ಗೋವಾ ಗೆದ್ದ ಬಿಜೆಪಿ; 22 ವಿಶ್ವಾಸಮತ ಪಡೆದ ಪರ್ರಿಕರ್
Team Udayavani, Mar 17, 2017, 6:23 AM IST
ಪಣಜಿ/ಹೊಸದಿಲ್ಲಿ: ನಿರೀಕ್ಷೆಯಂತೆಯೇ ಗೋವಾ ಸಿಎಂ ಮನೋಹರ ಪಾರೀಕರ್ ಗುರುವಾರ ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತುಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ. 40 ಸದಸ್ಯ ಬಲದ ಅಸೆಂಬ್ಲಿಯಲ್ಲಿ 22 ಶಾಸಕರ ಬೆಂಬಲದೊಂದಿಗೆ ವಿಶ್ವಾಸಮತದ ಪರೀಕ್ಷೆಯಲ್ಲಿ ಪಾರೀಕರ್ ತೇರ್ಗಡೆ ಹೊಂದಿದ್ದಾರೆ.
ಈ ಮೂಲಕ ಅತಂತ್ರ ವಿಧಾನ ಸಭೆಯಿಂದಾಗಿ ಮೂಡಿದ್ದ ರಾಜ ಕೀಯ ಅನಿಶ್ಚಿತತೆಗೆ ತೆರೆ ಬಿದ್ದಂತಾ ಗಿದೆ. ಆದರೆ, ಈ ಬೆಳವಣಿಗೆಯಿಂದ ಕಾಂಗ್ರೆಸ್‌ನೊಳಗಿದ್ದ ಅಸಮಾಧಾನ ಸ್ಫೋಟವಾಗಿದ್ದು, ಹೈಕಮಾಂಡ್ ವಿರುದ್ಧ ಸ್ಥಳೀಯ ನಾಯಕರು ತಿರುಗಿ ಬೀಳುವಂತೆ ಮಾಡಿದೆ.
ಪಾರೀಕರ್ ವಿಶ್ವಾಸ; ಕೈ ಶಾಸಕ ಗೈರು: 17 ಶಾಸಕರನ್ನು ಹೊಂದಿರುವ ಅತಿದೊಡ್ಡ ಪಕ್ಷ ಕಾಂಗ್ರೆಸ್‌ಗೆ ತೀವ್ರ ಮುಖಭಂಗವಾಗುವಂತೆ ಬಿಜೆಪಿಯ 12, ಪಕ್ಷೇತರರು ಹಾಗೂ ಇತರ ಸಣ್ಣ ಪಕ್ಷಗಳ 10 ಶಾಸಕರ ಬೆಂಬಲದೊಂದಿಗೆ ಗುರುವಾರ ಗೋವಾ ವಿಧಾನಸಭೆಯಲ್ಲಿ ಪಾರೀಕರ್ ವಿಶ್ವಾಸಮತ ಸಾಬೀತು ಪಡಿಸಿದ್ದಾರೆ. ಅಚ್ಚರಿಯೆಂಬಂತೆ, ಕಾಂಗ್ರೆಸ್ ಶಾಸಕ ವಿಶ್ವಜಿತ್ ರಾಣೆ ಪ್ರಮುಖ ವಿಶ್ವಾಸಮತ ಪ್ರಕ್ರಿಯೆಗೆ ಗೈರಾಗಿದ್ದಲ್ಲದೆ, ಅನಂತರ ಶಾಸಕ ಸ್ಥಾನಕ್ಕೆ ಹಾಗೂ ಕಾಂಗ್ರೆಸ್‌ಗೆ ರಾಜೀನಾಮೆ ಸಲ್ಲಿಸಿದ್ದಾರೆ. ಇವರು ಕಾಂಗ್ರೆಸ್‌ನ ಹಿರಿಯ ನಾಯಕ, ಮಾಜಿ ಸಿಎಂ ಪ್ರತಾಪ್ ಸಿನ್ಹಾ ರಾಣೆ ಅವರ ಪುತ್ರ. ಪಕ್ಷ ತ್ಯಜಿಸಿ
ರುವ ವಿಶ್ವಜಿತ್, ಬಹುಮತ ಬಂದರೂ ಸರಕಾರ ರಚಿಸುವಲ್ಲಿ ವಿಫಲವಾದ ಕಾಂಗ್ರೆಸ್ ನಾಯಕತ್ವದ ವಿರುದ್ಧ ಕಿಡಿಕಾರಿದ್ದಾರೆ. ಜತೆಗೆ, ಹೈಕಮಾಂಡ್‌ನ ನಿಲುವಿಗೆ ಬೇಸತ್ತು ರಾಜೀನಾಮೆ ನೀಡುತ್ತಿರುವುದಾಗಿಯೂ ಹೇಳಿದ್ದಾರೆ. ಏತನ್ಮಧ್ಯೆ, ಎನ್‌ಸಿಪಿ ಶಾಸಕ ಚರ್ಚಿಲ್ ಅಲೆಮಾವೋ ಅವರೂ ಬಿಜೆಪಿ ಪರ ಮತ ಚಲಾಯಿಸಿದ್ದು, ಈ ಹಿನ್ನೆಲೆಯಲ್ಲಿ ಅವರಿಗೆ ಎನ್‌ಸಿಪಿ ಷೋಕಾಸ್ ನೋಟಿಸ್ ಜಾರಿ ಮಾಡಿದೆ.
ಕಾಂಗ್ರೆಸ್ ಬಗ್ಗೆ ವ್ಯಂಗ್ಯ: ವಿಶ್ವಾಸಮತ ಸಾಬೀತಿನ ಬಳಿಕ ಮಾತನಾಡಿದ ಸಿಎಂ ಪಾರೀಕರ್, ಕಾಂಗ್ರೆಸ್ ಬಳಿ ಬಹುಮತಕ್ಕೆ ಬೇಕಾದ ಸಂಖ್ಯೆಯೇ ಇರಲಿಲ್ಲ. ಗೋವಾ ಉಸ್ತುವಾರಿ ದಿಗ್ವಿಜಯ್ ಸಿಂಗ್‌ರನ್ನು ಕಿತ್ತುಹಾಕಬೇಕೆಂಬ ಒತ್ತಾಯಗಳು ಕೇಳಿಬಂದಿದ್ದರಿಂದ ಕಾಂಗ್ರೆಸ್ ಸುಖಾಸುಮ್ಮನೆ ತಮಗೆ ಶಾಸಕರ ಬೆಂಬಲವಿದೆ ಎಂದು ನಾಟಕವಾಡಿತು. ನೀವು ಕೆಲಸ ಮಾಡುವ ಬದಲು ಗೋವಾಗೆ ಕೇವಲ ಎಂಜಾಯ್ ಮಾಡಲು ಬಂದಾಗ ಇಂಥದ್ದೆಲ್ಲ ಆಗುತ್ತದೆ ಎಂದು ವ್ಯಂಗ್ಯವಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ
November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
MUST WATCH
ಹೊಸ ಸೇರ್ಪಡೆ
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ
Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.