ಮಮತಾ ಆಕ್ಷೇಪ: ನ.22ರ ಘಟಬಂಧನ್ ಸಭೆ ಮುಂದಕ್ಕೆ
Team Udayavani, Nov 20, 2018, 9:03 AM IST
ಕೋಲ್ಕತಾ: “ಮಹಾಘಟಬಂಧನ್’ ಮೂಲಕ ಬಿಜೆಪಿ ನೇತೃತ್ವದ ಎನ್‌ಡಿಎ ಎದುರಿಸಲು ರಚನೆ ಮಾಡುವ ಪ್ರತಿಪಕ್ಷಗಳ ಒಕ್ಕೂಟದ ಸಭೆ ನಡೆಯುವಂತೆಯೇ ತೋರುತ್ತಿಲ್ಲ. ಈ ಹಿಂದೆ ನಿಗದಿಯಾಗಿದ್ದಂತೆ ನ.22ರ ಸಭೆ ಮುಂದೂಡಿಕೆಯಾಗಿದೆ. ಕೋಲ್ಕತಾದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾದ ಬಳಿಕ ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ಈ ಮಾಹಿತಿ ನೀಡಿ ದ್ದಾರೆ. ಹೊಸ ದಿನಾಂಕವನ್ನು ಇನ್ನಷ್ಟೇ ಗುರುತಿಸಬೇಕಾಗಿದೆ ಎಂದಿದ್ದಾರೆ. ಸಿಬಿಐ, ಜಾರಿ ನಿರ್ದೇಶನಾಲಯ, ಆದಾಯ ತೆರಿಗೆ ಇಲಾಖೆ, ಆರ್‌ಬಿಐಗಳನ್ನು ಕೇಂದ್ರ ದುರುಪಯೋಗ ಮಾಡುತ್ತಿದೆ ಎಂದು ನಾಯ್ಡು ದೂರಿದ್ದಾರೆ. ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿಆಕ್ಷೇಪದ ಹಿನ್ನೆಲೆಯಲ್ಲಿ ಈ ಬೆಳವಣಿಗೆಯಾಗಿದೆ.
ಮೂಲಗಳ ಪ್ರಕಾರ ಸಭೆ ಜನವರಿಯಲ್ಲಿ ನಡೆಯಲಿದೆ. ಈ ಬೆಳವಣಿಗೆಯಿಂದಾಗಿ 2019ರ ಲೋಕಸಭಾ ಚುನಾವಣೆಗೆ ಮಹಾಮೈತ್ರಿ ಮೂಲಕ ಬಿಜೆಪಿಯನ್ನು ಹೆಡೆಮುರಿ ಕಟ್ಟಬೇಕೆನ್ನುವ ಕಾಂಗ್ರೆಸ್ ಮತ್ತು ಮಿತ್ರಪಕ್ಷಗಳ ಲೆಕ್ಕಾಚಾರ ಮತ್ತೆ ಬುಡಮೇಲಾದಂತಿದೆ. ಒಕ್ಕೂಟ ರಚಿಸುವ ನಿಟ್ಟಿನಲ್ಲಿ ನಾಯ್ಡು ಬೆಂಗಳೂರಿಗೂ ಬಂದು ಜೆಡಿಎಸ್ ನಾಯಕರಾಗಿರುವ ದೇವೇಗೌಡ, ಕುಮಾರಸ್ವಾಮಿ ಜತೆ ಚರ್ಚಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.