ಕುರಂಗಣಿ ಪರ್ವತದಲ್ಲಿ ಕಾಳ್ಗಿಚ್ಚು ಮೃತರ ಸಂಖ್ಯೆ 8ಕ್ಕೆ ಏರಿಕೆ
Team Udayavani, Mar 12, 2018, 9:10 AM IST
ಥೇಣಿ : ತಮಿಳುನಾಡಿನ ಥೇಣಿ ಜಿಲ್ಲೆಯ ಕುರಂಗಣಿ ಪರ್ವತ ಪ್ರದೇಶದಲ್ಲಿ ರವಿವಾರ ಏಕಾಏಕಿ ಉಂಟಾದ ಕಾಳ್ಗಿಚ್ಚಿನಲ್ಲಿ ಕಾಳ್ಗಿಚ್ಚಿನಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಮೃತರಲ್ಲಿ ನಾಲ್ವರು ಮಹಿಳೆಯರು ನಾಲ್ವರು ಗಂಡಸರು ಹಾಗೂ ಓರ್ವ ಬಾಲಕ ಎಂದು ತಿಳಿದುಬಂದಿದೆ. ಈ ಮಾಹಿತಿಯನ್ನು ಮದುರೆ ವಲಯದ ಅರಣ್ಯ ಸಂರಕ್ಷಣಾಧಿಕಾರಿ ಖಚಿತಪಡಿಸಿದ್ದಾರೆ.
ಕೊಯಮತ್ತೂರು ಮತ್ತು ಈರೋಡ್‌ನ ಕಾಲೇಜು ವಿದ್ಯಾರ್ಥಿಗಳು, ಚೆನ್ನೈಯಿಂದ ಆಗಮಿಸಿದ ಮಹಿಳೆಯರು ರವಿವಾರ ಕುರಂಗಣಿ ಅರಣ್ಯ ಪ್ರದೇಶಕ್ಕೆ ಪ್ರವೇಶಿಸಿದ್ದಾರೆ. ಮೂಲಗಳ ಪ್ರಕಾರ ಅವರು ಅರಣ್ಯ ಇಲಾಖೆಯಿಂದ ಅನುಮತಿ ಪಡೆದಿರಲಿಲ್ಲ. ಒಟ್ಟು ಮೂವತ್ತೇಳು ಮಂದಿ ಪರ್ವತ ಪ್ರದೇಶದಲ್ಲಿ ಇದ್ದಾರೆ. ಕೊಯಮತ್ತೂರಿನಲ್ಲಿರುವ ವಾಯುಪಡೆಯ (ಐಎಎಫ್) ಹೆಲಿಕಾಪ್ಟರ್‌ಗಳನ್ನು ರಕ್ಷಣೆಗೆ ನಿಯೋಜಿಸಲಾಗಿದೆ. ಇದೇ ವೇಳೆ 27 ಮಂದಿಯನ್ನು ರಕ್ಷಿಸಲಾಗಿದೆ ಎಂದು ತಿಳಿದುಬಂದಿದೆ.
ಟ್ರಕ್ಕ್ಕಿಂಗ್ ತೆರಳಿದವರೆಲ್ಲರೂ 8ರಿಂದ ಮೂವತ್ತು ವರ್ಷದೊಳಗಿನವರಾಗಿದ್ದರೆ ಎಂದು ಹೇಳಲಾಗಿದೆ.
ಘಟನಾ ಸ್ಥಳದಲ್ಲಿ ಸೂಕ್ತ ಬೆಳಕಿನ ವ್ಯವಸ್ಥೆ ಇಲ್ಲದೇ ಇರುವುದರಿಂದ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಮದುರೆ ಅರಣ್ಯ ವಲಯದ ಹಿರಿಯ ಅಧಿಕಾರಿ, ಇದು ಚಾರಣ ಕೈಗೊಳ್ಳಲು ಸೂಕ್ತ ಸಮಯ ಅಲ್ಲ ಎಂದು ಪ್ರತಿಪಾದಿಸಿದ್ದಾರೆ.
ಕಾಳ್ಗಿಚ್ಚು ಉಂಟಾಗಿದ್ದರಿಂದ ರಕ್ಷಣಾ ಕಾರ್ಯಾಚರಣೆ ನಡೆಸಲು ಐಎಎಫ್ನ ಹೆಲಿಕಾಪ್ಟರ್‌ಗಳನ್ನು ನಿಯೋಜಿಸುವಂತೆ ಮುಖ್ಯಮಂತ್ರಿ ಎಡಪ್ಪಾಡಿ ಕೆ.ಪಳನಿಸ್ವಾಮಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ರಿಗೆ ಮನವಿ ಮಾಡಿಕೊಂಡಿದ್ದರು. ಅದಕ್ಕೆ ಸ್ಪಂದಿಸಿದ್ದ ರಕ್ಷಣಾ ಸಚಿವರು ಕೊಯಮತ್ತೂರಿನಲ್ಲಿರುವ ಏರ್‌ಬೇಸ್‌ಗೆ ನೆರವಾಗುವಂತೆ ಸೂಚಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.