ಹೋದ ಮಳೆ ಮತ್ತೆ ಬಂತು! ಚೆನ್ನೈ ಹಾಗೂ ಸುತ್ತಲಿನ ನಗರಗಳಿಗೆ ರೆಡ್ ಅಲರ್ಟ್ ಘೋಷಣೆ
ನಾಲ್ಕು ದಿನಗಳವರೆಗೆ ಭಾರೀ ಮಳೆಯಾಗುವ ನಿರೀಕ್ಷೆ ; ಸೂಕ್ತ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳಲು ತಮಿಳುನಾಡು ಸರ್ಕಾರದ ಸೂಚನೆ
Team Udayavani, Nov 18, 2021, 5:50 AM IST
ಚೆನ್ನೈ: ಈಗಾಗಲೇ ವರುಣನ ಆರ್ಭಟದಿಂದ ತತ್ತರಿಸಿರುವ ತಮಿಳುನಾಡಿನ ರಾಜಧಾನಿ ಚೆನ್ನೈ ಹಾಗೂ ಸುತ್ತಲಿನ ಜಿಲ್ಲೆಗಳಿಗೆ ಮತ್ತೆ ನಾಲ್ಕು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ.
ಬುಧವಾರ ಹೊರಬಿದ್ದಿರುವ ಈ ಮುನ್ನಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದ್ದು, ಚೆನ್ನೈ ಮಾತ್ರವಲ್ಲದೆ, ಕಾಂಚೀಪುರಂ, ತಿರುವಳ್ಳೂರ್, ರಾಣಿಪೇಟೆ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯಲಿದೆ ಎಂದು ಹೇಳಿದೆ. ಹೀಗಾಗಿ, ಈ ಜಿಲ್ಲೆಗಳ ಸ್ಥಳೀಯಾಡಳಿತಗಳು ಹಾಗೂ ಗ್ರೇಟರ್ ಚೆನ್ನೈ ಮಹಾನಗರ ಪಾಲಿಕೆಯು ಸೂಕ್ತ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳಬೇಕೆಂದು ತಮಿಳುನಾಡು ಸರ್ಕಾರ ಸೂಚನೆ ನೀಡಿದೆ.
ಐಎಡಿ ಹೇಳಿದ್ದೇನು?
ಮುನ್ನೆಚ್ಚರಿಕೆ ನೀಡಲಾಗಿರುವ ಪ್ರದೇಶಗಳಲ್ಲಿ ನ. 17ರ ಬೆಳಗ್ಗೆಯಿಂದ ಆನಂತರದ 24 ಗಂಟೆಗಳಲ್ಲಿ ಸಾಧಾರಣದಿಂದ ಭಾರಿಯಾಗಿ ಮಳೆಯಾಗಲಿದೆ. 48 ಗಂಟೆಗಳಲ್ಲಿ ಅತಿಯಾದ, ಅಬ್ಬರದ ಮಳೆಯಾಗಲಿದೆ ಎಂದು ಐಎಂಡಿ ಹೇಳಿದೆ.
ಚೆನ್ನೈನ ಕೇಂದ್ರ ಹಾಗೂ ಪಶ್ಚಿಮ ಭಾಗಗಳು ಹೆಚ್ಚಿನ ಮಳೆ ಬಾಧೆಗೆ ತುತ್ತಾಗಲಿವೆ ಎಂದಿರುವ ಐಎಂಡಿ-ಚೆನ್ನೈನ ಮುಖ್ಯಸ್ಥರಾದ ಡಾ. ಎಸ್. ಬಾಲಸುಬ್ರಹ್ಮಣ್ಯಂ, ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಮನವಿ ಮಾಡಿದ್ದಾರೆ.
ಮುಂದಿನ ನಾಲ್ಕು ದಿನಗಳಲ್ಲಿ ತಮಿಳುನಾಡಿನ ತಿರುವಣ್ಣಾಮಲೈ, ಕಲ್ಲಕುರಿಚಿ, ಸೇಲಂ, ತಿರುಚನಾಪಳ್ಳಿ, ಕರೂರು, ತಂಜಾವೂರು, ತಿರುವರೂರ್, ಪುದುಕೋಟ್ಟೈ, ದಿಂಡಿಗುಲ್, ಮಧುರೈ, ಥೇನಿ, ಶಿವಗಂಗಾ, ವಿರುಧು ನಗರ್ ಹಾಗೂ ತೆಂಕಾಶಿಯಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.
