ಸಿಐಎಸ್ಎಫ್ ಯೋಧರ ಬಸ್ ಮೇಲೆ ಉಗ್ರ ದಾಳಿ: ಎಎಸ್ಐ ಹುತಾತ್ಮ; ಇಬ್ಬರಿಗೆ ಗಾಯ
Team Udayavani, Apr 22, 2022, 8:53 AM IST
ಶ್ರೀನಗರ: ಬೆಳಗಿನ ಪಾಳಿಯ ಕರ್ತವ್ಯಕ್ಕೆ ತೆರಳುತ್ತಿದ್ದ 15 ಮಂದಿ ಸಿಐಎಸ್‌ಎಫ್ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ ಘಟನೆ ಜಮ್ಮುವಿನ ಚಡ್ಡಾ ಕ್ಯಾಂಪ್ ಬಳಿ ಶುಕ್ರವಾರ ಮುಂಜಾನೆ ನಡೆದಿದೆ.
ಘಟನೆಯಲ್ಲಿ ಸಿಐಎಸ್‌ಎಫ್‌ನ ಒಬ್ಬ ಎಎಸ್‌ಐ ಪ್ರಾಣ ಕಳೆದುಕೊಂಡಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್‌ಎಫ್) ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿ:ಕೈಗೆ ಬೇಕು ಪುನರ್‌ಜನ್ಮ: ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಪ್ರಸ್ತಾವ
ಬೆಳಗ್ಗೆ ಸುಮಾರು 4.25 ಗಂಟೆಯ ಮೇಳೆ ಭಯೋತ್ಪಾದಕರು ಯೋಧರಿದ್ದ ಬಸ್ ಮೇಲೆ ದಾಳಿ ನಡೆಸಿದ್ದಾರೆ. ಸಿಐಎಸ್ಎಫ್ ಯೋಧರು ಪ್ರತಿ ದಾಳಿ ನಡೆಸಿದ್ದು, ಉಗ್ರರು ಓಡಿಹೋಗಿದ್ದಾರೆ ಎಂದು ಸಿಐಎಸ್ಎಫ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
J&K | Bus carrying 15 CISF personnel going for morning shift duties attacked by terrorists at about 4.25 hrs near Chaddha Camp in Jammu. CISF averted the terrorist attack, retaliated effectively, and forced the terrorists to run away: CISF officer
— ANI (@ANI) April 22, 2022
ಇಂದು ಮುಂಜಾನೆ ಜಮ್ಮುವಿನಲ್ಲಿರುವ ಸೇನಾ ನೆಲೆಯ ಬಳಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಭೀಕರ ಗುಂಡಿನ ಕಾಳಗ ನಡೆದಿದೆ. ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ. ಭದ್ರತಾ ಅಧಿಕಾರಿಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಮ್ಮು ನಗರದ ಸುಂಜ್ವಾನ್ ಕಂಟೋನ್ಮೆಂಟ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮುಂಜಾನೆ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ಎನ್‌ಕೌಂಟರ್ ಪ್ರಾರಂಭವಾಯಿತು. ನಗರದಲ್ಲಿ ಭಯೋತ್ಪಾದಕರು ದಾಳಿ ನಡೆಸಲು ಮುಂದಾಗಿರುವ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೋದಿ ಭೇಟಿ ಮುನ್ನ ದಾಳಿ: ಮುಂದಿನ ರವಿವಾರ ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ. ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ಬಳಿಕ ಪ್ರಧಾನಿ ಮೋದಿ ಇದೇ ಮೊದಲ ಬಾರಿಗೆ ಕಣಿವೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಪಲ್ಲಿ ಗ್ರಾಮದಲ್ಲಿ ಸಾವಿರಾರು ಪಂಚಾಯತ್ ಸದಸ್ಯರು ಭಾಗವಹಿಸುವ ಪ್ರಮುಖ ರ್ಯಾಲಿಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ. ಆದರೆ ಮೋದಿ ಭೇಟಿಗೆ ಎರಡು ಮೊದಲು ಮಿಲಿಟರಿ ಕ್ಯಾಂಪ್ ಬಳಿ ಈ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.