ಸೇನೆಯ ಮಹತ್ವದ ಕಾರ್ಯಾಚರಣೆ: ಉಗ್ರನ ಸೆರೆ
Team Udayavani, May 6, 2020, 5:25 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಕಾಶ್ಮೀರದ ದೋಹಾ ಜಿಲ್ಲೆಯಲ್ಲಿ ಗುಂಡಾನಾ ತಾಲೂಕಿನಲ್ಲಿ ಭದ್ರತಾ ಪಡೆಗಳು ಮಂಗಳವಾರ ಮಹತ್ವದ ಕಾರ್ಯಾಚರಣೆ ನಡೆಸಿ, ತನ್ವೀರ್ ಅಹ್ಮದ್ ಮಲಿಕ್ ಎಂಬ ಭಯೋತ್ಪಾದಕನೊಬ್ಬನನ್ನು ಬಂಧಿಸಿದ್ದಾರೆ. ಆದರೆ, ಈತ ಯಾವ ಉಗ್ರ ಸಂಘಟನೆಗೆ ಸೇರಿದವನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
ಮೇ 4ರಂದು ಹಂದ್ವಾರಾದ ಖ್ವಾಜಿಬಾದ್‌ನಲ್ಲಿ ನಾಕಾಬಂದಿ ಹಾಕಿ ವಾಹನಗಳ ತಪಾಸಣೆಯಲ್ಲಿ ನಿರತರಾಗಿದ್ದ ಸಿಆರ್‌ಪಿಎಫ್ ಯೋಧರ ಮೇಲೆ ಉಗ್ರರು ದಾಳಿ ನಡೆಸಿದ್ದರು. ಅದರಲ್ಲಿ ಮೂವರು ಯೋಧರು ಸಾವನ್ನಪ್ಪಿದ್ದರು. ತತ್ ಕ್ಷಣವೇ ಸಂಚಾರವನ್ನು ನಿರ್ಬಂಧಿಸಿ ಶೋಧ ನಡೆಸಿ ಈ ಉಗ್ರನನ್ನು ಬಂಧಿಸಲಾಗಿದೆ.
ಗಡಿಯಲ್ಲಿ ತೀವ್ರ ತಪಾಸಣೆ: ಗಡಿ ನಿಯಂತ್ರಣ ರೇಖೆಯ ಆ ಬದಿಯಲ್ಲಿ ಅನೇಕ ಉಗ್ರರು ಒಳ ನುಸುಳಲು ತುದಿಗಾಲಲ್ಲಿ ನಿಂತಿರುವ ಬಗ್ಗೆ ಗುಪ್ತಚರ ಮಾಹಿತಿಗಳು ಲಭ್ಯವಾಗಿವೆ. ಹಾಗಾಗಿ, ತೀವ್ರ ಹುಡುಕಾಟಕ್ಕೆ ನಿರ್ಧರಿಸಲಾಗಿದೆ ಎಂದು ಸೇನೆ ಹೇಳಿದೆ.
ಅಶುತೋಷ್ ಅಂತ್ಯಕ್ರಿಯೆ
ಹಂದ್ವಾರಾದಲ್ಲಿ ಮೇ 2ರಂದು ನಡೆದಿದ್ದ ಉಗ್ರ ನಿಗ್ರಹ ಕಾರ್ಯಾಚರಣೆಯಲ್ಲಿ ಮೃತರಾಗಿದ್ದ 21 ರಾಷ್ಟ್ರೀಯ ರೈಫಲ್ಸ್ ಪಡೆಯ ಕರ್ನಲ್ ಅಶುತೋಷ್ ಶರ್ಮಾರವರ ಅಂತ್ಯಕ್ರಿಯೆ ಮಂಗಳವಾರ ನಡೆಯಿತು.
ಅವರ ಪಾರ್ಥಿವ ಶರೀರವನ್ನು ಜೈಪುರಕ್ಕೆ ತರಲಾಯಿತು. ವಿಮಾನ ನಿಲ್ದಾಣದಲ್ಲಿ ರಾಜಸ್ಥಾನದ ಸಚಿವ ಪ್ರತಾಪ್ ಖಚ್ವಿಯವಾಸ್ ಅವರು ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ಸುಮಾರು 10 ಸೇನಾ ವಾಹನಗಳು ಈ ಅಂತಿಮ ಯಾತ್ರೆಯಲ್ಲಿ ಭಾಗವಹಿಸಿದ್ದವು.
ಜೈಪುರದ ಮಿಲಿಟರಿ ಸ್ಟೇಷನ್‌ನಲ್ಲಿ ಅವರ ಮಂಗಳವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಸಕಲ ಸೇನಾ ಮರ್ಯಾದೆಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಯಿತು. ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಸೇನಾಧಿಕಾರಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್ ಪಟ್ಟು
MUST WATCH
ಹೊಸ ಸೇರ್ಪಡೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.