South India; ಜಲಾಶಯಗಳಲ್ಲಿ ನೀರಿನ ಪ್ರಮಾಣ ಶೇ.15ಕ್ಕೆ ಇಳಿಕೆ
Team Udayavani, May 11, 2024, 6:45 AM IST
ಹೊಸದಿಲ್ಲಿ: ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ಜಲಾಶಯಗಳಲ್ಲಿ ನೀರಿನ ಲಭ್ಯತೆ ಪ್ರಮಾಣ ತೀವ್ರವಾಗಿ ಕುಸಿದಿದೆ. ಪ್ರಸ್ತುತ ದಕ್ಷಿಣ ಭಾರತದಲ್ಲಿ 42 ಜಲಾಶಯಗಳಿದ್ದು, ಅವುಗಳಲ್ಲಿ ಶೇ.15ರಷ್ಟು ಮಾತ್ರ ನೀರಿದೆ. ಇದು ಕಳೆದ ವರ್ಷ ಮತ್ತು ಹಿಂದಿನ 10 ವರ್ಷಗಳ ಸರಾಸರಿಗಿಂತ ಬಹಳ ಕಡಿಮೆ ಎಂದು ಕೇಂದ್ರ ಜಲ ಆಯೋಗ (CWC) ಹೇಳಿದೆ.
ಇದು ಕೇವಲ ದಕ್ಷಿಣ ಭಾರತಕ್ಕೆ ಮಾತ್ರವಲ್ಲ, ಇಡೀ ದೇಶಕ್ಕೇ ಅಪಾಯಕಾರಿ ಸಂಗತಿ ಎಂಬ ಕಳವಳವನ್ನೂ ಅದು ವ್ಯಕ್ತಪಡಿಸಿದೆ. ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಕೇರಳಗಳ ಜಲಾಶಯಗಳಲ್ಲಿ 53.334 ಬಿಲಿಯನ್ ಕ್ಯೂಬಿಕ್ ಮೀಟರ್‌ನಷ್ಟು (ಬಿಸಿಎಂ) ನೀರು ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯವಿದೆ. ಸದ್ಯ 7.921 ಬಿಸಿಎಂ ಮಾತ್ರ ನೀರಿದೆ. ಇದು ಒಟ್ಟು ಸಾಮರ್ಥ್ಯದ ಶೇ.15 ಮಾತ್ರ. ಕಳೆದ ವರ್ಷ ಶೇ.27ರಷ್ಟು ನೀರಿತ್ತು. ಕಳೆದ 10 ವರ್ಷಗಳಲ್ಲಿ ಸರಾಸರಿ ಶೇ.21ರಷ್ಟು ನೀರಿತ್ತು ಎಂದು ಸಿಡಬ್ಲೂéಸಿ ಹೇಳಿದೆ.
ರಾಷ್ಟ್ರಮಟ್ಟದಲ್ಲೂ ಕುಸಿತ: ಜಲಾಶಯಗಳಲ್ಲಿ ನೀರಿನ ಪ್ರಮಾಣ ದಕ್ಷಿಣ ಭಾರತದಲ್ಲಿ ಮಾತ್ರ
ವಲ್ಲ, ರಾಷ್ಟ್ರಮಟ್ಟದಲ್ಲೂ ಇಳಿದಿದೆ. ದೇಶದಲ್ಲಿ ರುವ ಒಟ್ಟು 150 ಜಲಾಶಯಗಳಲ್ಲಿ ಶೇ.27 ರಷ್ಟು ಮಾತ್ರ ನೀರಿದೆ. ಇವುಗಳಲ್ಲಿ ಕಳೆದ ವರ್ಷ ಇದೇ ಸಮಯದಲ್ಲಿ ಶೇ.32ರಷ್ಟು ನೀರಿತ್ತು ಎಂದು ಜಲ ಆಯೋಗ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.