ಅಯ್ಯಪ್ಪನಿಗೆ ಭದ್ರತೆಯ ಕೋಟೆ


Team Udayavani, Nov 5, 2018, 9:19 AM IST

shabarimale.png

ಶಬರಿಮಲೆ: ಮಹಿಳಾ ಪ್ರವೇಶ ವಿವಾದದ ನಡುವೆಯೇ, ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲ ಸೋಮವಾರ ಸಂಜೆ 5 ಗಂಟೆಗೆ ತೆರೆಯಲಿದೆ. ಅದಕ್ಕೆ ಪೂರಕವಾಗಿ ಪಂಪಾ ನದಿ ತೀರ ಪ್ರದೇಶದಿಂದ ದೇಗುಲದ ಸನ್ನಿಧಾನದ ವರೆಗೆ ಬಿಗಿ ಪೊಲೀಸ್‌ ಬಂದೋಬಸ್ತ್ ಏರ್ಪಡಿಸಲಾಗಿದೆ. ಹೀಗಾಗಿ ದೇಗುಲ ಆವರಣ ಈಗ ಭದ್ರತೆಯಿಂದ ಕೂಡಿದ ಕೋಟೆಯಂತೆ ಕಂಡುಬರುತ್ತಿದೆ.

ಇತ್ತೀಚೆಗೆ ನಡೆದ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಈ ಬಾರಿ ಕೇರಳ ಸರಕಾರ ಕಟ್ಟುನಿಟ್ಟಿನ ಬಂದೋಬಸ್ತ್ ಕ್ರಮಗಳನ್ನು ಕೈಗೊಂಡಿದೆ. 20 ಮಂದಿ ಕಮಾಂಡೋ ತಂಡ ಸೇರಿದಂತೆ 2,300ಕ್ಕೂ ಅಧಿಕ ಮಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಅಲ್ಲದೆ, 50 ವರ್ಷ ವಯಸ್ಸು ದಾಟಿದ 100 ಮಂದಿ ಮಹಿಳಾ ಪೊಲೀಸರನ್ನೂ ನಿಯೋಜಿಸಲಾಗಿದೆ. ದೇಗುಲದ ಸನ್ನಿಧಾನಕ್ಕೆ ಪಂಪಾದಿಂದ ನೀಲಿಮಲ- ಅಪ್ಪಚ್ಚಿಮೇಡು- ಶರಮುಕ್ತಿ ಮೂಲಕ ಭಕ್ತರಿಗೆ ತೆರಳಲು ಸೂಚಿಸಲಾಗಿದೆ.

ಪತ್ರಕರ್ತೆಯರು ಬೇಡ:  ಶಬರಿಮಲೆ ಕರ್ಮಸಮಿತಿ ಎಲ್ಲಾ ಮಾಧ್ಯಮ ಸಂಸ್ಥೆಗಳ ಮುಖ್ಯಸ್ಥರಿಗೆ ಮನವಿಯನ್ನು ಕಳುಹಿಸಿ, ದೇಗುಲ ಆವರಣಕ್ಕೆ ಮಹಿಳಾ ಪತ್ರಕರ್ತರನ್ನು  ವರದಿ ಮಾಡಲು ಕಳುಹಿಸುವುದು ಬೇಡ ಎಂದು ಒತ್ತಾಯಿಸಿದೆ. ಅದಕ್ಕೆ ಪೂರಕವಾಗಿ ಕೇರಳ ಡಿಜಿಪಿ ಲೋಕನಾಥ್‌ ಬೆಹಾರ ಸ್ಪಷ್ಟನೆ ನೀಡಿ ಮಾಧ್ಯಮದವ ರಿಗೆ ದೇಗುಲ ಪ್ರವೇಶಿಸದಂತೆ ನಿಷೇಧ ಹೇರಲಾಗಿಲ್ಲ ಎಂದಿದ್ದಾರೆ. 

