![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Aug 25, 2022, 9:09 AM IST
ನವದೆಹಲಿ : ಭಾರದತ ಮೇಲೆ ದಾಳಿ ನಡೆಸಲು ಬಂದು ಜಮ್ಮು – ಕಾಶ್ಮೀರದಲ್ಲಿ ಭಾರತೀಯ ಸೇನೆಯ ಗುಂಡಿನ ದಾಳಿಗೆ ಸಿಲುಕಿ ಬಂಧಿತನಾಗಿದ್ದ ಲಷ್ಕರ್-ಎ-ತೋಯ್ಬಾ ಸಂಘಟನೆಯ ಭಯೋತ್ಪಾದಕ ಭಾರತೀಯ ಸೇನೆಯ ವಿಚಾರಣೆ ವೇಳೆ ಸ್ಫೋಟಕ ಮಾಹಿತಿಯನ್ನು ಬಹಿರಂಗಪಡಿಸಿದ್ದಾನೆ.
ದಾಳಿ ನಡೆಸಲು ಬಂದು ಸೇನೆಯ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿರುವ ತಬಾರಕ್ ಹುಸೇನ್, ನಾನು ಮತ್ತು ಇತರ 4-5 ಮಂದಿ ಭಾರತೀಯ ಸೇನೆಯನ್ನು ಗುರಿಯಾಗಿಸಿ ದಾಳಿ ಮಾಡಲು ಇಲ್ಲಿಗೆ ಬಂದಿದ್ದೇವೆ. ನಮ್ಮನ್ನು ಪಾಕಿಸ್ತಾನ ಸೇನೆಯ ಕರ್ನಲ್ ಯೂನಸ್ ಕಳುಹಿಸಿದ್ದಾರೆ. ಭಾರತೀಯ ಸೇನೆಯನ್ನು ಗುರಿಯಾಗಿಸಿ ದಾಳಿ ನಡೆಸಲು ಅವರು ನಮಗೆ 30,000 ರೂ. ನೀಡಿದ್ದಾರೆ ಎಂದು ಹೇಳಿಕೆ ನೀಡಿದ್ದಾನೆ.
ಕಳೆದ 6 ವರ್ಷಗಳಲ್ಲಿ 2ನೇ ಬಾರಿ ಗಡಿ ನುಸುಳಲು ಯತ್ನಿಸಿದ್ದ ಹುಸೇನ್ ಆದರೆ ಭಾರತೀಯ ಸೇನೆ ಮಾನವೀಯತೆಯ ಆದರದ ಮೇಲೆ ಬಿಡುಗಡೆ ಮಾಡಿತ್ತು ಆದರೆ ಕಳೆದ ಭಾನುವಾರ ಮತ್ತೆ ನುಸುಳಲು ಯತ್ನಿಸಿದ ವೇಳೆ ಗುಂಡು ಹಾರಿಸಿ ಸೆರೆ ಹಿಡಿದಿದ್ದಾರೆ ಈ ವೇಳೆ ವಿಚಾರಣೆ ನಡೆಸಿದ ಸೇನಾ ಅಧಿಕಾರಿಗಳಿಗೆ ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದಾನೆ.
ಆಗಸ್ಟ್ 21 ರ ಮುಂಜಾನೆ, ನೌಶೇರಾ ಪ್ರದೇಶದ ಜಂಗರ್ ಸೆಕ್ಟರ್‌ನಲ್ಲಿ ಗಡಿ ನುಸುಳಲು ಉಗ್ರರು ಯತ್ನಿಸಿದ ವೇಳೆ ಗಡಿಯಲ್ಲಿ ನಿಯೋಜಿಸಲಾದ ಸೈನಿಕರು ದಾಳಿ ನಡೆಸಿ ಓರ್ವನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು, ಆದರೆ ಇನ್ನಿಬ್ಬರು ತಪ್ಪಿಸಿಕೊಂಡು ಪರಾರಿಯಾಗಿದ್ದರು.
ಇದನ್ನೂ ಓದಿ :ಮಂಗಳೂರಿಗೆ ಪ್ರಧಾನಿ ಭೇಟಿ: ಗೋಲ್ಡ್‌ಫಿಂಚ್ ಮೈದಾನದಲ್ಲಿ ಸಮಾವೇಶ, ವ್ಯಾಪಕ ಸಿದ್ಧತೆ
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.