ತಂತ್ರಜ್ಞಾನ ಬಳಸಿ ಕಳ್ಳತನ ತಪ್ಪಿಸಿದ ಎಂಜಿನಿಯರ್!
ಕಾನ್ಪುರದ ಮನೆಯಲ್ಲಿದ್ದ ಕಳ್ಳರ ಪತ್ತೆ ಹಚ್ಚಿದ ಟೆಕ್ಕಿ
Team Udayavani, Jan 20, 2022, 6:50 AM IST
ಲಕ್ನೋ: ತಂತ್ರಜ್ಞಾನ ಸಾಕಷ್ಟು ಮುಂದುವರಿ ದಿದೆ ಎನ್ನುವುದಕ್ಕೆ ಹಲವು ಉದಾಹರಣೆಗಳು ಸಿಗುತ್ತವೆ. ಕಾನ್ಪುರದಲ್ಲಿರುವ ಪೂರ್ವಜರ ಮನೆಯಲ್ಲಿ ನಡೆಯುತ್ತಿದ್ದ ಕಳ್ಳತನವನ್ನು ಸಾಫ್ಟ್ ವೇರ್ ಎಂಜಿನಿಯರ್ ಒಬ್ಬರು ತಪ್ಪಿಸಿದ್ದಾರೆ.
ಅಮೆರಿಕದ ನ್ಯೂಜೆರ್ಸಿಯಲ್ಲಿ ಸಾಫ್ಟ್ ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿರುವ ವಿಜಯ್ ಅವಸ್ತಿ ಅವರ ಮೊಬೈಲ್‌ಗೆ ಸೋಮವಾರ ಮಧ್ಯರಾತ್ರಿ ಅಲರ್ಟ್ ಬಂದಿದೆ. ಅವರು, ಕಾನ್ಪುರದಲ್ಲಿ ರುವ ತಮ್ಮ ಪೂರ್ವಜರ ಮನೆಯಲ್ಲಿ ಅಳವಡಿಸಿದ್ದ ಸೆನ್ಸಾರ್ ಗಳು ಹಾಗೂ ಸಿಸಿಟಿವಿ ಕೆಮರಾ ಅವರಿಗೆ ಎಚ್ಚರಿಕೆಯ ಸಂದೇಶ ಕಳುಹಿಸಿ ಕೊಟ್ಟಿದೆ.
ತತ್‌ಕ್ಷಣ ಎಚ್ಚೆತ್ತುಕೊಂಡ ವಿಜಯ್, ಸಿಸಿಟಿವಿ ದೃಶ್ಯ ವೀಕ್ಷಿಸಿದಾಗ ಅಲ್ಲಿ ಕಳ್ಳರು ಮನೆಯ ಬೀಗ ಒಡೆಯುತ್ತಿರುವುದು ಗೊತ್ತಾಗಿದೆ. ತತ್‌ಕ್ಷಣ ಅವರು ಆ ಮನೆಯ ಲ್ಲಿದ್ದ ಸ್ಪೀಕರ್‌ಗಳ ಮೂಲಕ ಕಳ್ಳರಿಗೆ ಎಚ್ಚರಿಕೆ ನೀಡಿದ್ದರಾದರೂ ಕಳ್ಳರು ಡೋಂಟ್ ಕೇರ್ ಎನ್ನುವಂತೆ ತಮ್ಮ ಕೆಲಸ ಮುಂದುವರಿಸಿದ್ದಾರೆ. ಕಳ್ಳರ ನಡವಳಿಕೆ ಕಂಡು, ವಿಜಯ್ ಪಕ್ಕದ ಮನೆಯವರಿಗೆ ಕರೆ ಮಾಡಿ ವಿಚಾರ ಮುಟ್ಟಿಸಿದ್ದಾನೆ. ಅವರು ಸ್ಥಳೀಯ ಪೊಲೀಸರಿಗೆ ಮಾಹಿತಿ ಕೊಟ್ಟಿದ್ದು, ಐದೇ ನಿಮಿಷಗಳಲ್ಲಿ ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ. ಆಗಿನ್ನೂ ಮನೆಯೊಳಗೇ ಇದ್ದ ಕಳ್ಳರು, ಓಡಿಹೋಗಲು ಪ್ರಯತ್ನಿಸಿದ್ದು, ಓರ್ವನ ಮೇಲೆ ಗುಂಡು ಹಾರಿಸಲಾಗಿದೆ. ಇನ್ನುಳಿದವರು ತಪ್ಪಿಸಿ ಕೊಂಡಿದ್ದಾಗಿ ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
Mann Ki Baat: ಮೈಸೂರಿನ ‘ಅರ್ಲಿ ಬರ್ಡ್’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Arrested: ಉಸಿರುಗಟ್ಟಿಸಿ ಪತ್ನಿಯ ಕೊಂದು ಮಗುವಿನ ಜೊತೆಗೆ ಪತಿ ಪರಾರಿ
Kadalekai Parishe: ಇಂದಿನಿಂದ ಬಸವನಗುಡಿ ಕಡಲೆಕಾಯಿ ಪರಿಷೆ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.