Rescued: 2 Km ಹೊತ್ತು ಸಾಗಿ ಆತ್ಮಹತ್ಯೆಗೆ ಯತ್ನಿಸಿದ ರೈತನ ಜೀವ ಉಳಿಸಿದ ಪೊಲೀಸ್ ಸಿಬ್ಬಂದಿ
Team Udayavani, Feb 29, 2024, 12:47 PM IST
ಹೈದರಾಬಾದ್: ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಸಂಕಷ್ಟದಲ್ಲಿದ್ದ ರೈತನೋರ್ವನನ್ನು ಪೊಲೀಸ್ ಸಿಬ್ಬಂದಿ ತನ್ನ ಹೆಗಲ ಮೇಲೆ ಹೊತ್ತು ಸುಮಾರು 2 ಕಿ.ಮೀ ದೂರದಲ್ಲಿರುವ ಆಸ್ಪತ್ರೆಗೆ ದಾಖಲಿಸಿ ರೈತನ ಜೀವ ಉಳಿಸಿದ ಘಟನೆ ತೆಲಂಗಾಣದಲ್ಲಿರುವ ಕರೀಂನಗರದ ವೀಣವಂಕ ಮಂಡಲದ ಬೇಟಿಗಲ್ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ರೈತನೊಬ್ಬ ತನ್ನ ಜಮೀನಿನಲ್ಲಿ ಕೀಟನಾಶಕ ಸೇವಿಸಿದ್ದಾನೆ. ಅಕ್ಕಪಕ್ಕದ ರೈತರು ಆತನ ಸ್ಥಿತಿಯನ್ನು ಗಮನಿಸಿ ಪೊಲೀಸ್ ಠಾಣೆ ಹಾಗೂ ತುರ್ತು ಸೇವೆಗೆ ಮಾಹಿತಿ ನೀಡಿದ್ದಾರೆ.
ಪೊಲೀಸ್ ಸಿಬ್ಬಂದಿ ಘಟನಾ ಸ್ಥಳಕ್ಕೆ ಬಂದರೂ ತುರ್ತು ವಾಹನ ಮಾತ್ರ ಬರಲಿಲ್ಲ, ಈ ವೇಳೆ ಅಲ್ಲಿದ್ದ ಪೊಲೀಸ್ ಸಿಬ್ಬಂದಿ ಜಯಪಾಲ್ ವಿಷ ಸೇವಿಸಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ರೈತನ ಸ್ಥಿತಿ ಕಂಡು ಕೂಡಲೇ ಆತನನ್ನು ತನ್ನ ಹೆಗಲ ಮೇಲೆ ಹೊತ್ತುಕೊಂಡು ಹೊಲ ಗದ್ದೆಗಳಲ್ಲಿ ಸುಮಾರು ಎರಡು ಕಿಲೋಮೀಟರ್ ದೂರ ಸಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಪೊಲೀಸ್ ಸಿಬಂದಿಯ ಕ್ಷಿಪ್ರ ಕಾರ್ಯಾಚರಣೆಯಿಂದ ರೈತನ ಜೀವ ಉಳಿದಿದೆ ಎಂದು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ, ಅಲ್ಲದೆ ಪೊಲೀಸ್ ಸಿಬ್ಬಂದಿಯ ಕಾರ್ಯಕ್ಕೆ ಊರಿನ ಜನರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: Himachal: ಅಡ್ಡಮತದಾನ ಮಾಡಿದ 6 ಮಂದಿ ಕೈ ಶಾಸಕರು ಸದಸ್ಯತ್ವದಿಂದ ಅನರ್ಹ: ಸ್ಪೀಕರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ
Maharashtra Elections: ವಿಪಕ್ಷ ನಾಯಕ ರಾಹುಲ್ ಛೋಟಾ ಪೋಪಟ್: ಬಿಜೆಪಿ ವಕ್ತಾರ ಲೇವಡಿ
Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ
Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು
Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್ ಮತ್ತು ಬಾಬಾ ನಡುವಿನ ಹೋರಾಟ
MUST WATCH
ಹೊಸ ಸೇರ್ಪಡೆ
BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ
Maharashtra Elections: ವಿಪಕ್ಷ ನಾಯಕ ರಾಹುಲ್ ಛೋಟಾ ಪೋಪಟ್: ಬಿಜೆಪಿ ವಕ್ತಾರ ಲೇವಡಿ
Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ
Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ
Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.