ಗೋವಾ ನೂತನ ರಾಜಭವನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶಂಕುಸ್ಥಾಪನೆ
450 ವರ್ಷಗಳಷ್ಟು ಹಳೆಯದಾದ ಗೋವಾ ರಾಜಭವನ ಇನ್ನು ರಾಷ್ಟ್ರೀಯ ಸ್ಮಾರಕ
Team Udayavani, Jun 15, 2022, 3:04 PM IST
ಪಣಜಿ: ಇಂದಿನಿಂದ ರಾಷ್ಟ್ರಪತಿಗಳ ಕಾರ್ಯಕ್ರಮಗಳಲ್ಲಿ ಸಾಂವಿಧಾನಿಕ ಮತ್ತು ಕಾನೂನು ಬದಲಾವಣೆಗಳಿವೆ. ಇದೊಂದು ಶುಭ ಸಂದರ್ಭ, ನಮ್ಮ ರಾಜಭವನವು ರಾಷ್ಟ್ರೀಯ ಸ್ಮಾರಕವಾಗಿದೆ ಎಂದು ಗೋವಾ ರಾಜ್ಯಪಾಲ ಪಿಎಸ್ ಶ್ರೀಧರನ್ ಪಿಳ್ಳೆ ಹೇಳಿದರು.
ರಾಷ್ಟ್ರಪತಿ ರಾಮನಾಥ ಕೋವಿಂದ್ ರವರು ಬುಧವಾರ ಗೋವಾದ ದೋನಾಪಾಲುವ ರಾಜಭವನದ ಸಮೀಪ ನೂತನ ರಾಜಭವನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.
ನೂತನ ರಾಜಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ರಾಷ್ಟ್ರಪತಿ ರಾಮನಾಥ ಕೋವಿಂದ ರವರಿಗೆ ಗೋವಾ ರಾಜ್ಯಪಾಲ ಪಿ.ಎಸ್ ಶ್ರೀಧರನ್ ಪಿಳ್ಳೆ ಧನ್ಯವಾದ ಹೇಳಿದರು. ಸದ್ಯದ ವಿಲಕ್ಷಣ ಸನ್ನಿವೇಶದಿಂದಾಗಿ ರಾಷ್ಟ್ರಪತಿಗಳು ಇಂದು ಭಾಷಣ ಮಾಡುವುದಿಲ್ಲ ಎಂದು ರಾಜ್ಯಪಾಲರು ಹೇಳಿದರು.
ಗೋವಾ ರಾಜಭವನವು ರಾಷ್ಟ್ರೀಯ ಸ್ಮಾರಕವಾಗಿ ಘೋಷಣೆಯಾಗಿದೆ. ಆದರೆ ಸದ್ಯ ಭದ್ರತೆ ಮತ್ತು ಇತರ ಕೆಲ ಕಾರಣಗಳಿಂದಾಗಿ ರಾಜಭವನ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ಲಭಿಸುತ್ತಿಲ್ಲ. ಗೋವಾ ರಾಜಭವನವು 450 ವರ್ಷಗಳಷ್ಟು ಹಳೆಯದಾಗಿದೆ. ಇದರಿಂದಾಗಿ ಹೊಸ ರಾಜಭವನ ನಿರ್ಮಾಣಕ್ಕೆ ಇಂದು ಚಾಲನೆ ದೊರೆತಿದೆ. ಹಳೇಯ ರಾಜಭವನವನ್ನು ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸಲಾಗಿರುವುದರಿಂದ ಹೊಸ ರಾಜಭವನ ನಿರ್ಮಾಣಗೊಂಡ ನಂತರವೂ ಹಳೆಯ ರಾಜಭವನವನ್ನು ಕೆಡವಿಹಾಕಲು ಅಥವಾ ಯಾವುದೇ ಬದಲಾವಣೆ ಮಾಡಲು ಸಾಧ್ಯವಿಲ್ಲ ಎಂದು ಗೋವಾ ರಾಜ್ಯಪಾಲ ಪಿ.ಎಸ್.ಶ್ರೀಧರನ್ ಪಿಳ್ಳೆ ಹೇಳಿದರು.
ಈ ಸಂದರ್ಭದಲ್ಲಿ ಗೋವಾ ಮುಖ್ಯಮಂತ್ರಿ ಡಾ. ಪ್ರಮೋದ ಸಾವಂತ್, ಕೇಂದ್ರ ಪ್ರವಾಸೋದ್ಯಮ ರಾಜ್ಯ ಸಚಿವ ಶ್ರೀಪಾದ ನಾಯ್ಕ, ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!
Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು
PM Modi;ಇಂದು 71000ಕ್ಕೂ ಅಧಿಕ ಮಂದಿಗೆ ಉದ್ಯೋಗ ಪತ್ರ ವಿತರಣೆ
Chhattisgarh; ನಕ್ಸಲ್ ವ್ಯಾಪ್ತಿ 9500 ಚ.ಕಿ.ಮೀ.ಗೆ ಇಳಿಕೆ
Tamil Nadu University; ಕುಲಪತಿ ನೇಮಕ: ಸಿಎಂ, ಗೌರ್ನರ್ ನಡುವೆ ಮತ್ತ ಸಂಘರ್ಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!
ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ
Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು
Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್ ತಂಡ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.