Hindi ಮತ್ತು ಇತರ ಭಾಷೆಗಳ ನಡುವೆ ಎಂದಿಗೂ ಸ್ಪರ್ಧೆ ಇರಬಾರದು: ಅಮಿತ್ ಶಾ
Team Udayavani, Sep 14, 2024, 7:00 PM IST
ಹೊಸದಿಲ್ಲಿ: ”ಹಿಂದಿ ಮತ್ತು ಇತರ ಭಾರತೀಯ ಭಾಷೆಗಳ ನಡುವೆ ಎಂದಿಗೂ ಸ್ಪರ್ಧೆ ಇರಬಾರದು ಏಕೆಂದರೆ ಅಧಿಕೃತ ಭಾಷೆ ಹಿಂದಿ ಎಲ್ಲ ಭಾಷೆಗಳ ಸ್ನೇಹಿತ ಮತ್ತು ಅವು ಪರಸ್ಪರ ಪೂರಕವಾಗಿವೆ” ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ(ಸೆ14) ಹೇಳಿದ್ದಾರೆ.
ಹಿಂದಿ ದಿವಸ್ ಸಂದರ್ಭ ನಾಲ್ಕನೇ ಅಖಿಲ ಭಾರತೀಯ ರಾಜಭಾಷಾ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಶಾ, ‘ಎಲ್ಲ ಇತರ ಭಾರತೀಯ ಭಾಷೆಗಳನ್ನು ಬಲಪಡಿಸುವವರೆಗೆ ಮತ್ತು ಅಧಿಕೃತ ಭಾಷೆಯು ಎಲ್ಲರೊಂದಿಗೆ ಸಂವಾದವನ್ನು ಸ್ಥಾಪಿಸುವವರೆಗೆ ಅಧಿಕೃತ ಭಾಷೆ ಹಿಂದಿಯ ಪ್ರಚಾರ ನಡೆಯುವುದಿಲ್ಲ’ ಎಂದು ಹೇಳಿದರು.
”ಹಿಂದಿಯನ್ನು ಸಂವಹನ ಭಾಷೆ, ಸಾಮಾನ್ಯ ಭಾಷೆ, ತಾಂತ್ರಿಕ ಭಾಷೆ ಮತ್ತು ಈಗ ಅಂತಾರಾಷ್ಟ್ರೀಯ ಭಾಷೆಯನ್ನಾಗಿ ಮಾಡುವ ಪ್ರತಿಜ್ಞೆಯನ್ನು ತೆಗೆದುಕೊಳ್ಳುವ ಸಂದರ್ಭವೇ ಹಿಂದಿ ದಿವಸ್” ಎಂದು ಶಾ ಹೇಳಿದರು.
“ನಾವು ಹಿಂದಿಯನ್ನು ಅಧಿಕೃತ ಭಾಷೆಯಾಗಿ 75 ವರ್ಷಗಳನ್ನು ಪೂರ್ಣಗೊಳಿಸಿದ ಗುರುತಾಗಿ ವಜ್ರಮಹೋತ್ಸವವನ್ನು ಆಚರಿಸುತ್ತಿದ್ದೇವೆ. ಹಿಂದಿಯನ್ನು ಅಧಿಕೃತ ಭಾಷೆಯನ್ನಾಗಿ ಸ್ವೀಕರಿಸಿ ದೇಶದ ಎಲ್ಲ ಸ್ಥಳೀಯ ಭಾಷೆಗಳನ್ನು ಹಿಂದಿಯ ಮೂಲಕ ಸಂಪರ್ಕಿಸುವ ಮೂಲಕ ನಮ್ಮ ಸಂಸ್ಕೃತಿ, ಭಾಷೆ, ಸಾಹಿತ್ಯ, ಕಲೆ, ವ್ಯಾಕರಣವನ್ನು ಉಳಿಸಿ ಬೆಳೆಸುವತ್ತ ಸಾಗುತ್ತಿದ್ದೇವೆ. ಹಿಂದಿಯು ಭೌಗೋಳಿಕ-ರಾಜಕೀಯ ಭಾಷೆಗಿಂತ ಹೆಚ್ಚಾಗಿ ಭೌಗೋಳಿಕ-ಸಾಂಸ್ಕೃತಿಕ ಭಾಷೆಯಾಗಿದೆ. ಗೃಹ ಮತ್ತು ಸಹಕಾರ ಎಂಬ ತನ್ನ ಎರಡು ಸಚಿವಾಲಯಗಳ ಫೈಲ್‌ಗಳ ಮೂಲಕ ಎಲ್ಲಾ ಸಂವಹನಗಳನ್ನು ಹಿಂದಿ ಮೂಲಕ ಮಾಡಲಾಗುತ್ತದೆ. ಈ ಹಂತವನ್ನು ತಲುಪಲು ಮೂರು ವರ್ಷಗಳು ತೆಗೆದುಕೊಂಡಿತು” ಎಂದು ಶಾ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Adani Group: ಲಂಚ, ಸತ್ಯ ಮರೆಮಾಚಿದ ಕಾರಣಕ್ಕೆ ಗೌತಮ್ ಅದಾನಿ ವಿರುದ್ದ ಅಮೆರಿಕದಲ್ಲಿ ಕೇಸು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Border Gavaskar Trophy: ಕಾಂಗರೂ ಚಾಲೆಂಜ್ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ
Kollywood: ʼಅಮರನ್ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.