ಅಧಿವೇಶನ ವಿಳಂಬ ವಾಕ್ಸಮರ ಪ್ರಾರಂಭ

Team Udayavani, Nov 22, 2017, 6:15 AM IST

samsat.jpg

ಹೊಸದಿಲ್ಲಿ: ಸಂಸತ್‌ನ ಚಳಿಗಾಲದ ಅಧಿವೇಶನದ ವಿಚಾರ ಇದೀಗ ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷಗಳ ನಡುವೆ ಹಗ್ಗಜಗ್ಗಾಟಕ್ಕೆ ಕಾರಣವಾಗಿದೆ. ಗುಜರಾತ್‌ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸರಕಾರವು ಉದ್ದೇಶಪೂರ್ವಕವಾಗಿಯೇ ಅಧಿವೇಶನ ವಿಳಂಬ ಮಾಡುತ್ತಿದೆ ಎಂದು ಕಾಂಗ್ರೆಸ್‌ ಆರೋಪಿಸಿದರೆ, ಯುಪಿಎ ಅವಧಿಯಲ್ಲೂ ವಿಳಂಬ ಮಾಡಲಾಗಿತ್ತು ಎಂದು ಸರಕಾರ ಸಮರ್ಥಿಸಿಕೊಂಡಿದೆ. ಒಟ್ಟಿನಲ್ಲಿ ಅಧಿವೇಶನ ವಿಚಾರವು ಎರಡೂ ಪಕ್ಷಗಳ ನಾಯಕರ ಕೆಸರೆರಚಾಟಕ್ಕೆ ನಾಂದಿ ಹಾಡಿದೆ.

ಮಂಗಳವಾರ ಈ ಕುರಿತು ಮಾತನಾಡಿರುವ ಲೋಕಸಭೆ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಸರಕಾರದ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ. “ಬಿಜೆಪಿಯ ಬಣ್ಣ ಎಲ್ಲಿ ಹೊರಬೀಳುತ್ತದೋ ಎಂಬ ಭಯದಿಂದ ಅವರು ಅಧಿವೇಶನ ವಿಳಂಬ ಮಾಡುತ್ತಿದ್ದಾರೆ. ಜಿಎಸ್‌ಟಿ, ನೋಟು ಅಮಾನ್ಯ, ರಫೇಲ್‌ ಡೀಲ್‌, ಸಚಿವರ ಹಗರಣಗಳ ಕುರಿತು ಪ್ರತಿಪಕ್ಷಗಳು ಪ್ರಶ್ನಿಸಿದರೆ ಎಂಬ ಭೀತಿ ಬಿಜೆಪಿಯನ್ನು ಕಾಡುತ್ತಿದೆ. ಮೋದಿ ಸರಕಾರದಲ್ಲಿ ಪ್ರಜಾಪ್ರಭುತ್ವ ಎನ್ನುವುದು ಅತ್ಯಂತ ದೊಡ್ಡ ಹೊಡೆತ ತಿನ್ನುತ್ತಿದೆ ಎಂದು ಆರೋಪಿಸಿದ್ದಾರೆ.

ಇದೇ ವೇಳೆ, ಮಾತನಾಡಿದ ರಾಜ್ಯಸಭೆ ವಿಪಕ್ಷ ನಾಯಕ ಗುಲಾಂ ನಬಿ ಆಜಾದ್‌, “ಸರಕಾರವು ತನ್ನ ಭ್ರಷ್ಟಾಚಾರ ಮತ್ತು ವೈಫ‌ಲ್ಯಗಳನ್ನು ಮುಚ್ಚಿಕೊಳ್ಳುವ ಸಲುವಾಗಿ ಅಧಿವೇಶನದಿಂದ ದೂರವುಳಿಯಲು ಯತ್ನಿ ಸುತ್ತಿದೆ. 
ಮೋದಿ ಹಾಗೂ ಅವರ ಸಂಪುಟವು ಪ್ರಚಾರದಲ್ಲೇ ನಿರತವಾಗಿದ್ದು, “ಪ್ರಚಾರದ ಯಂತ್ರ’ವಾಗಿ ಮಾರ್ಪಾಟಾಗಿದೆ. ಇದರ ಬದಲಿಗೆ ಒಳ್ಳೆಯ ಆಡಳಿತ ನೀಡುವತ್ತ ಗಮನ ಹರಿಸಬೇಕೆಂದು ಜನ ಬಯಸುತ್ತಾರೆ’ ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ “ಬ್ರಹ್ಮ’ ಇದ್ದಂತೆ: ಖರ್ಗೆ
ಪ್ರಧಾನಿ ನರೇಂದ್ರ ಮೋದಿ ಅವರು ಸೃಷ್ಟಿಕರ್ತ “ಬ್ರಹ್ಮ’ ಇದ್ದಂತೆ. ಎಲ್ಲವನ್ನೂ ನಿಯಂತ್ರಿಸುತ್ತಿರುವವರು ಅವರೇ. ಚಳಿಗಾಲದ ಅಧಿವೇಶನ ಯಾವಾಗ ನಡೆಸಬೇಕು ಎಂಬುದು ಗೊತ್ತಿರುವುದೂ ಅವರಿಗೆ ಮಾತ್ರ ಎಂದು ಖರ್ಗೆ ವ್ಯಂಗ್ಯವಾಡಿದ್ದಾರೆ. “ನಾನು ಹಲವು ಸಚಿವರು, ಸ್ಪೀಕರ್‌, ಲೋಕಸಭೆ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಹಲವರಲ್ಲಿ ವಿಚಾರಿಸಿ ನೋಡಿದೆ. ಆದರೆ, ಅಧಿವೇಶನದ ದಿನಾಂಕದ ಬಗ್ಗೆ ಯಾರಿಗೂ ಗೊತ್ತಿಲ್ಲ. ಇದು ಗೊತ್ತಿರುವುದು ಒಬ್ಬ ವ್ಯಕ್ತಿಗೆ ಮಾತ್ರ. ಆ ವ್ಯಕ್ತಿಯನ್ನು ಅವರು ಬ್ರಹ್ಮ ಎನ್ನುತ್ತಾರೆ. ಹಾಗಾಗಿ, ಬ್ರಹ್ಮ ಆದೇಶ ಹೊರಡಿಸುವವರೆಗೂ ನಮಗೆ ಅಧಿವೇಶನದ ದಿನಾಂಕ ಗೊತ್ತಾಗುವುದಿಲ್ಲ’ ಎನ್ನುತ್ತಾ ಆಡಳಿತಾರೂಢ ಪಕ್ಷವನ್ನು ಕುಟುಕಿದ್ದಾರೆ. 

