Tax ಹೊರೆ ಇಳಿಸಲು ಕೇಂದ್ರ ಸರಕಾರ ಚಿಂತನೆ?
ಹಣದುಬ್ಬರದ ಆತಂಕವನ್ನು ಪರಿಗಣಿಸಿದೆ ಕೇಂದ್ರ?
Team Udayavani, Jun 18, 2024, 6:40 AM IST
ಹೊಸದಿಲ್ಲಿ: ಈ ಬಾರಿ ಬಜೆಟ್ನಲ್ಲಿ ಸರಕಾರ ಖಾಸಗಿ ಆದಾಯ ತೆರಿಗೆ ಇಳಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಲೋಕಸಭಾ ಚುನಾವಣೆ ಯಲ್ಲಿ ಬಿಜೆಪಿಗೆ ಸ್ವತಂತ್ರ ವಾಗಿ ಬಹು ಮತ ಗಳಿಸಲು ಸಾಧ್ಯವಾ ಗಿಲ್ಲ. ಫಲಿತಾಂಶದ ಅನಂತರ ನಡೆದ ಸಮೀಕ್ಷೆಯಲ್ಲಿ ಜನರು ಹಣದುಬ್ಬರ, ನಿರುದ್ಯೋಗ, ಆದಾಯ ಕುಸಿತದಿಂದ ಕಳವಳ ಗೊಂಡಿದ್ದಾರೆ ಎಂದು ತಿಳಿದು ಬಂದಿತ್ತು.
2023-24ರಲ್ಲಿ ಭಾರತ ವಿಶ್ವದಲ್ಲೇ ಗರಿಷ್ಠ ಶೇ.8.2ರ ದರದಲ್ಲಿ ಆರ್ಥಿಕ ಪ್ರಗತಿ ಸಾಧಿಸಿದ್ದರೂ, ಜನರ ಕೊಳ್ಳುವಿಕೆ ಬೆಳವಣಿಗೆ ದರ ಅದರ ಅರ್ಧ ಮಾತ್ರ ಇತ್ತು. ಇದನ್ನು ಕೇಂದ್ರ ಗಂಭೀರವಾಗಿ ಪರಿಗಣಿಸಿದೆ ಎನ್ನಲಾಗಿದೆ. ಮೋದಿ ಪ್ರಧಾನಿಯಾಗಿ 3ನೇ ಬಾರಿಗೆ ಅಧಿಕಾರ ಸ್ವೀಕರಿಸುವ ಮುನ್ನ, ಮಧ್ಯಮ ವರ್ಗದ ಉಳಿತಾಯ ಹೆಚ್ಚಿಸಿ, ಜೀವನ ಗುಣಮಟ್ಟ ವೃದ್ಧಿ ಸುವು ದಾಗಿ ತಿಳಿಸಿದ್ದರು. ಆದಾಯ ತೆರಿಗೆ ಇಳಿಸುವುದರಿಂದ ಜನರ ಹಣ ಉಳಿತಾ ಯವಾಗುತ್ತದೆ ಎಂಬ ಚಿಂತನೆ ಕೇಂದ್ರ ದಲ್ಲಿದೆ ಎನ್ನಲಾಗಿದೆ.
ಎಷ್ಟು ಇಳಿಕೆಯಾಗಬಹುದು?: ಇದರ ಬಗ್ಗೆ ಇನ್ನೂ ಖಚಿತ ಮಾಹಿತಿ ದೊರಕಿಲ್ಲ. ಆದರೆ ವಾರ್ಷಿಕವಾಗಿ 15 ಲಕ್ಷ ರೂ.ಗಿಂತ ಅಧಿಕ ಹಣ ಗಳಿಸುವ ವ್ಯಕ್ತಿಗಳಿಗೆ ತೆರಿಗೆ ಇಳಿಯಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
MUST WATCH
ಹೊಸ ಸೇರ್ಪಡೆ
Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.