ಲೋಕಪಾಲ ನೇಮಕ; ತೀರ್ಪು ಶೀಘ್ರ
Team Udayavani, Mar 29, 2017, 3:45 AM IST
ನವದೆಹಲಿ: ದೇಶದಲ್ಲಿ ಲೋಕಪಾಲರನ್ನು ನೇಮಕ ಮಾಡುವ ಕುರಿತ ಅರ್ಜಿಗಳ ವಿಚಾರಣೆ ಪೂರ್ಣಗೊಂಡಿದ್ದು, ತೀರ್ಪನ್ನು ಸುಪ್ರೀಂ ಕೋರ್ಟ್ ಕಾಯ್ದಿರಿಸಿದೆ.
“ಎಲ್ಲರ ವಾದ-ಪ್ರತಿವಾದಗಳನ್ನು ನ್ಯಾಯಾಲಯ ಆಲಿಸಿದ್ದು, ತೀರ್ಪನ್ನು ಕಾಯ್ದಿರಿಸಲಾಗಿದೆ’ ಎಂದು ನ್ಯಾ. ರಂಜನ್ ಗೊಗೋಯ್ ನೇತೃತ್ವದ ಪೀಠ ಮಂಗಳವಾರ ಹೇಳಿದೆ. ವಿಚಾರಣೆ ವೇಳೆ ಲೋಕಪಾಲರ ನೇಮಕಕ್ಕೆ ವಿರೋಧ ವ್ಯಕ್ತಪಡಿಸಿದ ಅಟಾರ್ನಿ ಜನರಲ್ ಮುಕುಲ್ ರೋಹಟಗಿ, “ಲೋಕಪಾಲ ಕಾಯ್ದೆಯಲ್ಲಿ ಪ್ರತಿಪಕ್ಷ ನಾಯಕ ಎಂಬ ಪದದ ವ್ಯಾಖ್ಯಾನಕ್ಕೆ ಸಂಬಂಧಿಸಿದ ತಿದ್ದುಪಡಿ ವಿಚಾರ ಇನ್ನೂ ಸಂಸತ್‌ನಲ್ಲಿದೆ. ಇಂತಹ ಸಂದರ್ಭದಲ್ಲಿ ಲೋಕಪಾಲರ ನೇಮಕ ಸಾಧ್ಯವಿಲ್ಲ,’ ಎಂದರು.
ಲೋಕಪಾಲ ಮತ್ತು ಲೋಕಾಯುಕ್ತ ಕಾಯ್ದೆ 2013ರ ಪ್ರಕಾರ, ಲೋಕಸಭೆಯ ಪ್ರತಿಪಕ್ಷ ನಾಯಕನೇ ಲೋಕಪಾಲ ಆಯ್ಕೆ ಸಮಿತಿಯ ಭಾಗವಾಗಿರುತ್ತಾನೆ. ಆದರೆ, ಸದ್ಯ ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕನೇ ಇಲ್ಲ. ಸಂಖ್ಯಾಬಲದ ಕೊರತೆಯಿಂದಾಗಿ ಕಾಂಗ್ರೆಸ್‌ಗೂ ಪ್ರತಿಪಕ್ಷ ನಾಯಕನ ಸ್ಥಾನ ನೀಡಲಾಗಿಲ್ಲ. ಪ್ರತಿಪಕ್ಷಗಳ ಪೈಕಿ ಅತಿದೊಡ್ಡ ಪಕ್ಷಕ್ಕೆ ಪ್ರತಿಪಕ್ಷ ನಾಯಕನ ಸ್ಥಾನ ನೀಡಬಹುದು ಎಂಬ ಪ್ರಸ್ತಾಪಕ್ಕೆ ಸಂಸತ್‌ನಲ್ಲಿ ಒಪ್ಪಿಗೆ ಸಿಗುವವರೆಗೂ ಲೋಕಪಾಲರ ನೇಮಕ ಸಾಧ್ಯವಿಲ್ಲ ಎಂದು ರೋಹಟಗಿ ವಾದಿಸಿದರು.
ಇದೇ ವೇಳೆ, ಎನ್‌ಜಿಒ ಕಾಮನ್ ಕಾಸ್ ಪರ ವಾದಿಸಿದ ಹಿರಿಯ ನ್ಯಾಯವಾದಿ ಶಾಂತಿ ಭೂಷಣ್, “ಸರ್ಕಾರವು ಉದ್ದೇ ಶಪೂರ್ವಕವಾಗಿ ಲೋಕಪಾಲರನ್ನು ನೇಮಕ ಮಾಡುತ್ತಿಲ್ಲ. ಲೋಕಪಾಲರನ್ನು ತ್ವರಿತವಾಗಿ ನೇಮಕ ಮಾಡಬೇಕೆಂದು ಸ್ವತಃ ಲೋಕಪಾಲ ಕಾಯ್ದೆಯೇ ಹೇಳುತ್ತದೆ,’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Test; ದಕ್ಷಿಣ ಆಫ್ರಿಕಾ ಎದುರು ನಿಕೃಷ್ಟ ಮೊತ್ತಕ್ಕೆ ಶ್ರೀಲಂಕಾ ಆಲೌಟ್
Bangladesh ಹಿಂಸಾಚಾರ: ಕೋಲ್ಕತಾ ಹಿಂದೂ ಸಂಘಟನೆಗಳ ಭಾರೀ ಪ್ರತಿಭಟನೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.