ತೃತೀಯರಂಗದ ಚರ್ಚೆಗೆ ಚಾಲನೆ ಕೊಟ್ಟ ಫಲಿತಾಂಶ
Team Udayavani, Mar 5, 2018, 11:40 AM IST
ಲಕ್ನೋ/ಹೈದರಾಬಾದ್: ಈಶಾನ್ಯದ ಮೂರು ರಾಜ್ಯ ಗಳಲ್ಲಿ ಬಿಜೆಪಿ ಮೇಲುಗೈ ಸಾಧಿಸಿರುವಂತೆಯೇ 2019ರ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ತೃತೀಯ ರಂಗ ರಚನೆ ಯತ್ನಗಳು ಮತ್ತೆ ಶುರುವಾಗಿವೆ.
ಕಾಂಗ್ರೆಸ್ ನಾಯಕ ಎಂ.ವೀರಪ್ಪ ಮೊಲಿ, ಎಐಎಂಐಎಂ ಸಂಸದ ಅಸಾದುದ್ದೀನ್ ಒವೈಸಿ ಈ ಬಗ್ಗೆ ರವಿವಾರ ಬಹಿರಂಗವಾಗಿಯೇ ಮಾತನಾಡಿದ್ದಾರೆ. ಅದಕ್ಕೆ ಚಾಲನೆ ಸಿಕ್ಕಿದ್ದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರ ಹೇಳಿಕೆ. ಶನಿವಾರ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಕೆಸಿಆರ್ ಅವರು, ಕಾಂಗ್ರೆಸ್ ಮತ್ತು ಬಿಜೆಪಿಗೆ ಪರ್ಯಾಯವಾಗಿ ರಾಜಕೀಯ ಮೈತ್ರಿಕೂಟ ರಚನೆಯಾಗಬೇಕು ಎಂದಿದ್ದರು. ಅದನ್ನೇ ಪುಷ್ಟೀಕರಿಸಿರುವ ಅಸಾದುದ್ದೀನ್ ಒವೈಸಿ, ದೂರದೃಷ್ಟಿ ಇರಿಸಿಕೊಂಡು ತೆಲಂಗಾಣ ಮುಖ್ಯಮಂತ್ರಿ ಪರ್ಯಾಯ ರಾಜಕೀಯ ಒಕ್ಕೂಟ ರಚನೆಯ ಮಾತುಗಳನ್ನಾಡಿದ್ದಾರೆ. ಈ ನಿಟ್ಟಿನಲ್ಲಿ ಅವರೇ ಮುಂದಾಳತ್ವ ವಹಿಸಿಕೊಳ್ಳಬೇಕು ಎಂದು ಪ್ರತಿಪಾದಿಸಿದ್ದಾರೆ.
“ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆ ವೇಳೆ ಅವರನ್ನು ಮತ್ತು ಅವರ ನಿಲುವುಗಳನ್ನು ವಿರೋಧಿಸಿದ್ದೆವು. ಅಂತಿ ಮ ವಾಗಿ ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆ ಮಾಡುವಲ್ಲಿ ಅವರು ಯಶಸ್ವಿಯಾಗಿದ್ದಾರೆ. ಎಲ್ಲಾ ಪ್ರಾದೇಶಿಕ ಪಕ್ಷಗಳನ್ನು ಒಟ್ಟು ಸೇರಿಸಿ ಕೇಂದ್ರದಲ್ಲಿ ಸರಕಾರ ರಚಿಸುವ ಚಾಕಚಕ್ಯತೆ ಅವರಲ್ಲಿದೆ’ ಎಂದಿದ್ದಾರೆ ಒವೈಸಿ.
ಕೆಸಿಆರ್‌ಗೆ ಮಮತಾ ಫೋನ್: ಇದಾದ ಬಳಿಕ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್‌ಗೆ ಫೋನ್ ಮಾಡಿ ಮಾತನಾಡಿರುವ ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ.
