ಕರ್ನಾಟಕದಲ್ಲಿ 7,037 ಮನೆಗಳ ನಿರ್ಮಾಣದ ಗುರಿ
Team Udayavani, Apr 10, 2017, 10:45 AM IST
ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ “2022ರೊಳಗೆ ಸರ್ವರಿಗೂ ಮನೆ’ ಯೋಜನೆಯನ್ವಯ ಕರ್ನಾಟಕದಲ್ಲಿ 7,037 ಸೇರಿದಂತೆ ದೇಶಾದ್ಯಂತ 2 ಲಕ್ಷ ಮನೆಗಳನ್ನು ನಿರ್ಮಿಸಲು ನಿರ್ಧರಿಸಲಾಗಿದೆ. ಅದರಂತೆ, 350 ಪ್ರಾಜೆಕ್ಟ್ಗಳಿಗೆ ಭಾನುವಾರ ಚಾಲನೆ ನೀಡಲಾಗಿದೆ.
ಇದೇ ಮೊದಲ ಬಾರಿಗೆ ಸರ್ಕಾರದ ಈ ಅಗ್ಗದ ಮನೆ ಯೋಜನೆಗೆ ಕಾರ್ಪೊರೇಟ್‌ಗಳ ಸಹಕಾರವೂ ಸಿಕ್ಕಿದ್ದು, ಖಾಸಗಿ ವಲಯವು ಇದರಲ್ಲಿ 38 ಸಾವಿರ ಕೋಟಿ ರೂ. ಹೂಡಿಕೆ ಮಾಡಲು ಒಪ್ಪಿದೆ. ಪ್ರಧಾನಿ ಕಾರ್ಯಾಲಯವು ಖಾಸಗಿ ರಿಯಲ್ ಎಸ್ಟೇಟ್ ಡೆವಲಪರ್‌ಗಳೊಂದಿಗೆ ಸಭೆ ನಡೆಸಿದ ಬೆನ್ನಲ್ಲೇ ಈ ವಿಚಾರ ಬೆಳಕಿಗೆ ಬಂದಿದೆ.
ಗುಜರಾತ್‌ನ ಗಾಂಧಿನಗರದಲ್ಲಿ ಸಚಿವ ವೆಂಕಯ್ಯ ನಾಯ್ಡು ಅವರು ಈ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಪ್ರಧಾನ ಮಂತ್ರಿ ಆವಾಸ ಯೋಜನೆಯಡಿ ಮನೆ ನಿರ್ಮಿಸಲು ಫಲಾನು ಭವಿಗಳಿಗೆ ಕನಿಷ್ಠ 1 ಲಕ್ಷದಿಂದ ಗರಿಷ್ಠ 2.35 ಲಕ್ಷ ಆರ್ಥಿಕ ನೆರವು ನೀಡಲಾಗುವುದು. ಕರ್ನಾಟಕದಲ್ಲಿ 7,037, ಮಹಾರಾಷ್ಟ್ರದಲ್ಲಿ 1 ಲಕ್ಷ ಮನೆಗಳನ್ನು ನಿರ್ಮಿಸಲು ಯೋಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
ವಕ್ಫ್ ನೋಟಿಸ್ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.