NEET ಇಂದು ನಡೆಯಬೇಕಿದ್ದ ಪಿಜಿ ಪರೀಕ್ಷೆ ಮುಂದೂಡಿಕೆ
Team Udayavani, Jun 23, 2024, 6:30 AM IST
ಹೊಸದಿಲ್ಲಿ: ನೀಟ್, ನೆಟ್ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳ ಬೆನ್ನಲ್ಲೇ ವೈದ್ಯಕೀಯ ಕೋರ್ಸ್ಗಳ ಪಿ.ಜಿ. (ನೀಟ್ ಪಿಜಿ) ಪರೀಕ್ಷೆಯನ್ನು ಮುಂದೂಡಲಾಗಿದೆ. ಈ ಬಗ್ಗೆ ಕೇಂದ್ರ ಸರಕಾರ ಶನಿವಾರ ಪ್ರಕಟಿಸಿದೆ.
ಪರೀಕ್ಷೆಯಲ್ಲಿ ಪಾರದರ್ಶಕತೆ ಸಾಧಿಸಲು, ಸಂಪೂರ್ಣ ಪ್ರಕ್ರಿಯೆಯನ್ನು ಪರಿಶೀಲಿಸಿದ ಅನಂತರ ಪರೀಕ್ಷೆ ನಡೆಸಲಾಗುತ್ತದೆ ಎಂದು ಆರೋಗ್ಯ ಇಲಾಖೆ ಘೋಷಿಸಿದೆ. ಒಟ್ಟು 2.28ಲಕ್ಷ ಮಂದಿ ರವಿವಾರ ಪರೀಕ್ಷೆ ಬರೆಯಬೇಕಿತ್ತು.
ಪ್ರದೀಪ್ ಸಿಂಗ್ ಖರೊಲಾ ಎನ್ಟಿಎ ಪ್ರಧಾನ ನಿರ್ದೇಶಕ
ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯಲ್ಲಿ (ಎನ್ಟಿಎ) ಅಕ್ರಮಗಳು ನಡೆದ ಬೆನ್ನಲ್ಲೆ, ಎನ್ಟಿಎ ಪ್ರಧಾನ ನಿರ್ದೇಶಕರಾಗಿದ್ದ ಸುಬೋಧ್ ಕುಮಾರ್ ಸಿಂಗರನ್ನು ವರ್ಗಾಯಿಸಲಾಗಿದೆ. ಅವರ ಸ್ಥಾನಕ್ಕೆ ಭಾರತೀಯ ವ್ಯಾಪಾರ ಉತ್ತೇಜನ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್ ಸಿಂಗ್ ಖರೊಲಾ ಅವರನ್ನು ನೇಮಿಸಲಾಗಿದೆ. ಖರೋಲಾ ಈ ಮೊದಲು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಯಾಗಿ, ಬೆಂಗಳೂರು ನಗರ ಸಾರಿಗೆ ಹಾಗೂ ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಶನ್ನ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.