ನಾಳೆ ಆಂಧ್ರಕ್ಕೆ ಚಂಡಮಾರುತ
Team Udayavani, Dec 16, 2018, 6:30 AM IST
ಚೆನ್ನೈ: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಚಂಡಮಾರುತವಾಗಿ ಬದಲಾಗುತ್ತಿದ್ದು, ಸೋಮವಾರ ಒಂಗೋಲ್ ಮತ್ತು ಕಾಕಿನಾಡ ಕರಾವಳಿಗೆ ಅಪ್ಪಳಿಸಲಿದೆ.
ಈ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶದಲ್ಲಿ ಹೈಅಲರ್ಟ್ ಘೋಷಿಸ ಲಾಗಿದ್ದು, ಎನ್‌ಡಿಆರ್‌ಎಫ್ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಯನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ. ಚಂಡಮಾರುತದ ಪ್ರಭಾವದಿಂದಾಗಿ ಆಂಧ್ರ ಕರಾವಳಿ ಹಾಗೂ ತಮಿಳುನಾಡಿನ ಉತ್ತರ ಭಾಗದಲ್ಲಿ ಭಾನುವಾರದಿಂದ 2 ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಆಂಧ್ರದಲ್ಲಿ ಕರಾವಳಿ ಭಾಗಗಳ 8 ಕಡೆ ಎಲ್ಲ ಶಾಲೆಗಳಿಗೆ 2 ದಿನಗಳ ರಜೆಯನ್ನು ಘೋಷಿಸಲಾಗಿದೆ ಎಂದು ಪೂರ್ವ ಗೋದಾವರಿ ಜಿಲ್ಲಾಧಿಕಾರಿ ಕಾರ್ತಿಕೇಯ ಮಿಶ್ರಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.