ಮಾಸ್ಕ್ ಖರೀದಿಸಲು ಹಣವಿಲ್ಲ : ಹಕ್ಕಿಯ ಗೂಡನ್ನೇ ಮಾಸ್ಕ್ ಮಾಡಿಕೊಂಡ ತಾತ.!
Team Udayavani, Apr 23, 2021, 6:17 PM IST
ಮೆಹಬೂಬ್ನಗರ (ತೆಲಂಗಾಣ): ಕೋವಿಡ್ ಜನರನ್ನು ಎಂತಹ ಪರಿಸ್ಥಿತಿಗೆ ತಂದು ನಿಲ್ಲಸಿದೆ ಅಂದ್ರೆ ಜೀವನವೇ ಸಾಕಪ್ಪ ಎಂಬಷ್ಟರ ಮಟ್ಟಿಗೆ ಜನ ನೊಂದು ಬೆಂದಿದ್ದಾರೆ. ಇನ್ನು ಕೆಲವರು ಸೋಂಕಿಗೆ ತಮ್ಮ ಪ್ರಾಣವನ್ನೇ ಕೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿಯೇ ಇಲ್ಲೊಂದು ಹಿರಿ ಜೀವ ಮಾಸ್ಕ್ ಕೊಳ್ಳಲು ತನ್ನ ಬಳಿ ಹಣವಿಲ್ಲ ಎಂಬ ಕಾರಣಕ್ಕೆ ಹಕ್ಕಿಯ ಗೂಡನ್ನೇ ಮಾಸ್ಕ್ ಮಾಡಿಕೊಂಡು ಮುಖಕ್ಕೆ ಧರಿಸಿದ್ದಾರೆ.
ಹೌದು ತೆಲಂಗಾಣದ ಮೆಹಬೂಬ್ ನಗರದ ನಿವಾಸಿಯೊಬ್ಬರು ಸರ್ಕಾರಿ ಕಚೇರಿಗೆ ಬರಬೇಕೆಂಬ ಕಾರಣಕ್ಕೆ ಈ ರೀತಿ ಮಾಡಿದ್ದಾರೆ. ಸರ್ಕಾರಿ ಕಚೇರಿಗೆ ಮಾಸ್ಕ್ ಬದಲಿಗೆ ಪಕ್ಷಿಯ ಗೂಡು ಧರಿಸಿ ಆಗಮಿಸಿದ್ದಾರೆ. ಈ ಫೋಟೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮೇಕಲಾ ಕುರ್ಮಯ್ಯ ತನ್ನ ಪಿಂಚಣಿ ಹಣ ಸಂಗ್ರಹಿಸುವ ಉದ್ದೇಶದಿಂದ ಸರ್ಕಾರಿ ಕಚೇರಿಗೆ ಭೇಟಿ ನೀಡಬೇಕಾಗಿತ್ತು. ಆದರೆ, ಮುಖವಾಡ ಖರೀದಿ ಮಾಡಲು ಸಾಧ್ಯವಾಗದ ಕಾರಣ ಆತ ಈ ರೀತಿಯಾಗಿ ನಡೆದುಕೊಂಡಿದ್ದಾರೆ.
ತೆಲಂಗಾಣ ರಾಜ್ಯದಲ್ಲಿ ಮಾಸ್ಕ್ ಧರಿಸದವರಿಗೆ ಒಂದು ಸಾವಿರ ರೂ. ದಂಡ ವಿಧಿಸಲಾಗುತ್ತಿದೆ. ಅಲ್ಲದೆ ಮಾಸ್ಕ್ ಇಲ್ಲದಿದ್ದರೆ ಯಾವುದೇ ಕಚೇರಿಯೊಳಗೆ ಪ್ರವೇಶಿಸಲು ಅನುಮತಿ ನೀಡುತ್ತಿಲ್ಲ. ಈ ಕಾರಣದಿಂದ ಮೇಕಲಾ ಕುರ್ಮಯ್ಯ ಹಕ್ಕಿಯ ಗೂಡನ್ನೇ ತನ್ನ ಮಾಸ್ಕ್ ಹಾಗಿ ಮಾಡಿಕೊಂಡಿದ್ದು ಗಮನ ಸೆಳೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.