ಪಾಕಿಸ್ತಾನ ಸಮಸ್ಯೆ ಜಾಗತಿಕ ಸವಾಲಾಗಿದೆ ರಾಮ್ ಮಾಧವ್
Team Udayavani, Oct 22, 2019, 5:45 PM IST
ಹೊಸದಿಲ್ಲಿ: ಪಾಕಿಸ್ತಾನ ಜಾಗತಿಕ ಮಟ್ಟದಲ್ಲಿ ಭಯೋತ್ಪಾದನೆಯ ಕೇಂದ್ರಬಿಂದುವಾಗಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಹೇಳಿಕೆ ನೀಡಿದ್ದಾರೆ.
ಪಾಕಿಸ್ತಾನ ಕೇವಲ ಭಾರತದ ಸಮಸ್ಯೆ ಅಲ್ಲ , ಜಾಗತಿಕ ಮಟ್ಟದ ಸವಾಲಾಗಿ ಮಾರ್ಪಟ್ಟಿದೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ. ಪಾಕಿಸ್ತಾನದಲ್ಲಿನ ಭಯೋತ್ಪಾದನೆ ಸಮಸ್ಯೆಯನ್ನು ಸಂಪೂರ್ಣವಾಗಿ ನಿವಾರಿಸಲು ಎಲ್ಲಾ ಪ್ರಜಾಪ್ರಭುತ್ವ ದೇಶಗಳು ಒಟ್ಟಾಗಿ ಶ್ರಮಿಸಬೇಕಿದೆ ಎಂದು ಹೇಳಿದ್ದಾರೆ.
ಕಳೆದ ಏಳು ದಶಕಗಳಿಂದ ಭಾರತ ಮತ್ತು ಪಾಕಿಸ್ತಾನದ ಸಂಬಂಧದಲ್ಲಿ ತನ್ನದೇ ಆದ ಏರಿಳಿತಗಳನ್ನು ಹೊಂದಿದ್ದು, ಪಾಕಿಸ್ತಾನದ ಜತೆ ಸ್ನೇಹ ಸೌಹರ್ದವನ್ನು ಬೆಳೆಸಲು ನಾವು ಸಿದ್ಧವಿದ್ದೇವೆ. ಆದರೆ ಅದಕ್ಕೂ ಮೊದಲು ಪ್ರಮುಖ ಸಮಸ್ಯೆಯಾದ ಗಡಿಯಾಚೆಗಿನ ಭಯೋತ್ಪಾದನೆ ಬಗೆಹರಿಯಬೇಕು ಎಂದರು.
ದಿಲ್ಲಿಯಲ್ಲಿ ಯುಎಸ್-ಇಂಡಿಯಾ ಸ್ಟ್ರಾಟೆಜಿಕ್ ಪಾರ್ಟ್ನರ್ ಶಿಪ್ ಫೋರಂ ಆಯೋಜಿಸಿದ್ದ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ಅವರು ಈ ಹಿಂದೆ ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸಲು ಭಾರತಕ್ಕೆ ನೆರಹೊರದೇಶಗಳು ಸಲಹೆ ನೀಡುತ್ತಿದ್ದವು. ಆದರೆ ಇಂದು ಯಾರೂ ಆ ಕೆಲಸವನ್ನು ಮಾಡುತ್ತಿಲ್ಲ, ಏಕೆಂದರೆ ಪಾಕಿಸ್ತಾನ ಜಾಗತಿಕ ಮಟ್ಟದಲ್ಲಿ ಭಯೋತ್ಪಾದನೆಯ ಕೇಂದ್ರ ಬಿಂದುವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ
NSE, BSE; ಷೇರು ಮಾರುಕಟ್ಟೆಗೆ ನವೆಂಬರ್ 20 ರಂದು ರಜೆ ಘೋಷಣೆ
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUST WATCH
ಹೊಸ ಸೇರ್ಪಡೆ
Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ
Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ
Road Mishaps: ಬೆಂಗಳೂರಿನಲ್ಲಿ ಬೈಕ್ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು
Mangaluru: ನಿಯಮ ಉಲ್ಲಂಘನೆ; ಖಾಸಗಿ ಬಸ್‌ಗೆ ದಂಡ
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.