ಗೌರಿ ಹತ್ಯೆ ಆರೋಪಿಗೂ ನಮ್ಮ ಸಂಸ್ಥೆಗೂ ಸಂಬಂಧವಿಲ್ಲ
Team Udayavani, Jun 3, 2018, 12:33 PM IST
ಪುಣೆ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಗುರುವಾರ ಬಂಧಿತನಾದ ಅಮೋಲ್ ಕಾಳೆ (40)ಗೂ ನಮ್ಮ ಸಂಸ್ಥೆಗೂ ಸಂಬಂಧವಿಲ್ಲ ಎಂದು ಪುಣೆಯ ಹಿಂದೂ ಜನಜಾಗೃತಿ ಸಮಿತಿ(ಎಚ್ಜೆಎಸ್) ಶನಿವಾರ ಸ್ಪಷ್ಟಪಡಿಸಿದೆ.
ಅಮೋಲ್ ಕಾಳೆ 2008ರವರೆಗೆ ನಮ್ಮ ಸಂಸ್ಥೆಯೊಂದಿಗೆ ಸಂಪರ್ಕದಲ್ಲಿದ್ದ. ಬಳಿಕ ವೈಯಕ್ತಿಕ ಕಾರಣಗಳನ್ನು ಮುಂದಿಟ್ಟು ಸಂಸ್ಥೆಯನ್ನು ತೊರೆದಿದ್ದ ಎಂದು ಎಚ್ಜೆಎಸ್ ರಾಷ್ಟ್ರೀಯ ವಕ್ತಾರ ರಮೇಶ್ ಶಿಂದೆ ಹೇಳಿದ್ದಾರೆ. ಕಳೆದ 10 ವರ್ಷಗಳಿಂದಲೂ ಆತ ನಮ್ಮ ಸಂಸ್ಥೆಯ ಯಾವುದೇ ಚಟುವಟಿಕೆಗಳಲ್ಲೂ ಪಾಲ್ಗೊಂಡಿಲ್ಲ ಎಂದೂ ತಿಳಿಸಿದ್ದಾರೆ.
ಇದೇ ವೇಳೆ, ಪಿಟಿಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಪುಣೆಯ ಡಿಸಿಪಿ ಗಣೇಶ್ ಶಿಂದೆ, “ಕಾಳೆಯನ್ನು ಮೊದಲು ಕೊಲೆ ಯತ್ನ, ಕ್ರಿಮಿನಲ್ ಸಂಚು ಮತ್ತು ಶಸ್ತ್ರಾಸ್ತ್ರ ಕಾಯ್ದೆಯನ್ವಯ ಮೇ 21ರಂದು ಬೆಂಗಳೂರು ಪೊಲೀಸರು ಬಂಧಿಸಿದ್ದರು. ಮೇ 23ರಂದು ಕರ್ನಾಟಕ ಪೊಲೀಸರು ಪುಣೆಯ ಪಿಂಪ್ರಿ-ಚಿಂಚ್ವಾಡ್ನಲ್ಲಿರುವ ಕಾಳೆಯ ನಿವಾಸದಲ್ಲಿ ಶೋಧ ಕಾರ್ಯ ನಡೆಸಿದರು.
ಮೇ 31ರಂದು ಗೌರಿ ಹತ್ಯೆ ಪ್ರಕರಣದಲ್ಲಿ ಆತನನ್ನು ಬಂಧಿಸಲಾಯಿತು’ ಎಂದು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆತ ಪಿಂಪ್ರಿ-ಚಿಂಚ್ವಾಡ್ನಲ್ಲಿರುವ ತನ್ನ ಅಪಾರ್ಟ್ಮೆಂಟ್ನಲ್ಲಿ ಪತ್ನಿ, ಮಗ ಮತ್ತು ತಾಯಿಯೊಂದಿಗೆ ವಾಸಿಸುತ್ತಿದ್ದ. ಆತನ ಬಂಧನ ಕುರಿತು ಯಾವುದೇ ಪ್ರತಿಕ್ರಿಯೆ ನೀಡಲು ಪತ್ನಿ ನಿರಾಕರಿಸಿದ್ದಾಳೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Anandapura: ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು
Liquor Sale; ರಾಜ್ಯದಲ್ಲಿ ಒಂದೇ ದಿನ 408 ಕೋಟಿ ರೂ ಮೌಲ್ಯದ ಮದ್ಯ ಮಾರಾಟ ದಾಖಲೆ
S.Korea: ರನ್ ವೇಯಲ್ಲಿ ಸ್ಕಿಡ್ ಆಗಿ ಗೋಡೆಗೆ ಅಪ್ಪಳಿಸಿದ ವಿಮಾನ: ಇಲ್ಲಿದೆ ನೋಡಿ ವಿಡಿಯೋ
ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು
World Rapid Chess Championship: ವಿಶ್ವ ರ್ಯಾಪಿಡ್ ಚೆಸ್.. ಅರ್ಜುನ್ ಜಂಟಿ ಅಗ್ರಸ್ಥಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.