ಮಹಾರಾಷ್ಟ್ರದಲ್ಲಿ ಬಿಜೆಪಿ ಏಕಾಂಗಿ ಸ್ಪರ್ಧೆ
Team Udayavani, Jul 23, 2018, 6:00 AM IST
ನವದೆಹಲಿ: ಅವಿಶ್ವಾಸ ಗೊತ್ತುವಳಿ ಮಂಡನೆಯಲ್ಲಿ ಭಾಗವಹಿಸಿದ ಶಿವಸೇನೆ, ಇನ್ನೊಂದೆಡೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮಾಡಿದ ಭಾಷಣವನ್ನು ಹೊಗಳಿದೆ. ಇದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಸಿಟ್ಟಿಗೆ ಕಾರಣವಾಗಿದ್ದು, ಲೋಕಸಭೆ ಚುನಾವಣೆಯಲ್ಲಿ ಶಿವಸೇನೆ ಜೊತೆಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಘೋಷಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಲೋಕಸಭೆ ಚುನಾವಣೆ ಹಾಗೂ ವಿಧಾನಸಭೆ ಚುನಾವಣೆಯನ್ನು ಏಕಾಂಗಿಯಾಗಿ ಎದುರಿಸಲು ಸಜ್ಜಾಗುವಂತೆ ಪಕ್ಷದ ಕಾರ್ಯಕರ್ತರಿಗೆ ಸೂಚಿಸಿದ್ದಾರೆ. ಇದಕ್ಕಾಗಿ ಶಾ 23 ಅಂಶಗಳ ಕಾರ್ಯಯೋಜನೆಯನ್ನೂ ಸಿದ್ಧಪಡಿಸಿ, ಕಾರ್ಯಕರ್ತರೊಂದಿಗೆ ಹಂಚಿಕೊಂಡಿದ್ದಾರೆ.
ರಾಜ್ಯದ ಎಲ್ಲ ಸಾಮಾಜಿಕ ಮಾಧ್ಯಮ ಗ್ರೂಪ್ಗ್ಳನ್ನು ಪುನಃ ಸಕ್ರಿಯಗೊಳಿಸುವಂತೆ ಸೂಚಿಸಲಾಗಿದ್ದು, ಏಕ್ ಬೂತ್, 25 ಯೂತ್ (ಒಂದು ಮತಗಟ್ಟೆ, 25 ಯುವಕರು) ಎಂಬ ಫಾರ್ಮುಲಾ ಅಡಿಯಲ್ಲಿ ಕೆಲಸಮಾಡುವಂತೆ ಸೂಚಿಸಿದ್ದಾರೆ. ಪ್ರತಿ ಮತಗಟ್ಟೆಯಲ್ಲೂ ಬೈಕ್ ಹೊಂದಿರುವ ಕನಿಷ್ಠ 5 ಕಾರ್ಯಕರ್ತರನ್ನು ನೇಮಿಸಬೇಕು. ಪ್ರತಿ ದೇವಸ್ಥಾನ, ಮಸೀದಿ ಹಾಗೂ ಚರ್ಚ್ಗಳ ಮುಖ್ಯಸ್ಥರನ್ನು ಸಂಪರ್ಕಿಸಬೇಕು. ವಿಪಕ್ಷಗಳ ಸಾಮರ್ಥ್ಯ ಹಾಗೂ ಸಮಸ್ಯೆಯನ್ನು ಪಟ್ಟಿ ಮಾಡಬೇಕು ಎಂದು ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.