ರಾಮ ಮಂದಿರ ನಿರ್ಮಾಣಕ್ಕೆ ಸುಗ್ರೀವಾಜ್ಞೆ ಸದ್ಯಕ್ಕಿಲ್ಲ: ಬಿಜೆಪಿ
Team Udayavani, Dec 3, 2018, 12:42 PM IST
ಕೋಲ್ಕತಾ/ಹೊಸದಿಲ್ಲಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸುಗ್ರೀವಾಜ್ಞೆ ಜಾರಿಗೆ ತರುವ ಬಗ್ಗೆ ಸದ್ಯಕ್ಕೆ ಚಿಂತನೆ ನಡೆಸುತ್ತಿಲ್ಲ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯ ವರ್ಗೀಯ ಹೇಳಿದ್ದಾರೆ.
ಅಯೋಧ್ಯೆಯಲ್ಲಿ ಮಂದಿರ ನಿರ್ಮಿಸುವ ತಾಕತ್ತು ಬಿಜೆಪಿ ಹೊರತುಪಡಿಸಿ ಬೇರಾರಿಗೂ ಇಲ್ಲ. ಮಂದಿರದ ವಿಚಾರವು ಬಿಜೆಪಿಗೆ ಒಳ್ಳೆಯದು ಮಾಡುವುದಕ್ಕಿಂತ ಕೆಟ್ಟದ್ದನ್ನೇ ಮಾಡಿದೆ ಎಂದು ಹೇಳಿದ್ದಾರೆ. ಸುಪ್ರೀಂಕೋರ್ಟ್ ಈ ಬಗ್ಗೆ ಶೀಘ್ರವೇ ವಿಚಾರಣೆ ನಡೆಸಿ ತೀರ್ಪು ನೀಡಬೇಕು. ಇದು ನಮ್ಮ ಒತ್ತಾಯ ಎಂದು ರವಿವಾರ ಕೋಲ್ಕತಾದಲ್ಲಿ “ಪಿಟಿಐ’ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.
ಒಂದು ವೇಳೆ ಜನರು ಹೆಚ್ಚಿನ ಸಂಖ್ಯೆಯಲ್ಲಿ ಮಂದಿರ ನಿರ್ಮಾಣದ ಬಗ್ಗೆ ಮಾತನಾಡಿದಲ್ಲಿ ಕೇಂದ್ರ ಸರಕಾರ ಬದಲಿ ಮಾರ್ಗದ ಬಗ್ಗೆ ಅಂದರೆ ಸುಗ್ರೀವಾಜ್ಞೆ ಬಗ್ಗೆ ಚಿಂತನೆ ನಡೆಸಬೇಕಾ ಗುತ್ತದೆ ಎಂದೂ ಹೇಳಿದ್ದಾರೆ. ಆದರೆ ಸದ್ಯ ಆ ಬಗ್ಗೆ ಚಿಂತನೆ ನಡೆಸಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.
ಯಹೀಂ ಬನೇಗಾ: ಇದೇ ವೇಳೆ, ಗೂಗಲ್ ಮ್ಯಾಪ್ನಲ್ಲಿ ಅಯೋಧ್ಯೆಯ ವಿವಾದಿತ ಜಾಗದ ಲೊಕೇಷನ್ ಸರ್ಚ್ ಕೊಟ್ಟರೆ, ಈ ಹಿಂದೆ “ರಾಮ ಜನ್ಮಭೂಮಿ’ ಎಂದು ಬರೆದಿದ್ದು ಕಾಣಸಿಗುತ್ತಿತ್ತು. ಆದರೆ, ಈಗ ಅಲ್ಲಿ “ಮಂದಿರ್ ಯಹೀಂ ಬನೇಗಾ’ (ಮಂದಿರ ಇಲ್ಲೇ ನಿರ್ಮಾಣವಾಗುತ್ತೆ) ಎಂಬ ಬರಹ ಪ್ರತ್ಯಕ್ಷವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್ ಭಾಗ್ವತ್
Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
ಹೊಸ ವರ್ಷಾಚರಣೆಗೆ ಡ್ರಗ್ಸ್ ಪಾರ್ಟಿ: ಪೊಲೀಸ್ ನಿಗಾ
Mandya:ಹಲವು ರೋಗ ನಿವಾರಕ ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.