5 ವರ್ಷಗಳ ರೂಪುರೇಷೆ
ಆರ್ಥಿಕ ಸುಧಾರಣೆ, ನಿರುದ್ಯೋಗ ನಿವಾರಣೆಯೇ ಗುರಿ
Team Udayavani, Jun 25, 2019, 6:00 AM IST
ಹೊಸದಿಲ್ಲಿ: ನರೇಂದ್ರ ಮೋದಿ ಸರಕಾರದ ಈ ಅವಧಿಯ ಮೊದಲ ಬಜೆಟ್ ಕೇವಲ ಒಂದು ವರ್ಷದ ಗುರಿಯನ್ನು ಹೊಂದಿರು ವುದಿಲ್ಲ. ಬದಲಿಗೆ ಮುಂದಿನ ಐದು ವರ್ಷಗಳಲ್ಲಿ ನರೇಂದ್ರ ಮೋದಿ ಸರಕಾರ ಹಮ್ಮಿಕೊಳ್ಳಲಿರುವ ಯೋಜನೆಗಳ ರೂಪರೇಖೆಯನ್ನೇ ಈ ಬಾರಿಯ ಬಜೆಟ್‌ನಲ್ಲಿ ಮಂಡಿಸಲಾಗುತ್ತಿದೆ. ಮೂಲಗಳ ಪ್ರಕಾರ ದೇಶದ ಆರ್ಥಿಕತೆಯನ್ನು ವೃದ್ಧಿಸು ವುದು ಮತ್ತು ನಿರುದ್ಯೋಗ ಸಮಸ್ಯೆಯನ್ನು ನಿವಾರಿಸುವುದೇ ಈ ಬಜೆಟ್‌ನಲ್ಲಿ ಪ್ರಮುಖ ಅಂಶವಾಗಿರಲಿದೆ. ಈ ಎರಡು ಸಮಸ್ಯೆಗಳನ್ನು ನಿವಾರಿಸುವುದಕ್ಕೆಂದೇ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಲಿರುವ ಬಜೆಟ್‌ನಲ್ಲಿ ಮಹತ್ವದ ಯೋಜನೆಗಳು ಇರಲಿವೆ ಎಂದು ಹೇಳಲಾಗಿದೆ.
ಆರ್ಥಿಕತೆಗೆ ಉತ್ತೇಜನ ನೀಡಲು ಬೇಡಿಕೆ ಮತ್ತು ಉದ್ಯೋಗವನ್ನು ಹೆಚ್ಚಿಸಬೇಕು. ಇದಕ್ಕೆ ಗ್ರಾಮೀಣ ಪ್ರದೇಶಗಳ ಸಬಲೀಕರಣವೇ ಉತ್ತಮ ಮಾರ್ಗವಾಗಿದ್ದು, ಬಜೆಟ್‌ನಲ್ಲಿ ಗ್ರಾಮೀಣ ಆರ್ಥಿಕತೆ ಉತ್ತೇಜನಕ್ಕೆ ಹೆಚ್ಚಿನ ಮಹತ್ವ ಒದಗಿಸಲಾಗುತ್ತದೆ ಎನ್ನಲಾಗಿದೆ. ಅಲ್ಲದೆ, ಇದರೊಂದಿಗೆ ಖಾಸಗಿ ವಲಯದಲ್ಲಿ ಉದ್ಯೋಗಾವಕಾಶ ಹೆಚ್ಚಳಕ್ಕಾಗಿ ಹಲವು ಔದ್ಯಮಿಕ ಉತ್ತೇಜನ ಯೋಜನೆಗಳನ್ನೂ ಘೋಷಿಸಬಹುದಾಗಿದೆ. ಮಧ್ಯಮ ವರ್ಗದ ಸಮುದಾಯಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಆದಾಯ ತೆರಿಗೆ ಮಿತಿಯಲ್ಲೂ ಏರಿಕೆ ಮಾಡುವ ಸಾಧ್ಯತೆಯಿದ್ದು, ಇದರಿಂದ ಜನರಲ್ಲಿ ಖರೀದಿ ಸಾಮರ್ಥ್ಯ ಹೆಚ್ಚಲಿದೆ. ಇತ್ತೀಚೆಗೆ ಘೋಷಿಸಲಾದ ಪಿಂಚಣಿ ಯೋಜನೆ ಕೂಡ ಮಹತ್ವದ್ದಾಗಿದ್ದು, ಇದು ಜನರಲ್ಲಿ ಖರೀದಿ ಸಾಮರ್ಥ್ಯವನ್ನು ಹೆಚ್ಚಿಸ ಲಿದೆ. ಈ ಮೂಲಕ ದೇಶದ ಆರ್ಥಿಕತೆಯೂ ವೃದ್ಧಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.