ಕೋಲಾಹಲಕ್ಕೆ ಬಲಿಯಾದ ಕಲಾಪ


Team Udayavani, Dec 19, 2017, 6:10 AM IST

SADANA.jpg

ಹೊಸದಿಲ್ಲಿ: ಗುಜರಾತ್‌ ಚುನಾವಣೆಯ ಫ‌ಲಿತಾಂಶ ಹೊರಬಿದ್ದರೂ ಚುನಾವಣೆ ವೇಳೆ ನಡೆದ ವಾಗ್ಯು ದ್ಧದ ಕಾವು ಇಳಿದಿಲ್ಲ ಎನ್ನುವುದಕ್ಕೆ ಸೋಮವಾರದ ಸಂಸತ್‌ ಕಲಾಪವೇ ಸಾಕ್ಷಿ. ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ಮೋದಿ ಅವರು ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರ ವಿರುದ್ಧ ನೀಡಿದ ಹೇಳಿಕೆಯನ್ನು ಪ್ರತಿಭಟಿಸಿ ವಿಪಕ್ಷಗಳು ಗದ್ದಲ ಎಬ್ಬಿಸಿದ ಕಾರಣ ಎರಡೂ ಸದನಗಳ ಕಲಾಪಗಳು ದಿನದ ಮಟ್ಟಿಗೆ ಮುಂದೂಡಲ್ಪಟ್ಟವು.

ರಾಜ್ಯಸಭೆ ಹಾಗೂ ಲೋಕಸಭೆಯಲ್ಲಿ ಕಲಾಪ ಆರಂಭವಾಗುತ್ತಿದ್ದಂತೆ, ವಿಪಕ್ಷ ಕಾಂಗ್ರೆಸ್‌ ಸದಸ್ಯರು ಸದನದ ಬಾವಿಗಿಳಿದು ಘೋಷಣೆ ಕೂಗಲಾರಂಭಿ ಸಿದರು. ಮನಮೋಹನ್‌ ಸಿಂಗ್‌ ವಿರುದ್ಧ ಮೋದಿ ಮಾಡಿರುವ ಆರೋಪಕ್ಕೆ ಸಂಬಂಧಿಸಿ ಪ್ರಧಾನಿ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು. ರಾಜ್ಯಸಭೆ ಯಲ್ಲಿ ಗದ್ದಲ ಜೋರಾದಾಗ ಅಸಮಾಧಾನಗೊಂಡ ಸಭಾಧ್ಯಕ್ಷ ವೆಂಕಯ್ಯ ನಾಯ್ಡು, “ಇಡೀ ದೇಶವೇ ನಿಮ್ಮನ್ನು ನೋಡುತ್ತಿದೆ,’ ಎಂದು ಹೇಳಿ, ಕಲಾಪವನ್ನು ಮಂಗಳವಾರಕ್ಕೆ ಮುಂದೂಡಿದರು.

ಇನ್ನು ಲೋಕಸಭೆಯಲ್ಲೂ ಇದೇ ಪರಿಸ್ಥಿತಿ ಕಾಣಿ ಸಿತು. ಆದರೆ ವಿಪಕ್ಷಗಳ ಗದ್ದಲದ ನಡುವೆಯೂ 5 ವಿಧೇಯಕಗಳನ್ನು ಮಂಡಿಸುವಲ್ಲಿ ಸರಕಾರ ಯಶಸ್ವಿಯಾಯಿತು. ಮಧ್ಯಾಹ್ನದವರೆಗೆ ಕಲಾಪ ಮುಂದೂಡಿದ ಸ್ಪೀಕರ್‌ ಸುಮಿತ್ರಾ ಮಹಾಜನ್‌, ಗದ್ದಲ ಕೊನೆಯಾಗದ ಕಾರಣ ದಿನದ ಮಟ್ಟಿಗೆ ಮುಂದೂಡಿದರು.

