Hathras ಕಾಲ್ತುಳಿತ ಹಿಂದೆ ದೊಡ್ಡ ಸಂಚು, ಪೊಲೀಸರಿಂದಲೂ ತಪ್ಪಾಗಿದೆ; ಎಸ್‌ಐಟಿ
Team Udayavani, Jul 9, 2024, 9:57 PM IST
ಲಕ್ನೋ: ಹಾಥ್ರಸ್ ಕಾಲ್ತುಳಿತ ಘಟನೆಯ ಹಿಂದೆ ದೊಡ್ಡ ಸಂಚು ನಡೆದಿರುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ. ಈ ಬಗ್ಗೆ ಸಮಗ್ರ ತನಿಖೆ ಅಗತ್ಯ ಎಂದು ವಿಶೇಷ ತನಿಖಾ ತಂಡ (ಎಸ್‌ಐಟಿ) ಮಂಗಳವಾರ ಉತ್ತರಪ್ರದೇಶಕ್ಕೆ ಸಲ್ಲಿಸಿದ ವರದಿಯಲ್ಲಿ ಹೇಳಿದೆ. ಇದರ ಬೆನ್ನಲ್ಲೇ ಸರ್ಕಾರವು ಉಪ ವಿಭಾಗಾಧಿಕಾರಿ (ಎಸ್‌ಡಿಎಂ), ವೃತ್ತ ನಿರೀಕ್ಷಕ (ಸರ್ಕಲ್ ಆಫೀಸರ್), ತಹಸೀಲ್ದಾರ್, ಇನ್ಸ್‌ಪೆಕ್ಟರ್ ಸೇರಿ 6 ಅಧಿಕಾರಿಗಳನ್ನು ಅಮಾನತು ಮಾಡಿದೆ.
ಪ್ರಕರಣ ಸಂಬಂಧ ಇಲ್ಲಿಯವರೆಗೆ 9 ಜನರನ್ನು ಬಂಧಿಸಿ ವಿಚಾರಣೆ ಮಾಡಲಾಗಿದೆ. ಜುಲೈ 2ರಂದು ಸಂಭವಿಸಿದ ಹಾಥ್ರಸ್ ಕಾಲ್ತುಳಿತದಲ್ಲಿ 121 ಜನರು ಮೃತಪಟ್ಟಿದ್ದರು.
ಕಾಲು¤ಳಿತಕ್ಕೆ ಕಾರ್ಯಕ್ರಮದ ಸಂಘಟಕರನ್ನು ಹೊಣೆಗಾರರನ್ನಾಗಿ ಮಾಡಿರುವ ಎಸ್‌ಐಟಿ, ಬಹು ಸಂಖ್ಯೆಯಲ್ಲಿ ನೆರೆದಿದ್ದ ಜನರನ್ನು ನಿರ್ವಹಣೆ ಮಾಡಲು ಸೂಕ್ತ ವ್ಯವಸ್ಥೆ ಮಾಡಿರಲಿಲ್ಲ. ಜತೆಗೆ, ಸ್ಥಳೀಯ ಆಡಳಿತ ಮತ್ತು ಪೊಲೀಸರು ಈ ಕಾರ್ಯಕ್ರಮವನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ ಮತ್ತು ಹಿರಿಯ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ನೀಡುವಲ್ಲಿ ತಪ್ಪೆಸಗಿದೆ ಎಂದು ತಿಳಿಸಿದೆ.
ಜಿಲ್ಲಾಡಳಿತ, ಪೊಲೀಸ್, ಸಾಮಾನ್ಯ ಜನರು ಮತ್ತು ಪ್ರತ್ಯಕ್ಷದರ್ಶಿಗಳು ಸೇರಿದಂತೆ 125 ಜನರ ಹೇಳಿಕೆಯನ್ನು ಎಸ್‌ಐಟಿ ತನಿಖೆ ವೇಳೆ ದಾಖಲಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
ವಕ್ಫ್ ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.