ಕೋವಿಡ್ ಅವಧಿಯಲ್ಲಿ ಮಹಾರಾಷ್ಟ್ರದ ಕಾರ್ಯ ಶ್ಲಾಘನೀಯ: ಹರ್ಷವರ್ಧನ್‌


Team Udayavani, Nov 12, 2020, 9:17 PM IST

Harshavardan

ಮುಂಬಯಿ: ಕೋವಿಡ್ ಅವಧಿಯಲ್ಲಿ ಮಹಾರಾಷ್ಟ್ರವು ಸಾಮಾನ್ಯ ಜನರನ್ನು ಕೇಂದ್ರಬಿಂದುವಾಗಿ ಇಟ್ಟುಕೊಂಡು ತೆಗೆದುಕೊಂಡಿರುವ ನವೀನ ನಿರ್ಧಾರಗಳು ಅತ್ಯಂತ ಶ್ಲಾಘನೀಯ ಎಂದು ಕೇಂದ್ರ ಆರೋಗ್ಯ ಸಚಿವ ಡಾ| ಹರ್ಷವರ್ಧನ್‌ ಹೇಳಿದ್ದಾರೆ.

ಕೋವಿಡ್ ಹಿನ್ನೆಲೆಯಲ್ಲಿ ದೇಶದ ವಿವಿಧ ರಾಜ್ಯಗಳು ಕೈಗೊಂಡ ಕ್ರಮಗಳ ಬಗ್ಗೆ ವೀಡಿಯೋ ಕಾನ್ಫರೆನ್ಸ್‌ ನಡೆಸಲಾಯಿತು. ಈ ಸಭೆಯಲ್ಲಿ ಕೇಂದ್ರ ಆರೋಗ್ಯ ಸಚಿವರು ಮಹಾರಾಷ್ಟ್ರ ಸಹಿತ ಏಳು ರಾಜ್ಯಗಳು ಕೈಗೊಂಡ ಕ್ರಮಗಳನ್ನು ಪರಿಶೀಲಿಸಿದರು. ರಾಜ್ಯ ಆರೋಗ್ಯ ಸಚಿವ ರಾಜೇಶ್‌ ಟೋಪೆ, ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ| ಪ್ರದೀಪ್‌ ವ್ಯಾಸ್‌ ಉಪಸ್ಥಿತರಿದ್ದರು.

ಪರೀಕ್ಷಾ ದರಗಳ ಕಡಿತ, ಎಚ್‌ಆರ್‌ಸಿಟಿ ಪರೀಕ್ಷಾ ದರಗಳ ನಿಯಂತ್ರಣ, ಪ್ಲಾಸ್ಮಾ ಮತ್ತು ಮಾಸ್ಕ್ ದರಗಳ ನಿಯಂತ್ರಣ, ಖಾಸಗಿ ಆಸ್ಪತ್ರೆಗಳಲ್ಲಿ ಶೇ. 80ರಷ್ಟು ಹಾಸಿಗೆಗಳ ಮೀಸಲಾತಿ, ಎಲ್ಲ ನಾಗರಿಕರಿಗೆ ಮಹಾತ್ಮಾ ಫುಲೆ ಜನಾರೋಗ್ಯ ಯೋಜನೆ ಅನುಷ್ಠಾನ, ನನ್ನ ಕುಟುಂಬ ನನ್ನ ಜವಾಬ್ದಾರಿ ಅಭಿಯಾನದಂತಹ ಉತ್ತಮ ಮತ್ತು ನವೀನ ನಿರ್ಧಾರಗಳನ್ನು ಮಹಾರಾಷ್ಟ್ರ ಸರಕಾರ ತೆಗೆದುಕೊಂಡಿದೆ. ಇದು ಇತರ ರಾಜ್ಯಗಳಿಗೂ ಉಪಯುಕ್ತವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವರು ಹೇಳಿದರು.

