ಬಂಗಾಲ ಟಿವಿ ನಟಿ ಪಾಯಲ್ ಚಕ್ರವರ್ತಿ ಆತ್ಮಹತ್ಯೆ, ಕಾರಣ ನಿಗೂಢ
Team Udayavani, Sep 6, 2018, 5:12 PM IST
ಸಿಲಿಗುಡಿ : ಉತ್ತರ ಬಂಗಾಲದ ಸಿಲಿಗುಡಿಯ ಹೊಟೇಲ್ ಕೋಣೆಯಲ್ಲಿ ನೇಣು ಹಾಕಿಕೊಂಡ ರೀತಿಯಿಲ್ಲಿ, ನಿಗೂಢ ಸನ್ನಿವೇಶದಲ್ಲಿ, ಟಿವಿ ನಟಿ ಪಾಯಲ್ ಚಕ್ರವರ್ತಿ ಅವರ ಮೃತ ದೇಹ ಪತ್ತೆಯಾಗಿದೆ.
ಪಾಯಲ್ ಚಕ್ರವರ್ತಿ ಅವರು ದಕ್ಷಿಣ ಕೋಲ್ಕತ ನಿವಾಸಿಯಾಗಿದ್ದು ಹಲವಾರು ಟಿವಿ ಮತ್ತು ವೆಬ್ ಸೀರಿಯಲ್ಗಳಲ್ಲಿ ನಟಿಸಿದ್ದಾರೆ. ನಿನ್ನೆ ಬುಧವಾರ ಹೊಟೇಲ್ ಕೋಣೆಯಲ್ಲಿ ನೇಣು ಹಾಕಿಕೊಂಡ ರೀತಿಯಲ್ಲಿ ಅವರ ಶವ ಪತ್ತೆಯಾಯಿತು ಎಂದು ಸಿಲಿಗುಡಿ ಪೊಲೀಸ್ ಕಮಿಶನರೇಟ್ ಡಿಸಿಪಿ ಗೌರವ್ ಲಾಲ್ ತಿಳಿಸಿದರು.
ಈಚೆಗಷ್ಟೇ ತನ್ನ ಪತಿಯಿಂದ ಪ್ರತ್ಯೇಕಗೊಂಡಿದ್ದ 38ರ ಹರೆಯದ ಪಾಯಲ್ ಅವರಿಗೆ ಎರಡು ವರ್ಷ ಪ್ರಾಯದ ಮಗ ಇದ್ದಾನೆ. ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಉತ್ತರ ಬಂಗಾಲ ವೈದ್ಯಕೀಯ ಕಾಲೇಜ್ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಡಿಸಿಪಿ ಹೇಳಿದರು.
ಪಾಯಲ್ ಆತ್ಮಹತ್ಯೆಯ ಹಿಂದಿನ ಕಾರಣವೇನೆಂದು ತಮಗೆ ಗೊತ್ತಿಲ್ಲ ಎಂದು ಆಕೆಯ ಮನೆಯವರು ಹೇಳಿದ್ದಾರೆ. ಪಾಯಲ್ ತಾನು ರಾಂಚಿಗೆ ಹೋಗುವವಳಿದ್ದೇನೆ ಎಂದಿದ್ದಳು; ಸಿಲಿಗುಡಿಯಲ್ಲಿ ಆಕೆಗೇನು ಕೆಲಸವಿತ್ತೆಂದು ನನಗೆ ಗೊತ್ತಿಲ್ಲ ಎಂದು ಆಕೆಯ ತಂದೆ ಪ್ರಬೀರ್ ಗುಹಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂಧೆ ರಾಜೀನಾಮೆ… ಮುಂದಿನ ಸಿಎಂ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Kannada: ಕನ್ನಡ ನಾಡಲ್ಲಿ ಪ್ರತಿದಿನವೂ ನಿತ್ಯೋತ್ಸವವಿರಲಿ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್
ಹೊಸಪೇಟೆ: ಸ್ಕ್ಯಾನ್ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.