ಸರ್ಕಾರಿ ಜಾಬ್ ಗೆ 2 ಮಕ್ಕಳ ಮಿತಿ
Team Udayavani, Apr 10, 2017, 10:37 AM IST
ಗುವಾಹಟಿ: ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದವ ಅಭ್ಯರ್ಥಿಗಳು ಯಾವುದೇ ಸ್ಥಳೀಯ ಹಾಗೂ ಸ್ವಾಯತ್ತ ಸಂಸ್ಥೆಗಳ ಚುನಾವಣೆಗೆ ಸ್ಪರ್ಧಿಸುವಂತಿಲ್ಲ! ಇದು ಅಸ್ಸಾಂ ಸರ್ಕಾರದ ಹೊಸ ನೀತಿ.
ಈಗಾಗಲೇ ಈ ವಿಷಯವನ್ನು ಬಜೆಟ್‌ನಲ್ಲಿ ಪ್ರಸ್ತಾಪಿಸಿದ್ದ ಅಸ್ಸಾಂ ಸರ್ಕಾರ, ಭಾನು ವಾರ ಈ ಕುರಿತ ಕರಡು ಜನಸಂಖ್ಯಾ ನೀತಿಯೊಂದನ್ನು ಘೋಷಿಸಿದೆ. ಅದರಂತೆ ಎರಡಕ್ಕೂ ಹೆಚ್ಚು ಮಕ್ಕಳನ್ನು ಹೊಂದಿರುವ ಅಭ್ಯರ್ಥಿಗಳು ಸ್ಥಳೀಯ ಸಂಸ್ಥೆ ಚುನಾವಣೆಗೆ ಸ್ಪರ್ಧಿಸಲು ಅರ್ಹತೆ ಕಳೆದುಕೊಳ್ಳುತ್ತಾರೆ. ಇದರೊಂದಿಗೆ 2ಕ್ಕಿಂತ ಹೆಚ್ಚು ಮಕ್ಕಳಿರುವ ದಂಪತಿಗೆ ಸರ್ಕಾರಿ ಕೆಲಸ ಕೂಡ ಸಿಗಲ್ಲ!
ಈ ಕುರಿತು ಮಾತನಾಡಿದ ಆರೋಗ್ಯ ಸಚಿವ ಹಿಮಂತ ಬಿಸ್ವಾ ಸರ್ಮಾ, “2 ಕ್ಕಿಂತ ಹೆಚ್ಚು ಮಕ್ಕಳಿರುವ ದಂಪತಿ, ಚುನಾವಣೆ ಆಯೋಗದ ಅಡಿ ನಡೆಯುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಸ್ಪರ್ಧಿಸುವಂತಿಲ್ಲ. ಸರ್ಕಾರಿ ಕೆಲಸ ಪಡೆಯಲೂ ಅವರು ಅನರ್ಹರು,’ ಎಂದು ತಿಳಿಸಿದ್ದಾರೆ.
“ಈ ಮಕ್ಕಳ ಮಿತಿ ಕರಾರಿನ ಅಡಿ, ಕೆಲಸ ಪಡೆಯುವ ಯಾವುದೇ ಸರ್ಕಾರಿ ನೌಕರ ತನ್ನ ಸೇವಾವಧಿ ಮುಗಿವವರೆಗೂ ಕರಾರಿಗೆ ಬದ್ಧನಾಗಿರಬೇಕು. ಟ್ರ್ಯಾಕ್ಟರ್ ವಿತರಣೆ, ಮನೆಗಳ ಕೊಡುಗೆ ಸೇರಿ ಉದ್ಯೋಗ ಸೃಷ್ಟಿಗೆ ಸಂಬಂಧಿಸಿದ ಯಾವುದೇ ಯೋಜನೆಯಡಿ ಅರ್ಹತೆ ಗಿಟ್ಟಿಸಲು ಈ “ಎರಡು ಮಕ್ಕಳ’ ಮಿತಿ ಅನ್ವಯವಾಗುತ್ತದೆ,’ ಎಂದಿದ್ದಾರೆ. ಅಲ್ಲದೆ ರಾಜ್ಯದ ಎಲ್ಲ ಹೆಣ್ಣುಮಕ್ಕಳಿಗೆ ವಿವಿ ಹಂತದವರೆಗೆ ಉಚಿತ ಶಿಕ್ಷಣ ನೀಡಲು ಈ ಕರಡಿನಲ್ಲಿ ಸಲಹೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
MUST WATCH
ಹೊಸ ಸೇರ್ಪಡೆ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.