕ್ತ ಭಾರತ” ಕ್ಕೆ ಕರೆ ನೀಡಿದರು.
ನಿತೀಶ್ ಕುಮಾರ್ ಮತ್ತು ತೇಜಸ್ವಿ ಯಾದವ್ ಅವರನ್ನು ಭೇಟಿ ಮಾಡಿದ ನಂತರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ತೆಲಂಗಾಣ ಸಿಎಂ ಕೆಸಿಆರ್, ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಆಡಳಿತವು ದೇಶವನ್ನು ಕಾಡುತ್ತಿರುವ ಹಲವಾರು ಅನಿಷ್ಟಗಳಿಗೆ ಕಾರಣವಾಗಿದೆ ಎಂದರು. ರೂಪಾಯಿ ಮೌಲ್ಯ ಕುಸಿತ, ರೈತರ ಪ್ರತಿಭಟನೆ, ನಿರುದ್ಯೋಗ ಮತ್ತು ಬೆಲೆ ಏರಿಕೆಯ ಬಗ್ಗೆ ಅವರು ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಪಾಟ್ನಾದಲ್ಲಿ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರನ್ನು ಭೇಟಿ ಮಾಡಿದ ಕೆಸಿಆರ್, 2024 ರಲ್ಲಿ ಪ್ರಧಾನಿ ಅಭ್ಯರ್ಥಿಯಾಗಿ ನಿತೀಶ್ ಕುಮಾರ್ ಎಂಬ ಕುರಿತಾಗಿ ಕೇಳಿದ ಪ್ರಶ್ನೆಗೆ, “ನಿತೀಶ್ ದೇಶದ ಅತ್ಯುತ್ತಮ ಮತ್ತು ಹಿರಿಯ ನಾಯಕರಲ್ಲಿ ಒಬ್ಬರು. ನಾನು ನಿರ್ಧಾರ ತೆಗೆದುಕೊಳ್ಳುವವನಲ್ಲ, ಎಲ್ಲಾ ವಿರೋಧ ಪಕ್ಷಗಳು ಒಟ್ಟಾಗಿ ಕೂತು ನಿರ್ಧಾರ ತೆಗೆದುಕೊಳ್ಳುತ್ತೇವೆ” ಎಂದರು.
ಇದನ್ನೂ ಓದಿ:ನನ್ನ ಹೆಸರಿನಲ್ಲಿ ಅಕ್ರಮ ಆಸ್ತಿ ನೋಂದಣಿಯಾಗಿದ್ದರೆ ನೆಲಸಮ ಮಾಡಿ: ಅಧಿಕಾರಿಗಳಿಗೆ ಮಮತಾ ಸೂಚನೆ
ಇದೇ ವೇಳೆ ಬಿಜೆಪಿಗೆ ವಿರುದ್ಧವಾಗಿ ಕಾಂಗ್ರೆಸ್ ಹೊರತಾದ ಒಂದು ರಂಗವನ್ನು ನಿರ್ಮಿಸುವ ಕುರಿತಾಗಿ ಕೆಸಿಆರ್ ಮತ್ತು ನಿತೀಶ್ ಮಾತನಾಡಿದರು. “ಇದು ತೃತೀಯ ರಂಗವಲ್ಲ, ಆದರೆ ತನ್ನ ಸಣ್ಣ ರಾಜಕೀಯ ಲಾಭಕ್ಕಾಗಿ ಕೋಮು ಭಾವನೆಗಳನ್ನು ಪ್ರಚೋದಿಸುವ ಅಪಾಯಕಾರಿ ಆಟವಾಡುತ್ತಿರುವ ಬಿಜೆಪಿ ವಿರುದ್ಧ ಹೋರಾಡಲು ಪ್ರಮುಖ ರಂಗವಾಗಿದೆ” ಎಂದು ಕೆಸಿಆರ್ ಹೇಳಿದರು.
ಪ್ರಾದೇಶಿಕ ಪಕ್ಷಗಳ ನಾಯಕರನ್ನು ಭೇಟಿ ಮಾಡಲು ಕೆಸಿಆರ್ ಅವರ ಆರನೇ ಪ್ರವಾಸ ಇದಾಗಿದೆ. ಈ ಹಿಂದೆ ಅವರು ಜೆಎಂಎಂ ಮುಖ್ಯಸ್ಥ ಶಿಬು ಸೊರೆನ್ ಮತ್ತು ಅವರ ಪುತ್ರ ಮತ್ತು ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್, ಶಿವಸೇನೆಯ ಉದ್ಧವ್ ಠಾಕ್ರೆ, ತಮಿಳುನಾಡು ಸಿಎಂ ಮತ್ತು ಡಿಎಂಕೆ ನಾಯಕ ಎಂಕೆ ಸ್ಟಾಲಿನ್ ಮತ್ತು ಪಶ್ಚಿಮ ಬಂಗಾಳ ಸಿಎಂ ಮತ್ತು ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗಿದ್ದರು. ನವದೆಹಲಿ ಮತ್ತು ಪಂಜಾಬ್ ಪ್ರವಾಸದಲ್ಲಿ ಅವರು ಅರವಿಂದ್ ಕೇಜ್ರಿವಾಲ್ ಮತ್ತು ಭಗವಂತ್ ಮಾನ್ ಅವರನ್ನು ಭೇಟಿಯಾದರು. ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಅವರನ್ನು ಎರಡು ಬಾರಿ ಭೇಟಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.