Students: ಅಮೆರಿಕಕ್ಕೆ ವ್ಯಾಸಂಗ ಕ್ಕೆತೆರಳುವ ವಿದ್ಯಾರ್ಥಿಗಳಲ್ಲಿ ಭಾರತೀಯರೇ ಹೆಚ್ಚು!
Team Udayavani, Nov 19, 2024, 6:50 AM IST
ನವದೆಹಲಿ: ಅಮೆರಿಕದಲ್ಲಿ ಈ ವರ್ಷ 3.3 ಲಕ್ಷ ಭಾರತೀಯ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಈ ಮೂಲಕ ಕಳೆದ 15 ವರ್ಷಗಳಲ್ಲೇ ಮೊದಲ ಬಾರಿಗೆ ಅಮೆ ರಿಕಕ್ಕೆ ಅತಿ ಹೆಚ್ಚು ವಿದ್ಯಾರ್ಥಿಗಳನ್ನು ಕಳುಹಿಸಿದ ದೇಶಗಳ ಪಟ್ಟಿಯಲ್ಲಿ ಭಾರತ ಅಗ್ರ ಸ್ಥಾನ ಪಡೆದಿದೆ.
ಸೋಮವಾರ ಬಿಡುಗಡೆಯಾದ 2024ರ ಓಪನ್ ಡೋರ್ ವರದಿ ಈ ಮಾಹಿತಿ ನೀಡಿದೆ. 2022-23ರಲ್ಲಿ ಅಮೆರಿಕಕ್ಕೆ ವಿದ್ಯಾರ್ಥಿಗಳನ್ನು ಕಳುಹಿಸುವಲ್ಲಿ ಚೀನಾ ಮೊದಲ ಸ್ಥಾನ ಪಡೆದಿತ್ತು. 2ನೇ ಸ್ಥಾನದಲ್ಲಿ ಭಾರತವಿತ್ತು. ವರದಿಯ ಪ್ರಕಾರ, 2023-24ರಲ್ಲಿ 3.31 ಲಕ್ಷ ಭಾರತೀಯ ವಿದ್ಯಾರ್ಥಿಗಳು ಅಮೆರಿಕದಲ್ಲಿ ವ್ಯಾಸಂಗ ಮಾಡುತ್ತಿದ್ದು, ಇದು ಸಾರ್ವಕಾಲಿಕ ಅಧಿಕ ಮಟ್ಟವಾಗಿದೆ. 2022-23ರಲ್ಲಿ ಈ ಸಂಖ್ಯೆ 2.68 ಲಕ್ಷ ಇತ್ತು.
ಅಲ್ಲಿನ ಒಟ್ಟು ಅಂತಾರಾಷ್ಟ್ರೀಯ ವಿದ್ಯಾರ್ಥಿಗಳ ಪೈಕಿ ಶೇ.29ರಷ್ಟು ಭಾರತೀಯ ವಿದ್ಯಾರ್ಥಿಗಳಿದ್ದಾರೆ. ನಂತರದ ಸ್ಥಾನದಲ್ಲಿ ಕ್ರಮವಾಗಿ ಚೀನಾ, ದಕ್ಷಿಣ ಕೊರಿಯಾ, ಕೆನಡಾ ಹಾಗೂ ತೈವಾನ್ ದೇಶಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ
Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ
Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್ ಭೀತಿ!
Election: ಮಹಾರಾಷ್ಟ್ರ, ಜಾರ್ಖಂಡ್ ಚುನಾವಣೆ ಪ್ರಚಾರಕ್ಕೆ ತೆರೆ: ನಾಳೆ ಮತದಾನ
Scientists: ಕೋಳಿ ಮೊದಲಾ, ಮೊಟ್ಟೆ ಮೊದಲಾ?: ಇಲ್ಲಿದೆ ಉತ್ತರ!
MUST WATCH
ಹೊಸ ಸೇರ್ಪಡೆ
Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ
Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ
Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್ ಭೀತಿ!
IPL-2025: ಓಂಕಾರ್ ಸಾಳ್ವಿ ಆರ್‌ಸಿಬಿ ಬೌಲಿಂಗ್ ಕೋಚ್
MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.