ಮನೆಯ ಹಿರಿಯರಿಗಿನ್ನು ಮಕ್ಕಳೇ “ಗುರುಗಳು’
Team Udayavani, Nov 5, 2018, 9:10 AM IST
ಜೈಪುರ: ಮನೆಯಲ್ಲಿರುವ ಅನಕ್ಷರಸ್ಥ ಹಿರಿಯರಿಗೆ ಮಕ್ಕಳೇ ಕಲಿಸಿಕೊಡುವಂಥ ಹೊಸ ಅಭಿಯಾನವೊಂದನ್ನು ಸದ್ಯದಲ್ಲೇ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯವು ಆರಂಭಿಸಲಿದೆ ಎಂದು ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದ್ದಾರೆ.
ಈ ಅಭಿಯಾನದಡಿ 6ರಿಂದ 10ನೇ ತರಗತಿ ವಿದ್ಯಾರ್ಥಿಗಳನ್ನು ಬಳಸಿಕೊಂಡು, ಮನೆಯಲ್ಲಿನ ಅನಕ್ಷರಸ್ಥ ಸದಸ್ಯರನ್ನು ಅಕ್ಷರಸ್ಥರನ್ನಾಗಿಸುವಂತೆ ಉತ್ತೇಜಿಸಲಾಗುತ್ತದೆ. “ಪಡ್ನಾ-ಲಿಖಾ°’ ಎಂಬ ಹೆಸರಿನ ಈ ಅಭಿಯಾನದಲ್ಲಿ ತಮ್ಮ ಹಿರಿಯರಿಗೆ ಮಕ್ಕಳೇ “ಗುರು’ಗಳಾಗಿರುತ್ತಾರೆ. ಅದಕ್ಕೆ ಬೇಕಾದ ಪರಿಕರಗಳನ್ನು ನಾವೇ ಮಕ್ಕಳಿಗೆ ಒದಗಿಸುತ್ತೇವೆ ಎಂದೂ ಅವರು ಮಾಹಿತಿ ನೀಡಿದ್ದಾರೆ.
ಜಾವಡೇಕರ್ ಜೈಪುರದ ಒಂದು ಕುಟುಂಬವನ್ನು ಭೇಟಿಯಾದ ವೇಳೆ ಆ ಮನೆಯ ಹಿರಿಯರಿಗೆ ಅಕ್ಷರಾಭ್ಯಾಸ ಮಾಡಿಸುವಂತೆ ಮಕ್ಕಳಿಗೆ ಸೂಚಿಸಿದರು. ನಂತರ, ಇದರ ಮೂಲಕ ಈ ಯೋಜನೆಗೆ ಅನೌಪಚಾರಿಕ ಚಾಲನೆ ನೀಡಿದ್ದೇನೆ. ಎರಡು ತಿಂಗಳಲ್ಲೇ ಇದು ಅಧಿಕೃತವಾಗಿ ಜಾರಿಗೆ ಬರಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಒಂದೇ ವಾರದಲ್ಲಿ ತಲೆ ಬೋಳು.. 3 ಗ್ರಾಮಗಳ ಜನರಿಗೆ ತಲೆ ಕೂದಲು ಉದುರುವ ಸಮಸ್ಯೆ!
Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
MUST WATCH
ಹೊಸ ಸೇರ್ಪಡೆ
Mangaluru: ಜ.11, 12ರಂದು ಮಂಗಳೂರು ಲಿಟ್ ಫೆಸ್ಟ್… ಕಲೆ, ಸಾಹಿತ್ಯ, ಜಾನಪದಗಳ ಸಂಗಮ
Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್
Maharashtra: ಒಂದೇ ವಾರದಲ್ಲಿ ತಲೆ ಬೋಳು.. 3 ಗ್ರಾಮಗಳ ಜನರಿಗೆ ತಲೆ ಕೂದಲು ಉದುರುವ ಸಮಸ್ಯೆ!
Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…
Cricket; ಮಹಿಳಾ ಅಂಡರ್-19 ಏಕದಿನ ಟ್ರೋಫಿ: ಅಸ್ಸಾಂ ವಿರುದ್ಧ ಕರ್ನಾಟಕಕ್ಕೆ ಜಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.