ನೀವು ಮಾಡಿದ್ದೂ ಇದನ್ನೇ: ಸಚಿವ ಅನಂತ್‌ಕುಮಾರ್‌
ಕಾಂಗ್ರೆಸ್‌ ಆರೋಪಗಳಿಗೆ ತಿರುಗೇಟು ನೀಡಿರುವ ಕೇಂದ್ರ ಸಚಿವ ಅನಂತ್‌ಕುಮಾರ್‌, “ಯುಪಿಎ ಸರಕಾರ ಕೂಡ ಅಧಿವೇಶನವನ್ನು 2 ಬಾರಿ ವಿಳಂಬ ಮಾಡಿತ್ತು. 2008 ಮತ್ತು 2013ರಲ್ಲಿ ಅಧಿವೇಶನವನ್ನು ತಡವಾಗಿ ನಡೆಸಲಾಗಿತ್ತು. ಕಾಂಗ್ರೆಸ್‌ ನಾಯಕರು ಮರೆವಿನ ರೋಗದಿಂದ ಬಳಲುತ್ತಿದ್ದಾರೆ. ಗುಜರಾತ್‌ ಮತ್ತು ಹಿಮಾಚಲದಲ್ಲಿ ಸೋಲುಣ್ಣುವ ಹತಾಶೆಯು ಕಾಂಗ್ರೆಸ್‌ನಿಂದ ಇಂಥ ಆರೋಪಗಳನ್ನು ಮಾಡಿಸುತ್ತಿದೆ’ ಎಂದಿದ್ದಾರೆ. ಜತೆಗೆ, ಡಿಸೆಂಬರ್‌ನಲ್ಲಿ ಅಧಿವೇಶನ ನಡೆಸುತ್ತೇವೆ. ಸದ್ಯದಲ್ಲೇ ಅದರ ದಿನಾಂಕವನ್ನು ಘೋಷಿಸುತ್ತೇವೆ ಎಂದೂ ಸಚಿವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

PM Modi: 43 ವರ್ಷದ ಬಳಿಕ ಪ್ರಧಾನಿ ಮೋದಿ ಕುವೈತ್ ಭೇಟಿ… ಇಲ್ಲಿದೆ ಎರಡು ದಿನದ ವೇಳಾಪಟ್ಟಿ

PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

German: ಮಾರುಕಟ್ಟೆಗೆ ನುಗ್ಗಿಸಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM Modi: 43 ವರ್ಷದ ಬಳಿಕ ಪ್ರಧಾನಿ ಮೋದಿ ಕುವೈತ್ ಭೇಟಿ… ಇಲ್ಲಿದೆ ಎರಡು ದಿನದ ವೇಳಾಪಟ್ಟಿ

PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ

tobacc

Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Strict laws are there to protect women, not to misuse them: Supreme Court

laws: ಕಠಿಣ ಕಾಯ್ದೆ ‌ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

PM Modi: 43 ವರ್ಷದ ಬಳಿಕ ಪ್ರಧಾನಿ ಮೋದಿ ಕುವೈತ್ ಭೇಟಿ… ಇಲ್ಲಿದೆ ಎರಡು ದಿನದ ವೇಳಾಪಟ್ಟಿ

PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.