Poonch; ಸೇನಾ ವಾಹನದ ಮೇಲೆ ಉಗ್ರರಿಂದ ಗುಂಡಿನ ದಾಳಿ: 4 ಯೋಧರು ಹುತಾತ್ಮ
Team Udayavani, Dec 21, 2023, 6:44 PM IST
ಪೂಂಚ್ :ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಗುರುವಾರ ಸೇನಾ ವಾಹನದ ಮೇಲೆ ಉಗ್ರರು ಹೊಂಚುದಾಳಿ ನಡೆಸಿದ ಪರಿಣಾಮ 4 ಯೋಧರು ಹುತಾತ್ಮರಾಗಿದ್ದು, ಕನಿಷ್ಠ ಮೂವರು ಯೋಧರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಠಾಣಮಂಡಿ-ಸುರನಕೋಟೆ ರಸ್ತೆಯ ಸಾವನಿ ಪ್ರದೇಶದಲ್ಲಿ ಬುಫ್ಲಿಯಾಜ್‌ನಿಂದ ಯೋಧರನ್ನು ಹೊತ್ತೊಯ್ಯುತ್ತಿದ್ದ ವಾಹನದ ಮೇಲೆ ದಾಳಿ ನಡೆದಿದೆ. ಬುಧವಾರದಿಂದ ಉಗ್ರರ ವಿರುದ್ಧ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆ ನಡೆಯುತ್ತಿದೆ.
ಸ್ಥಳಕ್ಕೆ ಹೆಚ್ಚುವರಿ ಭದ್ರತಾ ಪಡೆಗಳು ದೌಡಾಯಿಸಿದ್ದು, ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರೆಸಿದ್ದಾರೆ.
ಪೂಂಛ್ ಜಿಲ್ಲೆಯ ಸಶಸ್ತ್ರ ಪೊಲೀಸ್ ಘಟಕದ ಆವರಣದಲ್ಲಿ ಬುಧವಾರ ಸ್ಫೋಟ ಸಂಭವಿಸಿದ ನಂತರ ಈ ಘಟನೆ ನಡೆದಿದೆ.ಸುರನಕೋಟ್ ಪ್ರದೇಶದಲ್ಲಿ ಡಿ 19 ಮತ್ತು 20 ರ ಮಧ್ಯರಾತ್ರಿ ಸಂಭವಿಸಿದ ಸ್ಫೋಟದಿಂದಾಗಿ ಕಾಂಪೌಂಡ್ ಬಳಿ ನಿಲ್ಲಿಸಿದ್ದ ಕೆಲವು ವಾಹನಗಳ ಗಾಜುಗಳು ಹಾನಿಗೊಳಗಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹೃದಯ ವಿದ್ರಾವಕ ವೀಡಿಯೋಗಳು
ದಾಳಿ ನಡೆದ ಸ್ಥಳದಲ್ಲಿ ಚೆಲ್ಲಿರುವ ರಕ್ತ,ಒಡೆದುಹೋದ ಹೆಲ್ಮೆಟ್‌ಗಳು, ಸೇನಾ ವಾಹನಗಳ ಗಾಜುಗಳು ಪುಡಿಯಾ ಗಿರುವುದು, ಇತರ ವಸ್ತುಗಳು ಚೆಲ್ಲಾಪಿಲ್ಲಿ ಯಾಗಿಬಿದ್ದಿರುವಂಥ ಮನಕಲಕುವ ಚಿತ್ರಗಳು, ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಶಸ್ತ್ರಾಸ್ತ್ರ ಹೊತ್ತೊಯ್ದರು
ಘಟನೆ ನಡೆದ ಸ್ಥಳದಲ್ಲಿ ಭಾರತೀಯ ಯೋಧರ ಶಸ್ತ್ರಾಸ್ತ್ರಗಳು ಕಾಣೆಯಾಗಿವೆ. ಇವುಗಳನ್ನು ಉಗ್ರರು ಹೊತ್ತೊಯ್ದಿರುವ ಶಂಕೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉಗ್ರರಿಗಾಗಿ ಶೋಧ ಕಾರ್ಯ ಮುಂದುವರಿ ದಿದೆ ಎಂದು ರಕ್ಷಣ ವಕ್ತಾರರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.