ವಸತಿ ಕಟ್ಟಡದಿಂದ ಹಾರಿ ತೆಲುಗು ನ್ಯೂಸ್ ಆ್ಯಂಕರ್ ಆತ್ಮಹತ್ಯೆ
Team Udayavani, Apr 2, 2018, 11:26 AM IST
ಹೈದರಾಬಾದ್ : ತೆಲುಗು ನ್ಯೂಸ್ ಚ್ಯಾನಲ್ನ ಟಿವಿ ಆ್ಯಂಕರ್ ನಿನ್ನೆ ಭಾನುವಾರ ರಾತ್ರಿ ಇಲ್ಲಿನ ತನ್ನ ಫ್ಲ್ಯಾಟ್ ನ ಅಪಾರ್ಟ್ಮೆಂಟ್ ಕಟ್ಟಡದ ಐದನೇ ಮಹಡಿಯಿಂದ ಕೆಳಕ್ಕೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ.
ಆತ್ಮಹತ್ಯೆ ಮಾಡಿಕೊಂಡಿರುವ ಟಿವಿ ನ್ಯೂಸ್ ಆ್ಯಂಕರ್ ಮಹಿಳೆ ಆರು ತಿಂಗಳ ಹಿಂದೆ ತನ್ನ ಪತಿಗೆ ವಿಚ್ಛೇದನ ನೀಡಿ ತನ್ನ 14 ವರ್ಷ ಪ್ರಾಯದ ಮಗನೊಂದಿಗೆ ತನ್ನ ಹೆತ್ತವರೊಂದಿಗೆ ವಾಸವಾಗಿದ್ದಳು. ಆಕೆ ಬರೆದಿಟ್ಟಿರುವ ಡೆತ್ ನೋಟ್ನಲ್ಲಿ ಆಕೆ ತಾನು ಮನೋ ಖಿನ್ನತೆ ಯಿಂದಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದಾಳೆ.
ನಿನ್ನೆ ಭಾನುವಾರ ರಾತ್ರಿ ತನ್ನ ಕೆಲಸ ಮುಗಿಸಿ ಮನೆಗೆ ಬಂದ ಮಹಿಳೆಯು ಕಟ್ಟಡದಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು ರಕ್ತದ ಮಡುವಿನಲ್ಲಿ ಬಿದ್ದಿದ್ದ ಆಕೆಯ ಮೃತ ದೇಹವನ್ನು ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದರು.
ಮಹಿಳೆಯ ತಲೆಗೆ ಗಂಭೀರವಾಗಿ ಗಾಯವಾಗಿದ್ದುದರಿಂದ ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಳು. ಮೇಲಾಗಿ ಆಕೆಯ ಕಾಲುಗಳು ಮುರಿದಿದ್ದವು ಎಂದು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ಕುಕಟಪಳಿಳ ಪೊಲೀಸ್ ಠಾಣೆಯ ಎಸ್ಐ ಮಜೀದ್ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress;ಸಂಪುಟ,ಕೆಪಿಸಿಸಿ ಯಥಾಸ್ಥಿತಿ? ಬಜೆಟ್ ಅಧಿವೇಶನ, ಪಂ.ಚುನಾವಣೆ ಬಳಿಕ ಚುರುಕು?
KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !
Mangaluru; ಸಾಮಾನ್ಯ ಸ್ಥಳದಲ್ಲಿ ಬಿಲ್ಡರ್ ಹಕ್ಕು ಸಾಧಿಸುವಂತಿಲ್ಲ
Gram Panchayat ಆದಾಯಕ್ಕೆ ಟೆಲಿಕಾಂ ಕಂಪೆನಿಗಳಿಂದ ಕುತ್ತು
ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.