5 ಗಂಟೆಗೆ:  ಸೋಮವಾರ ಸಂಜೆ 5 ಗಂಟೆಗೆ ತಂತ್ರಿ ಕಂದರಾರು ರಾಜೀವರಾರು ಮತ್ತು ಮುಖ್ಯ ಅರ್ಚಕ ಉಣ್ಣಿಕೃಷ್ಣನ್‌ ನಂಬೂದಿರಿ ಜಂಟಿಯಾಗಿ ಗರ್ಭಗುಡಿಯ ಬಾಗಿಲು ತೆರೆಯಲಿದ್ದಾರೆ. ಶ್ರೀ ಚೈತ್ರ ಅತ್ತ ತಿರುನಾಳ್‌ ಪ್ರಯುಕ್ತ ವಿಶೇಷ ಪೂಜೆ ಮಂಗಳವಾರ ನಡೆಯಲಿದೆ. ಒಟ್ಟು 30 ಗಂಟೆಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಅದಕ್ಕಾಗಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಸೆ.28ರಂದು ದೇಗುಲಕ್ಕೆ ಎಲ್ಲಾ ವಯೋ ಮಿತಿಯ ಮಹಿಳೆಯರು ಪ್ರವೇಶಿಸಬಹುದು ಎಂದು ತೀರ್ಪು ನೀಡಿದ ಬಳಿಕ 2ನೇ ಬಾರಿಗೆ ದೇಗುಲದ ಬಾಗಿಲು ತೆರೆಯಲಾಗು ತ್ತಿದೆ. ತಿರುವಾಂಕೂರು ರಾಜಮನೆತನದ ಕೊನೆಯ ದೊರೆ ತಿರುವಾಂಕೂರು ಚಿತಿರ ತಿರುನಾಳ್‌ ಬಲರಾಮ ವರ್ಮ ಜನ್ಮದಿನ ಪ್ರಯುಕ್ತ ಪೂಜೆ ನಡೆಯಲಿದೆ. ಮಂಗಳವಾರ ರಾತ್ರಿ 10 ಗಂಟೆಗೆ ದೇಗುಲದ ಬಾಗಿಲು ಮುಚ್ಚಲಿದೆ. ನಂತರ ನ.17ರಿಂದ ಮೂರು ತಿಂಗಳ ಕಾಲ ದೀರ್ಘಾವಧಿಗೆ ಅದನ್ನು ತೆರೆಯಲಾಗುತ್ತದೆ.

ಹೋರಾಟ ಬಿರುಸು: ಕೇರಳದ ಬಿಜೆಪಿ ಘಟಕ ಮತ್ತು ಹಿಂದೂ ಪರ ಸಂಘಟನೆಗಳು ಅಯ್ಯಪ್ಪ ದೇಗುಲಕ್ಕೆ ಮಹಿಳೆಯರು ಪ್ರವೇಶಿಸ ಬಾರದು ಎಂಬ ವಿಚಾರ ಪ್ರಧಾನವಾಗಿಟ್ಟುಕೊಂಡು ಹೋರಾಟ ತೀವ್ರಗೊಳಿಸಲು ನಿರ್ಧರಿಸಿವೆ. ಪಂದಳಂ ರಾಜಮನೆತನದ ಸದಸ್ಯರು ದೇಗುಲದ ಸುತ್ತಮುತ್ತ ಹೆಚ್ಚಿನ ಪ್ರಮಾಣದಲ್ಲಿ ಭದ್ರತಾ ಸಿಬಂದಿ ಪ್ರವೇಶಿಸಿದ್ದು ನೋವಿನ ವಿಚಾರ ಎಂದು ಹೇಳಿದ್ದಾರೆ. 

ಟಾಪ್ ನ್ಯೂಸ್

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

kejriwal-2

Distribution of money ಆರೋಪ: ಬಿಜೆಪಿ ಅಭ್ಯರ್ಥಿ ಸ್ಪರ್ಧೆ ನಿರ್ಬಂಧಕ್ಕೆ ಕೇಜ್ರಿ ಮನವಿ

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

naksal (2)

ಸುಕ್ಮಾ ಎನ್‌ಕೌಂಟರ್‌: ಮೂವರು ನಕ್ಸಲರ ಹ*ತ್ಯೆ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

modi (4)

ಇಲಾಖಾ ಮುಖ್ಯಸ್ಥರಿಗೆ “ಮನ್‌ ಕೀ ಬಾತ್‌’ ಕೇಳುವುದು ಕಡ್ಡಾಯ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

robbers

Pakistan; ಡಕಾಯಿತರಿಂದ 3 ಹಿಂದೂ ಯುವಕರ ಅಪಹರಣ

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

naksal (2)

ಸುಕ್ಮಾ ಎನ್‌ಕೌಂಟರ್‌: ಮೂವರು ನಕ್ಸಲರ ಹ*ತ್ಯೆ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.