ಶಬರಿಮಲೆ ರಾಷ್ಟ್ರೀಯ ಕ್ಷೇತ್ರವಾಗಲಿ
Team Udayavani, Nov 14, 2017, 6:10 AM IST
ತಿರುವನಂತಪುರ: ಶಬರಿಮಲೆ ಅಯ್ಯಪ್ಪ ದೇಗುಲವನ್ನು ರಾಷ್ಟ್ರೀಯ ತೀರ್ಥಯಾತ್ರಾ ಸ್ಥಳ ಎಂದು ಘೋಷಣೆ ಮಾಡಿ ಎಂದು ಕೇಂದ್ರಕ್ಕೆ ಮನವಿ ಮಾಡಲಾಗಿದೆ. ತಿರುವನಂತಪುರದಲ್ಲಿ ನಡೆದ ದಕ್ಷಿಣ ಭಾರತದ ರಾಜ್ಯಗಳ ಸಚಿವರುಗಳ ಸಭೆಯಲ್ಲಿ ಈ ಮನವಿ ಮಾಡಲಾಗಿದೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅದರ ಅಧ್ಯಕ್ಷತೆ ವಹಿಸಿದ್ದರು.
ಇದರಿಂದಾಗಿ ದೇಗುಲಕ್ಕೆ ಭೇಟಿ ನೀಡುವ ಭಕ್ತರಿಗೆ ಇನ್ನಷ್ಟು ಅನುಕೂಲಗಳನ್ನು ಕಲ್ಪಿಸಲು ಅನುಕೂಲವಾಗಲಿದೆ. ಹಬ್ಬದ ಸಂದರ್ಭದಲ್ಲಿ, ಉತ್ತಮ ಸಹಕಾರಕ್ಕಾಗಿ ದಕ್ಷಿಣ ರಾಜ್ಯಗಳ ರಾಜಧಾನಿಯಲ್ಲಿ ನಿಯಂತ್ರಣ ಕೊಠಡಿಯನ್ನು ತೆರೆಯುವಂತೆಯೂ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ ಬರಹದಲ್ಲಿ ಒತ್ತಾಯ ಮಾಡಿದ್ದಾರೆ.
ಪವಿತ್ರ ಕ್ಷೇತ್ರದಲ್ಲಿ ಯಾತ್ರಾರ್ಥಿಗಳ ಅನುಕೂಲಕ್ಕಾಗಿ 300 ಕೋಟಿ ರೂ.ಮೌಲ್ಯದ ವಿವಿಧ ಯೋಜನೆಗಳು ಜಾರಿಯಾಗುತ್ತಿವೆ. ಭಕ್ತರ ಅನುಕೂಲಕ್ಕಾಗಿ ದೇವರ ದರ್ಶನದ ಸಮಯವನ್ನು ಹೆಚ್ಚಿಸಲಾಗಿದೆ ಎಂದು ಅವರು ಬರೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.