![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, May 14, 2021, 8:48 AM IST
ಭೋಪಾಲ್ : ಇಲ್ಲಿನ ಬಿ ಎಂ ಹೆಚ್ ಆರ್ ಸಿ ಆಸ್ಪತ್ರೆಯಲ್ಲಿ ಕೋವಿಡ್ ರೋಗಿಯ ಮೇಲೆ ಪುರುಷ ನರ್ಸ್ ಒಬ್ಬ ಅತ್ಯಾಚಾರ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅತ್ಯಾಚಾರಕ್ಕೆ ಒಳಗಾದ 43 ವರ್ಷದ ಮಹಿಳೆಯು ಸಾವನ್ನಪ್ಪಿದ್ದಾಳೆ.
ಈ ಘಟನೆಯು ಕಳೆದ ಏಪ್ರಿಲ್ 6 ರಂದೇ ನಡೆದಿದ್ದರೂ ಆಸ್ಪತ್ರೆ ಆಡಳಿತ ಮಂಡಳಿ ಮತ್ತು ಪೊಲೀಸರು ಈ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನ ಮಾಡಿದ್ದಾರೆ. ಒಂದು ತಿಂಗಳು ಕಳೆದ ನಂತರ ಸಾಮಾಜಿಕ ಕಾರ್ಯಕರ್ತರು ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಚರ್ಚೆ ನಡೆಸಿದಾಗ ಪ್ರಕರಣವು ಬೆಳಕಿಗೆ ಬಂದಿದೆ.
ನಿಶತ್ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು 40 ವರ್ಷದ ಸಂತೋಷ್ ಅಹಿರ್ವಾರ್ ಎಂದು ಗುರುತಿಸಲಾಗಿದೆ. ಸದ್ಯ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯು ಈ ಹಿಂದೆ 24 ವರ್ಷದ ಸ್ಟಾಫ್ ನರ್ಸ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದನು. ಅಲ್ಲದೆ ಕೆಲಸದ ವೇಳೆಯಲ್ಲಿಯೇ ಮದ್ಯಪಾನ ಮಾಡಿದ್ದಕ್ಕಾಗಿ ಅಮಾನತು ಆಗಿದ್ದನು ಎಂದು ಮೂಲಗಳು ತಿಳಿಸಿವೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.