10 ವರ್ಷಗಳಲ್ಲಿ ಭಾರತದಲ್ಲಿ ಇಳಿದಿದೆ ಬಡತನ ಪ್ರಮಾಣ
Team Udayavani, Jul 18, 2020, 8:09 AM IST
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: 2005-06 ಮತ್ತು 2015-16ರ ನಡುವೆ ಸುಮಾರು 27.3 ಕೋಟಿ (273 ಮಿಲಿಯನ್) ಭಾರತೀಯರು ಬಡತನದಿಂದ ಹೊರ ಬಂದಿದ್ದಾರೆ. ಇತರ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಬಡತನದ ಇಳಿಕೆ ಪ್ರಮಾಣ ಹೆಚ್ಚಿದೆ ಎಂದು ವಿಶ್ವಸಂಸ್ಥೆಯ ವರದಿ ಹೇಳಿದೆ.
ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮ ಹಾಗೂ ಆಕ್ಸ್‌ಫರ್ಡ್ ಬಡತನ ಮತ್ತು ಮಾನವ ಅಭಿವೃದ್ಧಿ ಉಪಕ್ರಮಗಳು ಜಂಟಿ ಯಾಗಿ ಬಿಡುಗಡೆ ಮಾಡಿದ ವರದಿಯಲ್ಲಿ ಈ ಸಂಗತಿ ಬಯಲಾಗಿದೆ. ಈ ಕುರಿತು ಅಧ್ಯಯನ ನಡೆಸಿದ 75 ರಾಷ್ಟ್ರಗಳ ಪೈಕಿ 65 ರಾಷ್ಟ್ರಗಳಲ್ಲಿ 2000-2019ರ ಅವಧಿಯಲ್ಲಿ ಬಡತನದಲ್ಲಿ ಗಮನಾರ್ಹ ಇಳಿಕೆ ಕಂಡು ಬಂದಿದೆ. ಭಾರತದಲ್ಲಿ 2005-06 ಮತ್ತು 2015-16ರ ನಡುವೆ, ಕೇವಲ 10 ವರ್ಷಗಳ ಅವಧಿಯಲ್ಲಿ ಸುಮಾರು 27.3 ಕೋಟಿ ಭಾರತೀಯರು ಬಹು ಆಯಾಮದ ಬಡತನದಿಂದ ಹೊರ ಬಂದಿದ್ದಾರೆ. ಅನಾರೋಗ್ಯ ಪರಿಸ್ಥಿತಿ ಹಾಗೂ ಶಿಕ್ಷಣದ ಕೊರತೆ, ಕಳಪೆ ಗುಣಮಟ್ಟದ ಜೀವನ ನಿರ್ವಹಣೆ, ಹಿಂಸಾಚಾರದ ಬೆದರಿಕೆ, ಪರಿಸರಕ್ಕೆ ಅಪಾಯಕಾರಿಯಾದ ಪ್ರದೇಶದಲ್ಲಿನ ಬದುಕು…ಇವೆಲ್ಲವನ್ನೂ ಬಹು ಆಯಾಮದ ಬಡತನದ ಸೂಚ್ಯಂಕವಾಗಿ ಪರಿಗಣಿಸಲಾಗಿದೆ.
ಭಾರೀ ಜನಸಂಖ್ಯೆ ಹಾಗೂ ಬಡತನದ ವಿಭಿನ್ನ ಗುಣಮಟ್ಟದ ನಡುವೆಯೂ ಭಾರತ ಈ ಸಾಧನೆ ಮಾಡಿದೆ. ಇತರ ದೇಶಗಳಿಗೆ ಹೋಲಿಸಿದರೆ, ಭಾರತದಲ್ಲಿನ ಬಡತನದ ಇಳಿಕೆ ಪ್ರಮಾಣ ಈ ಅವಧಿಯಲ್ಲಿ ಹೆಚ್ಚಿದೆ ಎಂದು ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mumbai Coast: ಗೇಟ್‌ವೇ ಆಫ್ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!
Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್ ಭೇಟಿ: 21ರಿಂದ ಮೋದಿ ಪ್ರವಾಸ
GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?
MUST WATCH
ಹೊಸ ಸೇರ್ಪಡೆ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.