ನೀಟ್ ಪಿಜಿ ಪರೀಕ್ಷೆಗೆ ಪರ್ಯಾಯ ದಿನಾಂಕವಿಲ್ಲ
Team Udayavani, Feb 25, 2023, 7:35 AM IST
ನವದೆಹಲಿ: 2023ರ ನೀಟ್ ಪಿಜಿ ಪರೀಕ್ಷೆಗೆ ಸುಮಾರು 2.09 ಲಕ್ಷ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಫೆ.5ರಂದು ಪರೀಕ್ಷೆ ನಿಗದಿಯಾಗಿದೆ. ಪರೀಕ್ಷೆಯನ್ನು ಮುಂದೂಡಿದರೆ ಮುಂದಿನ ದಿನಗಳಲ್ಲಿ ಪರೀಕ್ಷೆಯನ್ನು ನಡೆಸಲು ಯಾವುದೇ ಪರ್ಯಾಯ ಸೂಕ್ತ ದಿನಾಂಕ ಲಭ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ಗೆ ಶುಕ್ರವಾರ ರಾಷ್ಟ್ರೀಯ ಪರೀಕ್ಷಾ ಮಂಡಳಿ(ಎನ್‌ಬಿಇ) ತಿಳಿಸಿದೆ.
ಇಂಟರ್ನ್ಶಿಪ್‌ಗೆ ಕಟ್ ಆಫ್ ದಿನಾಂಕವನ್ನು ಆ.11ರವರೆಗೆ ವಿಸ್ತರಿಸಿರುವುದರಿಂದ ನೀಟ್ ಪಿಜಿ ಪರೀಕ್ಷೆಯನ್ನು ಮುಂದೂಡಬೇಕು ಎಂದು ಕೋರಿ ಸಲ್ಲಿಸಿರುವ ಎರಡು ಅರ್ಜಿಗಳ ವಿಚಾರಣೆ ನಡೆಸಿದ ನ್ಯಾ. ಎಸ್.ಆರ್.ಭಟ್ ಮತ್ತು ನ್ಯಾ. ದೀಪಂಕರ್ ದತ್ತ ಅವರನ್ನೊಳಗೊಂಡ ನ್ಯಾಯಪೀಠ, ಪರೀಕ್ಷೆ ಮುಂದೂ ಡದೇ ಇದ್ದರೆ ಎಷ್ಟು ಮಂದಿಗೆ ತೊಂದರೆಯಾಗಲಿದೆ ಎಂಬುದು ತಿಳಿಯಬೇಕಿದೆ ಎಂದು ಹೇಳಿತು.
ಎನ್‌ಬಿಇ ಪರವಾಗಿ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯ ಭಾಟಿ, ಪರೀಕ್ಷೆ ನಡೆಸಲು ತಾಂತ್ರಿಕ ಸಹಭಾಗಿತ್ವ ಪಡೆಯಲಾಗಿದೆ. ಹಾಗೂ ಇದಕ್ಕಾಗಿ ಎಲ್ಲಾ ರೀತಿಯ ತಯಾರಿ ನಡೆಸಲಾಗಿದೆ. ಪರೀಕ್ಷೆ ಮುಂದೂಡಿದರೆ ಹತ್ತಿರದಲ್ಲಿ ಯಾವುದೇ ದಿನಾಂಕಗಳು ಲಭ್ಯವಿಲ್ಲ. ಏಕೆಂದರೆ ಈ ಅವಧಿಯಲ್ಲಿ ತಾಂತ್ರಿಕ ಪಾಲುದಾರರು ಲಭ್ಯವಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court Verdict: ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ… ಆರೋಪಿ ಸಂಜಯ್ ರಾಯ್ ದೋಷಿ
Suffocation: ಚಳಿಗೆಂದು ಹಾಕಿದ ಬೆಂಕಿ… ಬೆಳಗಾಗುವಷ್ಟರಲ್ಲಿ ದಂಪತಿಯ ಜೀವವೇ ಹೋಗಿತ್ತು…
IMF; ಜಗತ್ತಿಗೆ ಆರ್ಥಿಕ ಹಿಂಜರಿತ ಉಂಟಾದರೂ, ಭಾರತಕ್ಕೆ ಅಪಾಯ ಇಲ್ಲ
Russia ಸೇನೆಯಲ್ಲಿದ್ದ 16 ಭಾರತೀಯರು ನಾಪತ್ತೆ, 12 ಜನ ಸಾವು: ಕೇಂದ್ರ
ಬಾಲ್ಯ ವಿವಾಹ ಕಾನೂನು ಪರಿಶೀಲನೆ: ಸುಪ್ರೀಂ ಅಸ್ತು
MUST WATCH
ಹೊಸ ಸೇರ್ಪಡೆ
ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್
Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ
Ban: ಏರ್ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್ ಬಳಕೆ ನಿಷೇಧ: ಪಾಲಿಕೆ ಆದೇಶ
ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು
EV: ಇವಿ ಬಳಕೆಗೆ ಉತ್ತೇಜನ: ದೇಶದಲ್ಲೇ ನಂಬರ್ 1 ಸ್ಥಾನ ಪಡೆದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.