ರಾಜ್ಯದ ಖಾಸಗಿ ವೈದ್ಯರಿಗೆ ಪಿಎಂ ವಿಮಾ ರಕ್ಷಣೆ
ರಾಜ್ಯದಲ್ಲಿಯ ಎಲ್ಲ ಖಾಸಗಿ ವೈದ್ಯರಿಗೆ ಪ್ರಧಾನ ಮಂತ್ರಿ ಬಡ ಕಲ್ಯಾಣ ಪ್ಯಾಕೇಜ್‌ ಅಡಿಯಲ್ಲಿ ವಿಮಾ ರಕ್ಷಣೆಯನ್ನು ಒದಗಿಸಬೇಕೆಂದು ಆರೊಗ್ಯ ಸಚಿವ ರಾಜೇಶ್‌ ಟೋಪೆ ಬೇಡಿಕೆ ಇರಿಸಿದರು. ಈ ಬಗ್ಗೆ ಸಕಾರಾತ್ಮಕ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವರು ಹೇಳಿದರು.

ನನ್ನ ಕುಟುಂಬ ನನ್ನ ಜವಾಬ್ದಾರಿಯ ಅಭಿಯಾನದ ಅಡಿಯಲ್ಲಿ ಕೊರೊನಾ ಸ್ಕ್ರೀನಿಂಗ್‌ ಮತ್ತು ಸಾರ್ವಜನಿಕ ಜಾಗೃತಿ ಅಭಿಯಾನ ನಡೆಸಲು ಸಮರ್ಥವಾಗಿರುವುದರಿಂದ, ಅದರ ಪರಿಣಾಮಕಾರಿ ಫಲಿತಾಂಶಗಳನ್ನು ಕಂಡುಕೊಳ್ಳುತ್ತಿರುವುದಾಗಿ ಸಚಿವ ಟೋಪೆ ತಿಳಿಸಿದರು.

ದೀಪಾವಳಿ ಮತ್ತು ಚಳಿಗಾಲದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಕೈಗೊಳ್ಳುತ್ತಿರುವ ಮುನ್ನೆಚ್ಚರಿಕೆಗಳಿಗೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಮಾಹಿತಿ ನೀಡಿದರು. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ. ಪ್ರಸ್ತುತ, 92,000 ರೋಗಿಗಳು ಚಿಕಿತ್ಸೆಗೆ ಒಳಗಾಗುತ್ತಿದ್ದಾರೆ ಮತ್ತು ರೋಗಿಗಳ ಸಂಖ್ಯೆಯಲ್ಲಿ ಹೆಚ್ಚಳವನ್ನು ತಡೆಯುವ ಪ್ರಯತ್ನಗಳು ನಡೆಯುತ್ತಿವೆ. ಸಂಖ್ಯೆ ಹೆಚ್ಚಾದರೆ, ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಗಿದೆ. ಹಾಸಿಗೆ, ಔಷಧಗಳ ದಾಸ್ತಾನು ಸಮರ್ಪಕವಾಗಿದೆ ಮತ್ತು ಪರೀಕ್ಷೆಗಳ ಸಂಖ್ಯೆ ಹೆಚ್ಚಿಸಲು ಒತ್ತು ನೀಡಲಾಗುತ್ತಿದೆ ಎಂದು ಸಚಿವ ಟೋಪೆ ಹೇಳಿದರು.

ರಾಜ್ಯದಲ್ಲಿ ಸಾವಿನ ಪ್ರಮಾಣವನ್ನು ಕಡಿಮೆ ಮಾಡಲು ಪ್ರಯತ್ನಿಸಲಾಗುತ್ತಿದೆ. ಇದಕ್ಕಾಗಿ ಜಿಲ್ಲಾ ಕಾರ್ಯಪಡೆ ರಚಿಸಲಾಗಿದೆ. ಪ್ರತಿ ಆಸ್ಪತ್ರೆ ಮಟ್ಟದಲ್ಲಿ ಸಾಂಸ್ಥಿಕ ಡೆತ್‌ ಆಡಿಟ್‌ ಸಮಿತಿಗಳನ್ನು ಸ್ಥಾಪಿಸಲು ನಿರ್ದೇಶಿಸಿದೆ. ಇದಲ್ಲದೆ, ಆರಂಭಿಕ ರೋಗ ನಿರ್ಣಯ ಮತ್ತು ಆರಂಭಿಕ ಚಿಕಿತ್ಸೆಗೆ ಒತ್ತು ನೀಡಲಾಗಿದೆ ಎಂದು ಸಚಿವ ಟೋಪೆ ಹೇಳಿದರು.

ಟಾಪ್ ನ್ಯೂಸ್

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

1-vasu

Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

mohan bhagwat

Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

sand 1

Padubidri: ಮರಳು ಅಕ್ರಮ ಸಾಗಾಟ; ವಶ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

3

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.