ಜಾತ್ಯತೀತ ಪಕ್ಷಗಳು ಒಟ್ಟಾಗಬೇಕು: ಒವೈಸಿ ಧ್ವನಿಯಲ್ಲೇ ಮಾತನಾಡಿರುವ ಕಾಂಗ್ರೆಸ್ ನಾಯಕ, ಕೇಂದ್ರದ ಮಾಜಿ ಸಚಿವ ವೀರಪ್ಪ ಮೊಲಿ, ಮುಂದಿನ ದಿನಗಳಲ್ಲಿ ಜಾತ್ಯತೀತ ಪಕ್ಷಗಳು ಏಕಾಂಗಿಗಳಾಗಿ ಕೆಲಸ ಮಾಡದೆ ಒಗ್ಗೂಡಬೇಕು ಎಂದಿದ್ದಾರೆ. “ಚುನಾವಣೆಯಲ್ಲಿ ಗೆಲವು ಸಾಧಿಸಲೋಸುಗ ಅವುಗಳೆಲ್ಲವೂ ಕೈಜೋಡಿಸಬೇಕು. ನಾವೆಲ್ಲರೂ ಬಿಜೆಪಿಯೆಂಬ ಕೋಮುವಾದಿ ಭೂತವನ್ನು ಎದುರಿಸಬೇಕು. ಹೀಗಾಗಿ ಕೋಮು ಶಕ್ತಿಗಳ ವಿರುದ್ಧ ಹೋರಾಟಕ್ಕೆ ಎಲ್ಲರ ನಡುವೆ ಸಹಕಾರ ಅಗತ್ಯ’ ಎಂದು ಹೇಳಿದ್ದಾರೆ.
ದೇಶ ಕಾಂಗ್ರೆಸ್ ಮುಕ್ತ ಭಾರತವಾಗುತ್ತದೆ ಎಂಬ ವಾದವನ್ನು ತಿರಸ್ಕರಿಸಿದ ಅವರು, ಮುಂದಿನ ಕೆಲವೇ ವರ್ಷಗಳಲ್ಲಿ ಎಡಪಕ್ಷಗಳೇ ಇಲ್ಲದಂತಾಗುತ್ತವೆ. ಆದರೆ, ಕಾಂಗ್ರೆಸ್ ಮಧ್ಯಪ್ರೇಶದ ಉಪಚುನಾವಣೆಗಳಲ್ಲಿ ಉತ್ತಮ ಸಾಧನೆ ಮಾಡಿದೆ. ರಾಜಸ್ಥಾನದಲ್ಲೂ ಪಕ್ಷ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಉ.ಪ್ರ.ಉಪ ಚುನಾವಣೆ: ಎಸ್‌ಪಿಗೆ ಬೆಂಬಲ ಇಲ್ಲ
ಕರ್ನಾಟಕ ಹೊರತುಪಡಿಸಿ ಬೇರೆ ಯಾವುದೇ ರಾಜ್ಯ ಗಳಲ್ಲಿ ಇತರ ಪಕ್ಷಗಳ ಜತೆ ಚುನಾವಣಾ ಹೊಂದಾ ಣಿಕೆ ಇಲ್ಲ ಎಂದಿದ್ದಾರೆ ಬಿಎಸ್‌ಪಿ ನಾಯಕಿ ಮಾಯಾವತಿ. ಉತ್ತರ ಪ್ರದೇಶದ ಗೋರಖ್‌ಪುರ, ಫೂಲ್ಪುರ ಲೋಕಸಭೆ ಕ್ಷೇತ್ರಗಳಿಗೆ ಮಾ.11ರಂದು ನಡೆಯಲಿರುವ ಉಪ ಚುನಾವಣೆ ಯಲ್ಲಿ ಸಮಾಜವಾದಿ ಪಕ್ಷಕ್ಕೆ ಬೆಂಬಲ ನೀಡಲಾಗುತ್ತದೆ ಎಂದು ಪಕ್ಷದ ನಾಯಕರೊಬ್ಬರು ಟ್ವೀಟ್ ಮಾಡಿರುವ ಹಿನ್ನೆಲೆಯಲ್ಲಿ ಅವರು ಈ ಸ್ಪಷ್ಟನೆ ನೀಡಿದ್ದಾರೆ. ಆದರೆ ವಿಧಾನಪರಿಷತ್ ಮತ್ತು ರಾಜ್ಯಸಭೆ ಚುನಾವಣೆಯಲ್ಲಿ ಎರಡೂ ಪಕ್ಷಗಳು ಪರಸ್ಪರ ಹೊಂದಾಣಿಕೆ ಮಾಡಿಕೊಳ್ಳುವುದು ಖಚಿತವಾಗಿದೆ. ಲಕ್ನೋದಲ್ಲಿ ಮಾತನಾಡಿದ ಅವರು ಉತ್ತರ ಪ್ರದೇಶದಲ್ಲಿ ಎಸ್‌ಪಿ ನಡುವೆ ಮೈತ್ರಿ ಮಾಡುವ ವಿಚಾರ ಇದ್ದರೆ ಅದನ್ನು ಸಾರ್ವಜನಿಕವಾಗಿ ಘೋಷಿಸಲಾಗುತ್ತದೆ. ರಹಸ್ಯವಾಗಿ ಏನನ್ನೂ ಮಾಡುವುದಿಲ್ಲ ಎಂದಿದ್ದಾರೆ.
