ಜಲಿಯನ್‌ವಾಲಾಬಾಗ್ ಸ್ಮಾರಕಕ್ಕೆ ಪುಷ್ಪ ನಮನ
Team Udayavani, Apr 14, 2019, 6:00 AM IST
ಹೊಸದಿಲ್ಲಿ: ಜಲಿಯನ್ ವಾಲಾಬಾಗ್ ಹತ್ಯಾಕಾಂಡ ನಡೆದು ಶನಿವಾರಕ್ಕೆ 100 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಅನೇಕ ನಾಯಕರು ಹತ್ಯಾಕಾಂಡದ ಸಂತ್ರಸ್ತರನ್ನು ಸ್ಮರಿಸಿದ್ದಾರೆ. ಈ ಹತ್ಯಾಕಾಂಡದಲ್ಲಿ ಹುತಾತ್ಮರನ್ನು ನಾವು ಎಂದಿಗೂ ಮರೆಯ ಲಾಗದು. ಇವರ ಸಾಹಸವು ದೇಶಕ್ಕಾಗಿ ದುಡಿಯಲು ನಮಗೆ ಇನ್ನಷ್ಟು ಪ್ರೋತ್ಸಾಹ ನೀಡಲಿದೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ಹತ್ಯಾಕಾಂಡಕ್ಕೆ 100 ವರ್ಷ ತುಂಬಿದ ನೆನಪಿಗಾಗಿ ಉಪರಾಷ್ಟ್ರಪತಿ ನಾಯ್ಡು ಅವರು 100 ರೂ. ಮುಖಬೆಲೆಯ ನಾಣ್ಯ ಹಾಗೂ ಅಂಚೆ ಚೀಟಿಯೊಂದನ್ನು ಬಿಡುಗಡೆ ಮಾಡಿದರು.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅಮೃತಸರದಲ್ಲಿರುವ ಜಲಿಯನ್ ವಾಲಾಬಾಗ್ ಸ್ಮಾರಕಕ್ಕೆ ಭೇಟಿ ನೀಡಿ, ಸಂತ್ರಸ್ತರಿಗೆ ಪುಷ್ಪನಮನ ಸಲ್ಲಿಸಿದ್ದಾರೆ. ಇದೇ ವೇಳೆ, 100 ವರ್ಷಗಳ ಹಿಂದೆ ನಮ್ಮ ಸ್ವಾತಂತ್ರ್ಯ ಹೋರಾಟಗಾರರು ಜಲಿಯನ್ ವಾಲಾಬಾಗ್‌ನಲ್ಲಿ ವೀರ ಮರಣವನ್ನಪ್ಪಿದ್ದಾರೆ. ಇದೊಂದು ಭೀಕರ ಹತ್ಯಾಕಾಂಡ ವಾಗಿದ್ದು, ನಾಗರಿಕತೆಯ ಇತಿಹಾಸದಲ್ಲೇ ಕಪ್ಪುಚುಕ್ಕೆಯಾಗಿದೆ ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಟ್ವೀಟ್ ಮಾಡಿದ್ದಾರೆ.
ಕ್ಷಮೆ ಕೇಳಿ: ಈ ಮಧ್ಯೆಯೇ ಹತ್ಯಾಕಾಂಡದ ಬಗ್ಗೆ ಕ್ಷಮೆ ಕೇಳು ವಂತೆ ಇಂಗ್ಲೆಂಡ್ ಸರಕಾರಕ್ಕೆ ಇಂಗ್ಲೆಂಡ್‌ನಲ್ಲಿ ಭಾರತೀಯ ಮೂಲದ ನಾಗರಿಕರ ಒತ್ತಡ ಹೆಚ್ಚಾಗಿದೆ. ಕಳೆದ ಕೆಲವು ದಿನಗಳಿಂದ ಇಂಗ್ಲೆಂಡ್‌ನ ಉಭಯ ಸದನಗಳಲ್ಲೂ ಸುದೀರ್ಘ ಚರ್ಚೆ ಈ ಬಗ್ಗೆ ನಡೆದಿದ್ದು, ಕೆಲವೇ ದಿನಗಳ ಹಿಂದೆ ಬ್ರಿಟನ್ ಪ್ರಧಾನಿ ಥೆರೆಸಾ ಮೇ, ಈ ಘಟನೆಗೆ ವಿಷಾದಿಸುತ್ತೇವೆ ಎಂದಷ್ಟೇ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
MUST WATCH
ಹೊಸ ಸೇರ್ಪಡೆ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.