ತಮಿಳುನಾಡಿಗೆ ಉಗ್ರರ ಭೀತಿ: ಹಿಂದೂ ಮುಖಂಡರು ಟಾರ್ಗೆಟ್
Team Udayavani, Dec 19, 2019, 7:44 PM IST
ಕೊಯಮತ್ತೂರು: ಉಗ್ರಗಾಮಿಗಳು ಒಳನುಸುಳಿದ್ದಾರೆ ಎಂಬ ವರದಿ ಹಿನ್ನೆಲೆಯಲ್ಲಿ ತಮಿಳುನಾಡಿನಾದ್ಯಂತ ಭಾರೀ ಪ್ರಮಾಣದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಹಿಂದೂ ಸಂಘಟನೆಗಳ ಮುಖಂಡರನ್ನು ಗುರಿಯಾಗಿಸಿಕೊಂಡು ಕೇರಳದ ಕರಾವಳಿ ಭಾಗದಿಂದ ನಾಲ್ವರು ದುಷ್ಕರ್ಮಿಗಳು ತಮಿಳುನಾಡಿಗೆ ನುಸುಳುವ ಸಾಧ್ಯತೆಯಿದೆ ಎಂಬ ಗುಪ್ತಚರ ವರದಿ ಆಧರಿಸಿ ಪೊಲೀಸರು ಎಲ್ಲೆಡೆ ಬಂದೋಬಸ್ತ್ ಕೈಗೊಂಡಿದ್ದಾರೆ.
ದೆಹಲಿ ಗುಪ್ತಚರ ದಳವು ಈ ಉಗ್ರಗಾಮಿಗಳ ಫೋಟೋಗಳನ್ನು ಕೂಡ ಬಿಡುಗಡೆ ಮಾಡಿದ್ದು, ತಮಿಳುನಾಡಿನ ಕೆಲ ಭಾಗಗಳು, ಚೆಕ್‌ಪೋಸ್ಟ್‌ಗಳು ಹಾಗೂ ಸೂಕ್ಷ್ಮ ಪ್ರದೇಶಗಳು, ಅದರಲ್ಲೂ ರೈಲ್ವೆ , ಬಸ್ ನಿಲ್ದಾಣಗಳಲ್ಲಿ ಹೈಅಲರ್ಟ್ ಘೋಷಿಸಿ, ತಪಾಸಣೆ ಕೈಗೊಳ್ಳಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಆದರೆ, ಈ ಉಗ್ರರು ಯಾವ ಸಂಘಟನೆಗೆ ಸೇರಿದವರು ಎಂಬ ಬಗ್ಗೆ ಮಾಹಿತಿ ಇಲ್ಲ.
ಸೇಲಂ – ಕೊಯಮತ್ತೂರು ಭಾಗದ ಚೆಕ್‌ಪೋಸ್ಟ್‌ಗಳಲ್ಲಿ ಪ್ರತಿ ವಾಹನಗಳನ್ನು ಕಟ್ಟುನಿಟ್ಟಾಗಿ ತಪಾಸಣೆ ನಡೆಸಲಾಗುತ್ತಿದೆ. ತಮಿಳುನಾಡಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಯುತ್ತಿರುವ ಪ್ರದೇಶಗಳಲ್ಲೂ ಇಲ್ಲಿನ ಪೊಲೀಸ್ ಇಲಾಖೆ ನಿಗಾ ವಹಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.