ಇದೇ ವೇಳೆ, ಹಣಕಾಸು ನಿರ್ಣಯ ಮತ್ತು ಠೇವಣಿ ವಿಮೆ ವಿಧೇಯಕವು ಬಜೆಟ್‌ ಅಧಿವೇಶ ನದಲ್ಲೂ ಮಂಡನೆಯಾಗುವ ಸಾಧ್ಯತೆಯಿಲ್ಲ. ಏಕೆಂದರೆ, ವಿಧೇಯಕವನ್ನು ಪರಿಶೀಲಿಸುತ್ತಿರುವ ಜಂಟಿ ಸಮಿತಿಯು, ವರದಿ ಸಲ್ಲಿಸಲು ಇನ್ನಷ್ಟು ಕಾಲಾವಕಾಶ ಕೋರಿದ್ದು, ಅದಕ್ಕೆ ಒಪ್ಪಿಗೆ ನೀಡಲಾಗಿದೆ ಎಂದು ಸ್ಪೀಕರ್‌ ಸುಮಿತ್ರಾ ತಿಳಿಸಿದ್ದಾರೆ.

ಬಿದಿರು “ಮರ’ವಲ್ಲ: ಮಸೂದೆ ಮಂಡನೆ
ಅರಣ್ಯೇತರ ಪ್ರದೇಶಗಳಲ್ಲಿನ ಬಿದಿರನ್ನು “ಮರ’ ಎಂಬ ವ್ಯಾಖ್ಯೆಯಿಂದ ಹೊರಗಿಡುವಂಥ ಭಾರತೀಯ ಅರಣ್ಯ (ತಿದ್ದುಪಡಿ) ಕಾಯ್ದೆ , 2017 ಅನ್ನು ಲೋಕಸಭೆಯಲ್ಲಿ ಮಂಡಿಸಲಾಗಿದೆ. ಅದರಂತೆ, ಈ ಪ್ರದೇಶಗಳಲ್ಲಿ ಬೆಳೆದ ಬಿದಿರು ಕತ್ತರಿಸುವ ಮತ್ತು ಸಾಗಾಟ ಮಾಡುವುದಕ್ಕೆ ಪರ ವಾನಿಗೆಯ ಅಗತ್ಯವಿರುವುದಿಲ್ಲ. ಇದೊಂದು ಪ್ರಮುಖ ಸುಧಾರಣಾ ಕ್ರಮವಾಗಿದ್ದು, ರೈತರಿಗೆ ಅನು ಕೂಲವಾಗಲಿದೆ. ರೈತರು ಬಿದಿರು ಬೆಳೆಯುವತ್ತ ಆಸಕ್ತಿ ವಹಿಸಲಿದ್ದು, ಅವರ ಆದಾಯವೂ ಹೆಚ್ಚಳವಾಗಲಿದೆ ಎಂದು ಮಸೂದೆಯನ್ನು ಮಂಡಿಸಿದ ಸಚಿವ ಹರ್ಷವರ್ಧನ್‌ ಹೇಳಿದ್ದಾರೆ.

2 ಬಾರಿ ನೀಟ್‌ ಪರೀಕ್ಷೆ?
ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ನೀಡಲಿ ಎಂಬ ಕಾರಣಕ್ಕಾಗಿ ವರ್ಷದಲ್ಲಿ 2 ಬಾರಿ ನೀಟ್‌ ಮತ್ತು ಜೆಇಇ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಲೋಕಸಭೆಯಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಖಾತೆ ಸಹಾಯಕ ಸಚಿವ ಉಪೇಂದ್ರ ಕುಶ್ವಾಹಾ ತಿಳಿಸಿದ್ದಾರೆ. ಜತೆಗೆ, ಪರೀಕ್ಷೆ ನಡೆಸಲೆಂದೇ “ನ್ಯಾಷನಲ್‌ ಟೆಸ್ಟಿಂಗ್‌ ಏಜೆನ್ಸಿ'(ಎನ್‌ಟಿಎ) ಎಂಬ ಸ್ವಾಯತ್ತ ಸಂಸ್ಥೆಯನ್ನು ರಚಿಸುತ್ತೇವೆ ಎಂದೂ ಹೇಳಿದ್ದಾರೆ.

ಟಾಪ್ ನ್ಯೂಸ್

liqer-wine

Huge Revenue: ಹೊಸ ವರ್ಷಾಚರಣೆ ಸಂಭ್ರಮ; ಅಬಕಾರಿ ಇಲಾಖೆಗೆ ಭರ್ಜರಿ ಆದಾಯ!

