ಫೆ.1ಕ್ಕೆ ಕೇಂದ್ರ ಬಜೆಟ್ ಮಂಡನೆ
Team Udayavani, Dec 4, 2017, 10:26 AM IST
ಹೊಸದಿಲ್ಲಿ: ಮುಂದಿನ ವರ್ಷದ ಜನವರಿ 30ರಿಂದ 2018ರ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಫೆ. 1ರಂದು ಬಜೆಟ್ ಮಂಡನೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಸರಕಾರದ ಮೂಲಗಳು ತಿಳಿಸಿವೆ. ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಜಾರಿಯಾದ ಅನಂತರದ ಮೊದಲ ಬಜೆಟ್ ಇದಾಗಲಿದ್ದು, ಇದು ಮೋದಿ ಸರಕಾರದ ಕಡೆಯ ಪೂರ್ಣ ಪ್ರಮಾಣದ ಬಜೆಟ್ ಆಗಿರಲಿದೆ.
ಬಜೆಟ್ ಅಧಿವೇಶನದ ಬಗ್ಗೆ ಕೇಂದ್ರ ವಿತ್ತ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ನೀಡಿರುವ ಮಾಹಿತಿ ಪ್ರಕಾರ, ಜ. 30ರಂದು ಶುರುವಾಗುವ ಬಜೆಟ್ ಅಧಿವೇಶನದ ವೇಳೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಉಭಯ ಸದನಗಳನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮರುದಿನ, ಜಿಎಸ್ಟಿ ಅನಂತರದ ಆರ್ಥಿಕ ಸ್ಥಿತಿಗತಿಗಳ ಕುರಿತಾಗಿ ನಡೆಸಲಾಗುತ್ತಿರುವ ಸಮೀಕ್ಷಾ ವರದಿಯನ್ನು ಸದನದಲ್ಲಿ ಮಂಡಿಸಲಾಗುತ್ತದೆ.
ಈ ಬಾರಿಯ ಚಳಿಗಾಲದ ಅಧಿವೇಶನ ಡಿ. 15ರಿಂದ ಜನವರಿ 5ರ ವರೆಗೆ ನಡೆಯಲಿದ್ದು, ಈ ಅಧಿವೇಶನ ಮುಗಿದ ಕೇವಲ ಒಂದು ತಿಂಗಳೊಳಗೇ ಮತ್ತೂಂದು ಅಧಿವೇಶನ (ಬಜೆಟ್ ಅಧಿವೇಶನ) ನಡೆಯುತ್ತಿರುವುದು ಅಪರೂಪದ ಸಂಗತಿ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tollywood: ‘ಗೇಮ್ ಚೇಂಜರ್ʼಗೆ ರಾಮ್ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.