ಮೈತ್ರಿಕೂಟ ಮಾತುಕತೆ ಚುರುಕು
ತ್ರಿಪುರ ಫಲಿತಾಂಶದಿಂದ ಕಂಗೆಟ್ಟಿರುವ ಸಿಪಿಎಂ, ಹಾಲಿ ಹಿನ್ನಡೆಗೆ ಪಕ್ಷದ ಮಾಜಿ ಪ್ರಧಾನ ಕಾರ್ಯ ದರ್ಶಿ ಪ್ರಕಾಶ್ ಕಾರಟ್ ಕಾರಣ ಎಂದು ಸೀತಾ ರಾಮ್ ಯೆಚೂರಿ ಬೆಂಬಲಿಗರು ದೂರಿದ್ದಾರೆ. ಬಿಜೆಪಿ ವಿರೋಧಿ ಪಕ್ಷಗಳ ಜತೆ ಮೈತ್ರಿ ಮಾಡಿಕೊಳ್ಳದೇ ಇರುವ ಕಾರಟ್ ನಿಲುವಿನಿಂದಲೇ ಸೋಲಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. ನಡುವೆ ಸುದ್ದಿ ಸಂಸ್ಥೆ ಜತೆ ಮಾತನಾಡಿದ ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ, ಎಪ್ರಿಲ್‌ನಲ್ಲಿ ನಡೆಯಲಿರುವ ಸಭೆಯಲ್ಲಿ ಸೋಲಿನ ಕಾರಣಗಳ ಬಗ್ಗೆ ಚರ್ಚಿಸಲಾಗುತ್ತದೆ ಎಂದಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿಗೆ ಪರ್ಯಾಯವಾಗಿರುವ ಆಯ್ಕೆಗಳನ್ನು ಮತದಾರರಿಗೆ ನೀಡಬೇಕಾಗಿತ್ತು ಎಂದು ಪಶ್ಚಿಮ ಬಂಗಾಲದ ಸಿಪಿಎಂ ನಾಯಕರೊ ಬ್ಬರು ಹೇಳಿಕೊಂಡಿದ್ದಾರೆ. ಆದರೆ ಈ ಬಗ್ಗೆ ಪ್ರಕಾಶ್ ಕಾರಟ್ ಬೆಂಬಲಿಗರು ಒಪ್ಪಲಿಲ್ಲ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ
Maharashtra Elections: ವಿಪಕ್ಷ ನಾಯಕ ರಾಹುಲ್ ಛೋಟಾ ಪೋಪಟ್: ಬಿಜೆಪಿ ವಕ್ತಾರ ಲೇವಡಿ
Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ
Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು
Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್ ಮತ್ತು ಬಾಬಾ ನಡುವಿನ ಹೋರಾಟ
MUST WATCH
ಹೊಸ ಸೇರ್ಪಡೆ
udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್‌ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.