![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Oct 11, 2021, 9:07 AM IST
ಶ್ರೀನಗರ: ಜಮ್ಮು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಓರ್ವ ಉಗ್ರನನ್ನು ಹೊಡೆದುರುಳಿಸಲಾಗಿದೆ.
ಬಂಡಿಪೋರಾ ಜಿಲ್ಲೆಯ ಹಾಜಿನ್ ಏರಿಯಾದ ಗುಂಡ್ ಜಹಂಗೀರ್ ನಲ್ಲಿ ಈ ಗುಂಡಿನ ಕಾಳಗ ನಡೆದಿದೆ. ಎನ್ ಕೌಂಟರ್ ನಲ್ಲಿ ಓರ್ವನನ್ನು ಹತ್ಯೆ ಮಾಡಲಾಗಿದೆ ಎಂದು ಜಮ್ಮು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.
ಸತ್ತ ಭಯೋತ್ಪಾದಕನನ್ನು ಇಮ್ತಿಯಾಜ್ ಅಹ್ಮದ್ ದಾರ್ ಎಂದು ಗುರುತಿಸಲಾಗಿದ್ದು, ಲಷ್ಕರ್-ಇ-ತೊಯ್ಬಾದ ಬೆಂಬಲಿತ ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ರೆಸಿಸ್ಟೆನ್ಸ್ ಫ್ರಂಟ್ ನೊಂದಿಗೆ ಸಂಬಂಧ ಹೊಂದಿದ್ದ. ಬಂಡಿಪೋರಾದ ಶಹಗುಂದದಲ್ಲಿ ಇತ್ತೀಚೆಗೆ ನಡೆದ ನಾಗರಿಕ ಹತ್ಯೆಯಲ್ಲಿ ದಾರ್ ಭಾಗಿಯಾಗಿದ್ದ ಎನ್ನಲಾಗಿದೆ.
ಇದನ್ನೂ ಓದಿ:ಲಖೀಂಪುರ ಹಿಂಸಾಚಾರ ಘಟನೆ ಖಂಡಿಸಿ ಮಹಾರಾಷ್ಟ್ರದಲ್ಲಿ ಬಂದ್ ಗೆ ಕರೆ ನೀಡಿದ ಮಹಾ ವಿಕಾಸ್ ಅಘಾಡಿ
ಅನಂತನಾಗ್ ನ ವೆರಿನಾಗ್ ಪ್ರದೇಶದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಓರ್ವ ಪೊಲೀಸ್ ಸಿಬ್ಬಂದಿಗೆ ಗಾಯವಾಗಿತ್ತು. ಓರ್ವ ಭಯೋತ್ಪಾದಕ ಕೂಡ ಸಾವನ್ನಪ್ಪಿದ್ದಾನೆ. ಸ್ಥಳದಿಂದ ಒಂದು ಪಿಸ್ತೂಲ್ ಮತ್ತು ಒಂದು ಗ್ರೆನೇಡ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ ನಡೆಯುತ್ತಿದೆ.
#BandiporaEncounterUpdate: 01 unidentified #terrorist killed. #Search going on. Further details shall follow. @JmuKmrPolice https://t.co/czK85KyPL3
— Kashmir Zone Police (@KashmirPolice) October 11, 2021
Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
You seem to have an Ad Blocker on.
To continue reading, please turn it off or whitelist Udayavani.