ಪ್ಲಾಸ್ಟಿಕ್ ನಿಷೇಧ ಅಧಿಸೂಚನೆಗೆ ತಡೆ ಕೋರಿದ್ದ ಅರ್ಜಿ ವಜಾ
Team Udayavani, Nov 8, 2017, 7:18 AM IST
ನವದೆಹಲಿ: ಕರ್ನಾಟಕ ಸರ್ಕಾರ ಪ್ಲಾಸ್ಟಿಕ್ ಕ್ಯಾರಿಬ್ಯಾಗ್‌ಗಳ ತಯಾರಿಕೆ, ಪೂರೈಕೆ, ಮಾರಾಟ ಮತ್ತು ಬಳಕೆ ಹಾಗೂ ಇತರೆ ಪ್ಲಾಸ್ಟಿಕ್ ತಯಾರಿಕೆಗಳಿಗೂ ನಿಷೇಧ ಹೇರಿ ಹೊರಡಿಸಿದ್ದ ಅಧಿಸೂಚನೆ ಪ್ರಶ್ನಿಸಿ, ಅದಕ್ಕೆ ತಡೆಯಾಜ್ಞೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಮಂಗಳವಾರ ವಜಾಗೊಳಿಸಿದೆ.
ಅರ್ಜಿ ವಿಚಾರಣೆ ನಡೆಸಿದ ನ್ಯಾ. ಮದನ್ ಬಿ. ಲೋಕೂರ್ ಮತ್ತು ನ್ಯಾ.ದೀಪಕ್ ಗುಪ್ತಾ ಅವರನ್ನೊಳಗೊಂಡ ನ್ಯಾಯಪೀಠ, ಪರಿಸರ ಮಾಲಿನ್ಯಕ್ಕೆ ಕಾರಣವಾಗುವ ಹಿನ್ನೆಲೆಯಲ್ಲಿ ತೆಗೆದುಕೊಳ್ಳಲಾಗುವ ಕ್ರಮ ಇದಾಗಿದೆ ಎಂದು ಹೇಳಿದೆ. ಆದರೆ ಅರ್ಜಿ ಪರಿಶೀಲನೆ ಅಂಗೀಕರಿಸಿದ ನ್ಯಾಯಪೀಠ ಕರ್ನಾಟಕ ರಾಜ್ಯ ಪ್ಲಾಸ್ಟಿಕ್ ಸಂಘ ಸಲ್ಲಿಸಿರುವ ಇನ್ನೊಂದು ಸಿವಿಲ್ ಅರ್ಜಿಯೊಂದಿಗೇ ಲಗತ್ತಿಸಲು ನಿರ್ಧರಿಸಿದೆ. ಸರ್ಕಾರದ ಅಧಿಸೂಚನೆ ಅನುಷ್ಠಾನಕ್ಕೆ ತಡೆಯಾಜ್ಞೆ ಕೋರಿ ಕೆನರಾ ಪ್ಲಾಸ್ಟಿಕ್ ತಯಾರಕರು ಮತ್ತು ಮಾರಾಟಗಾರರ ಸಂಘ 2016, ಮಾರ್ಚ್ 16ರಂದು ಅರ್ಜಿ ಸಲ್ಲಿಸಿತ್ತು. ಈ ಹಿಂದೆ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣಕ್ಕೆ ಸಲ್ಲಿಸಲಾಗಿದ್ದ ಅರ್ಜಿಯನ್ನು ಚೆನ್ನೈ ಪೀಠ ಜನವರಿ 13ರಂದು ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸಲ್ಲಿಕೆಯಾದ
ಮೇಲ್ಮನವಿಯನ್ನು ಆಧರಿಸಿ ಕೋರ್ಟ್ ಕರ್ನಾಟಕ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿತ್ತು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.