ಸದ್ಯಕ್ಕೆ ಪ್ರತಿ ಗಂಟೆಗೆ 40 ಕಿ.ಮೀ. ವೇಗದಲ್ಲಿ ಸಾಗುತ್ತಿರುವ ಮಳೆ ಮಾರುತಗಳು, ಮುಂದಿನ ನಾಲ್ಕು ದಿನಗಳಲ್ಲಿ 50 ಕಿ.ಮೀ. ಅಥವಾ 60 ಕಿ.ಮೀ. ವೇಗವನ್ನು ಪಡೆದುಕೊಳ್ಳಬಹುದು. ಹಾಗಾಗಿ, ಬಿರುಸಾದ ಮಳೆ ಬೀಳುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ಇದನ್ನೂ ಓದಿ:ಮಿಮಿ ಚಕ್ರವರ್ತಿಯ ಫೋನ್ ಗ್ಯಾಲರಿಯೇ ಮಂಗಮಾಯ!
ಚೆನ್ನೈನಲ್ಲಿ ಧಾರಾಕಾರ ಮಳೆ
ಐಎಂಡಿಯ ಮುನ್ನೆಚ್ಚರಿಕೆಯ ನಡುವೆಯೇ ಚೆನ್ನೈನಲ್ಲಿ ಬುಧವಾರದಂದು ಭಾರೀ ಮಳೆಯಾಗಿದೆ. ಕೃಷ್ಣಗಿರಿ ಜಿಲ್ಲೆಯ ಬರಗೂರಿನಲ್ಲಿ ಭೂಕುಸಿತ ಉಂಟಾಗಿದೆ. ಘಟನೆಯಲ್ಲಿ ಸಾವು ನೋವು ಸಂಭವಿಸಿಲ್ಲ. ಆದರೆ, ಬರಗೂರಿನಿಂದ ಮುಂದಕ್ಕೆ 32 ಹಳ್ಳಿಗಳಿಗೆ ಇದ್ದ ಭೂ ಸಂಪರ್ಕ ತುಂಡಾಗಿದೆ. ಬರಗೂರಿನಿಂದ ಕರ್ನಾಟಕದ ಮೈಸೂರಿನ ಕಡೆಗೆ ಬರುವ ಸಂಪರ್ಕವೂ ತಪ್ಪಿಹೋಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಳೆಯಿಂದಾಗಿ ತಗ್ಗು ಪ್ರದೇಶಗಳು ಮತ್ತೆ ಜಲಾವೃತವಾಗಿವೆ. ತುಂಬಿಕೊಂಡಿರುವ ನೀರನ್ನು ಹೊರಹಾಕಲು ಚೆನ್ನೈ ಪಾಲಿಕೆಯು 684 ಮೋಟಾರ್ ಪಂಪ್‌ಗ್ಳನ್ನು ಬಳಸಿದೆ. ಮೀನುಗಾರಿಕೆ ಇಲಾಖೆಯ ಸಹಕಾರದೊಂದಿಗೆ ಹಾಯಿದೋಣಿಗಳನ್ನು ಪರಿಹಾರ ಕಾರ್ಯಗಳಿಗೆ ಬಳಸಲಾಗುತ್ತಿದೆ.
ಕಾವೇರಿ ಪ್ರಾಂತ್ಯದ ರೈತರಿಗೆ ಪರಿಹಾರ
ತಮಿಳುನಾಡು ವ್ಯಾಪ್ತಿಯಲ್ಲಿ ಬರುವ ಕಾವೇರಿ ನದಿ ಮುಖಜ ಭೂಮಿಯಲ್ಲಿ ಅಗಾಧ ಮಳೆಯಿಂದಾಗಿ ಬೆಳೆ ನಷ್ಟ ಅನುಭವಿಸಿರುವ ರೈತರಿಗಾಗಿ ತಮಿಳುನಾಡು ಸರ್ಕಾರ ಆರ್ಥಿಕ ಪರಿಹಾರ ಘೋಷಿಸಿದೆ. ಅದರಂತೆ, ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಪ್ರತಿ ಹೆಕ್ಟೇರ್‌ಗೆ 20,000 ರೂ.ಗಳನ್ನು ನೀಡುವುದಾಗಿ ಘೋಷಿಸಲಾಗಿದೆ.
ಮತ್ತೊಂದೆಡೆ, ಮಳೆಯಿಂದಾಗಿ ಹಾಳಾಗಿರುವ ರಸ್ತೆಗಳು, ಒಳಚರಂಡಿ ಮತ್ತಿತರ ಮೂಲಸೌಕರ್ಯಗಳನ್ನು ಸರಿಪಡಿಸಲು ತಮಿಳುನಾಡು ಸರ್ಕಾರ 300 ಕೋಟಿ ರೂ. ಬಿಡುಗಡೆ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.