52528

Delhi: ಪತ್ನಿಯಿಂದ ವಿಚ್ಛೇದನ ಪಡೆಯುವ ಹಂತದಲ್ಲಿದ್ದ ವ್ಯಕ್ತಿ ನೇಣಿಗೆ ಶರಣು

1-ewqewq

Team India; ಡ್ರೆಸ್ಸಿಂಗ್ ರೂಂ ರಹಸ್ಯ: ಕೋಚ್ ಗಂಭೀರ್ ವಿರುದ್ಧ ಮಾಜಿ ಕ್ರಿಕೆಟಿಗರ ಅಸಮಾಧಾನ

ಇನ್ಮುಂದೆ ಶಿವಣ್ಣನಿಗೆ ಡಬಲ್‌ ಪವರ್‌ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್‌ ಹೀರೋ ಮಾತು

ಇನ್ಮುಂದೆ ಶಿವಣ್ಣನಿಗೆ ಡಬಲ್‌ ಪವರ್‌ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್‌ ಹೀರೋ ಮಾತು

5-hiriyadka

Hiriyadka: ಪಂಚಾಯತ್ ಸಿಬ್ಬಂದಿಗಳಿಲ್ಲದೆ ಬಾಗಿಲು ಮುಚ್ಚಿದ ಬೈರಂಪಳ್ಳಿ ಗ್ರಾಮ ಪಂಚಾಯತ್

4-new-year

New Year 2025:ಹಳೆ ವ್ಯಕ್ತಿಗೆ ಹೊಸ ವರ್ಷ….ಹಳೆ ವರ್ಷದಲ್ಲಿ ಕಲಿತ ಎಲ್ಲಾ ಅನುಭವ ಪಾಠವಾಗಲಿ

ಹತ್ತಾರು ಸಿನಿಮಾ.. ನೂರಕ್ಕೆ ನೂರು ನಿರೀಕ್ಷೆ.. ಈ ವರ್ಷದ ಬಹು ನಿರೀಕ್ಷಿತ ಕನ್ನಡ ಚಿತ್ರಗಳಿವು

ಹತ್ತಾರು ಸಿನಿಮಾ.. ನೂರಕ್ಕೆ ನೂರು ನಿರೀಕ್ಷೆ.. ಈ ವರ್ಷದ ಬಹು ನಿರೀಕ್ಷಿತ ಕನ್ನಡ ಚಿತ್ರಗಳಿವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

52528

Delhi: ಪತ್ನಿಯಿಂದ ವಿಚ್ಛೇದನ ಪಡೆಯುವ ಹಂತದಲ್ಲಿದ್ದ ವ್ಯಕ್ತಿ ನೇಣಿಗೆ ಶರಣು

eart

Kutch; 3.2 ತೀವ್ರತೆಯ ಭೂ ಕಂಪನ

crime (2)

Lucknow; ಯುವಕನಿಂದ ತಾಯಿ ಮತ್ತು ನಾಲ್ವರು ಸಹೋದರಿಯರ ಬರ್ಬರ ಹ*ತ್ಯೆ!

kejriwal 2

BJP ತಪ್ಪುಗಳನ್ನು ಆರ್‌ಎಸ್‌ಎಸ್ ಬೆಂಬಲಿಸುತ್ತದೆಯೇ? ಭಾಗವತ್ ರನ್ನು ಪ್ರಶ್ನಿಸಿದ ಕೇಜ್ರಿವಾಲ್

1-frr

Sabarimala; ಯಾತ್ರಿಗಳಿಗೆ ಅರಣ್ಯ ಮಾರ್ಗದ ವಿಶೇಷ ಪಾಸ್‌ ತಾತ್ಕಾಲಿಕ ಸ್ಥಗಿತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7

Belman ಪೇಟೆಯಲ್ಲಿ ಬಾಯ್ದೆರೆದ ಚರಂಡಿಗಳು!

liqer-wine

Huge Revenue: ಹೊಸ ವರ್ಷಾಚರಣೆ ಸಂಭ್ರಮ; ಅಬಕಾರಿ ಇಲಾಖೆಗೆ ಭರ್ಜರಿ ಆದಾಯ!

6

Karkala ಪೇಟೆ ಸುತ್ತಮುತ್ತ ಬೀದಿನಾಯಿಗಳ ಹಾವಳಿ

5

Kundapura: ಜೀವರಕ್ಷಣೆಗೆ ಊರ ಜನರ ಜಾಗೃತಿ

52528

Delhi: ಪತ್ನಿಯಿಂದ ವಿಚ್ಛೇದನ ಪಡೆಯುವ ಹಂತದಲ್ಲಿದ್ದ ವ್ಯಕ್ತಿ ನೇಣಿಗೆ ಶರಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.