ಪ್ರಾರ್ಥನೆ ಮಾಡಿದ ಮಾತ್ರಕ್ಕೆ ಸ್ಥಳ ಸ್ವಂತದ್ದಾಗದು
Team Udayavani, Aug 17, 2019, 5:01 AM IST
ನವದೆಹಲಿ: ಅಯೋಧ್ಯೆ ರಾಮಜನ್ಮಭೂಮಿ ಪ್ರಕರಣದ ಕುರಿತಂತೆ ನಡೆಯುತ್ತಿರುವ ನಿತ್ಯ ವಿಚಾರಣೆಯಲ್ಲಿ ಶುಕ್ರವಾರ ರಾಮ್ ಲಲ್ಲಾ ವಿರಾಜಮಾನ್ ಪರ ವಕೀಲರು ಮಹತ್ವದ ವಾದ ಮಂಡಿಸಿದ್ದಾರೆ. ಅಯೋಧ್ಯೆಯಲ್ಲಿ ಮುಸ್ಲಿಮರು ಪ್ರಾರ್ಥನೆ ಮಾಡುತ್ತಿದ್ದರು ಎಂದ ಮಾತ್ರಕ್ಕೆ ಆ ಸ್ಥಳವೇ ಅವರದ್ದು ಎಂದು ಹೇಳಲಾಗದು. ಮುಸ್ಲಿಮರು ಬೀದಿ ಬದಿಗಳಲ್ಲೂ ಪ್ರಾರ್ಥನೆ ನಡೆಸುತ್ತಾರೆ ಎಂದ ಮಾತ್ರಕ್ಕೆ ಆ ಬೀದಿಗಳು ನಮ್ಮದೇ ಎಂದು ಹಕ್ಕು ಮಂಡಿಸಲು ಸಾಧ್ಯವೇ ಎಂದು ಹಿರಿಯ ವಕೀಲ ಸಿ.ಎಸ್.ವೈದ್ಯನಾಥನ್ ಪ್ರಶ್ನಿಸಿದ್ದಾರೆ. ಅಲ್ಲದೆ, ಅಯೋಧ್ಯೆಯಲ್ಲಿ ಕಟ್ಟಡ, ಸ್ತಂಭಗಳು, ದೇವರ ಮೂರ್ತಿಗಳು ಹಿಂದೂಗಳದ್ದಾಗಿದೆ ಎಂದೂ ಹೇಳಿದ್ದಾರೆ.
ಅಯೋಧ್ಯೆಯಲ್ಲಿರುವ ಕಟ್ಟಡ ಎಂದಿಗೂ ಮಸೀದಿಯ ರಚನೆಯಾಗಿರಲಿಲ್ಲ. ಮಸೀದಿಯ ರಚನೆಯ ಒಳಗಿರುವ ಮೂರ್ತಿಗಳು ಇಸ್ಲಾಂ ಧರ್ಮದ ನಂಬಿಕೆಗಳಿಗೆ ವಿರುದ್ಧವಾಗಿವೆ. ಮುಸ್ಲಿಮರು ಪ್ರಾರ್ಥನೆ ಸಲ್ಲಿಸುವ ಸ್ಥಳದಲ್ಲಿ ಯಾವುದೇ ವ್ಯಕ್ತಿಯ ಮೂರ್ತಿಯನ್ನು ಇಟ್ಟಿರುವುದಿಲ್ಲ ಎಂದು ಅವರು ಹೇಳಿದ್ದಾರೆ. ಅಲ್ಲದೆ 1990ಕ್ಕೂ ಮುನ್ನ ತೆಗೆದ ಫೋಟೋಗಳು, ನಕ್ಷೆಗಳು ಹಾಗೂ ಇತರ ಮಾಹಿತಿಯಗಳನ್ನು ಅವರು ನ್ಯಾಯಮೂರ್ತಿಗಳಿಗೆ ಸಲ್ಲಿಸಿದ್ದಾರೆ. ಅಲ್ಲದೆ, ವಿವಾದಿತ ಕಟ್ಟಡದಲ್ಲಿ ಹಿಂದೂಗಳು ಆರಾಧಿಸುವ ಹಲವು ದೇವರುಗಳ ಕೆತ್ತನೆ ಇದೆ ಎಂದೂ ಅವರು ಹೇಳಿದ್ದಾರೆ.
ಅಷ್ಟೇ ಅಲ್ಲ, ವಿವಾದಿತ ಜಾಗಕ್ಕೆ 1950 ಏಪ್ರಿಲ್ 16 ರಂದು ಕಮಿಷನರ್ ಭೇಟಿ ನೀಡಿದ್ದಾಗ ಅವರು ಅಧ್ಯಯನ ನಡೆಸಿ ನೀಡಿದ ವರದಿಯನ್ನು ವೈದ್ಯನಾಥನ್ ಕೋರ್ಟ್‌ಗೆ ಸಲ್ಲಿಸಿದ್ದಾರೆ. ನ್ಯಾಯಾಲಯವೇ ಆಗ ಕಮಿಷನರ್ ಅನ್ನು ನೇಮಿಸಿತ್ತು. ಈ ಸಮಿತಿಯು ಶಿವ ದೇವರ ಕೆತ್ತನೆಗಳನ್ನು ಕಂಡಿರುವುದಾಗಿ ವರದಿ ಮಾಡಿದೆ. ಸಾಮಾನ್ಯವಾಗಿ ಇಂತಹ ಕೆತ್ತನೆಗಳು ಮಸೀದಿಯಲ್ಲಿ ಕಂಡುಬರುವುದಿಲ್ಲ. ಬದಲಿಗೆ ಇವು ದೇಗುಲಗಳಲ್ಲಿ ಮಾತ್ರ ಕಾಣಿಸುತ್ತವೆ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ
MUST WATCH
ಹೊಸ ಸೇರ್ಪಡೆ
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್ ಕುಮಾರ್
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.