ಗ್ಯಾಂಗ್‌ರೇಪ್ ಕೇಸ್:ಪ್ರಜಾಪತಿ ಸೆರೆ; 14 ದಿನಗಳ ನ್ಯಾಯಾಂಗ ಬಂಧನ
Team Udayavani, Mar 15, 2017, 9:04 AM IST
ಲಕ್ನೋ: ಉತ್ತರಪ್ರದೇಶದ ಎಸ್‌ಪಿ ಸರ್ಕಾರದಲ್ಲಿ ಸಚಿವರಾಗಿ ಮಹಿಳೆಯೊಬ್ಬಳ ಮೇಲೆ ಗ್ಯಾಂಗ್ ರೇಪ್ ನಡೆಸಿದ ಆರೋಪ ಹೊತ್ತು 15 ದಿವಸಗಳಿಂದ ತಲೆ ಮರೆಸಿಕೊಂಡಿದ್ದ ಮಾಜಿ ಸಚಿವ ಗಾಯತ್ರಿ ಪ್ರಜಾಪತಿಯನ್ನು ಕೊನೆಗೂ ಪೊಲೀಸರು ಬಂಧಿಸುವವಲ್ಲಿ ಯಶಸ್ವಿಯಾಗಿದ್ದಾರೆ.
ಲಕ್ನೋದ ಆಶಿಯಾನಾ ಪ್ರದೇಶದಲ್ಲಿ ಬಂಧಿಸಿ ನ್ಯಾಯಾಲಯದ ಎದರು ಹಾಜರು ಪಡಿಸಲಾಯಿತು. ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಅಖೀಲೇಶ್ ಸಿಂಗ್ ಸರ್ಕಾರ ರೇಪ್ ಆರೋಪ ಕೇಳಿ ಬಂದರೂ ಸಂಪುಟದಿಂದ ಕೈ ಬಿಟ್ಟಿರಲಿಲ್ಲ, ಮಾತ್ರವಲ್ಲದೆ ಎಫ್ಐಆರನ್ನೂ ದಾಖಲು ಮಾಡಿರಲಿಲ್ಲ. ಸುಪ್ರೀಂ ಕೋರ್ಟ್ ಆದೇಶ ನೀಡಿದ ಬಳಿಕವೇ ಎಫ್ಐಆರ್ ದಾಖಲು ಮಾಡಿ ಹಲವರನ್ನು ವಶಕ್ಕೆ ಪಡೆಯಲಾಗಿತ್ತು. ಪ್ರಜಾಪತಿ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಾಣಬೇಕಾಗಿತ್ತು.
49ರ ಹರೆಯದ ಎಸ್‌ಪಿ ನಾಯಕ ಗಾಯತ್ರಿ ಪ್ರಜಾಪತಿಯ ವಿರುದ್ಧ ಲುಕ್ ಔಟ್ ನೊಟೀಸ್ ಮಾತ್ರವಲ್ಲದೆ, ಜಾಮೀನು ರಹಿತ ಅರೆಸ್ಟ್ ವಾರೆಂಟ್ ಕೂಡ ಜಾರಿ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಪಟ್ಟು ಈ ತನಕ ಪೊಲೀಸರು ವಶಕ್ಕೆ ತೆಗೆದುಕೊಂಡಿರುವವರ ಸಂಖ್ಯೆ ಈಗ ಏಳಕ್ಕೆ ಏರಿದೆ.
ಮಹಿಳೆಯೊಬ್ಬಳ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಮಗಳ ಮೇಲೆ ಅತ್ಯಾಚಾರದ ಯತ್ನ ಪ್ರಕರಣಕ್ಕೆ ಸಂಬಂಧಪಟ್ಟು ಸಚಿವ ಗಾಯತ್ರಿ ಪ್ರಜಾಪತಿ ಮತ್ತು ಇತರ ಆರು ಮಂದಿಯ ವಿರುದ್ಧ ಕಳೆದ ಫೆ.17ರಂದು ಸುಪ್ರೀಂ ಕೋರ್ಟ್ ಆಣತಿಯ ಮೇರೆಗೆ ಎಫ್ಐಆರ್ ದಾಖಲಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chennai: ತಮಿಳುನಾಡಿನಲ್ಲಿ ಮತ್ತೊಬ್ಬ ವೈದ್ಯನ ಮೇಲೆ ದಾಳಿ, ಪರಾರಿ
Manipur: ಮತ್ತೆ ಸಶಸ್ತ್ರಪಡೆಗಳ ಕಾಯ್ದೆ ಜಾರಿ; ಸೇನಾ ಕಾರ್ಯಾಚರಣೆ:ಶಸ್ತ್ರಾಸ್ತ್ರಗಳು ವಶಕ್ಕೆ
Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್
Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು
Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.